BBK8 Finale: 100 ದಿನ ಪೂರೈಸಿದ ಕನ್ನಡ ಬಿಗ್​ ಬಾಸ್​ ಸೀಸನ್​ 8; ಫಿನಾಲೆ ನಡೆಯೋದು ಯಾವಾಗ?

ಫೆಬ್ರವರಿ 28ರಂದು ಬಿಗ್​ ಬಾಸ್​ ಸೀಸನ್​ 8 ಆರಂಭಗೊಂಡಿತ್ತು. 17 ಸ್ಪರ್ಧಿಗಳು ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು. ‘ಸೀಸನ್​ 8’ 71 ದಿನ ಪೂರೈಸಿರುವಾಗಲೇ ಕೊವಿಡ್​ ಕಾಣಿಸಿಕೊಂಡಿತ್ತು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡ ಘೋಷಣೆ ಮಾಡಿತ್ತು.

BBK8 Finale: 100 ದಿನ ಪೂರೈಸಿದ ಕನ್ನಡ ಬಿಗ್​ ಬಾಸ್​ ಸೀಸನ್​ 8; ಫಿನಾಲೆ ನಡೆಯೋದು ಯಾವಾಗ?
ಕಿಚ್ಚ ಸುದೀಪ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 21, 2021 | 3:25 PM

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ 100 ದಿನಗಳನ್ನು ಪೂರೈಸಿದೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದ ಚಕ್ರವರ್ತಿ ಚಂದ್ರಚೂಡ್​ ಹೊರತುಪಡಿಸಿ ಉಳಿದ 8 ಸ್ಪರ್ಧಿಗಳು ದೊಡ್ಮನೆಯಲ್ಲಿ 100 ದಿನ ಕಳೆದಿದ್ದಾರೆ. 100ನೇ ದಿನಕ್ಕೆ ವಿಶೇಷ ಕೇಕ್​ ಕಳುಹಿಸಲಾಗಿದೆ. ಈ ಮಧ್ಯೆ ಫಿನಾಲೆಗೆ ಕೌಂಟ್​ಡೌನ್​ ಶುರುವಾಗಿದೆ.

ಫೆಬ್ರವರಿ 28ರಂದು ಬಿಗ್​ ಬಾಸ್​ ಸೀಸನ್​ 8 ಆರಂಭಗೊಂಡಿತ್ತು. 17 ಸ್ಪರ್ಧಿಗಳು ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು. ‘ಸೀಸನ್​ 8’ 71 ದಿನ ಪೂರೈಸಿರುವಾಗಲೇ ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡಿತ್ತು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡ ಘೋಷಣೆ ಮಾಡಿತ್ತು. ಹೀಗಾಗಿ, ಮೇ 8ರಂದು ಬಿಗ್​ ಬಾಸ್​ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ನಂತರ ಜೂನ್​ 23ರಂದು ಬಿಗ್​ ಬಾಸ್​ ಮತ್ತೆ ಆರಂಭಗೊಂಡಿದೆ. ಈ ಮೂಲಕ ಇಂದಿಗೆ ಬಿಗ್​ ಬಾಸ್​ 100 ದಿನಗಳನ್ನು ಪೂರೈಸಿದೆ. ಈ ವಿಶೇಷ ಖುಷಿಗೆ ಬಿಗ್​ ಬಾಸ್​ ಮನೆ ಮಂದಿಗೆ ಕೇಕ್​ ಒಂದನ್ನು ಕಳುಹಿಸಿದ್ದಾರೆ. ಈ ಕೇಕ್​ ನೋಡಿ ಮನೆ ಮಂದಿ ಸಾಕಷ್ಟು ಖುಷಿಯಾಗಿದ್ದಾರೆ.

ಸದ್ಯ, ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಕೆ.ಪಿ, ಮಂಜು ಪಾವಗಡ, ವೈಷ್ಣವಿ, ಶಮಂತ್​ ಬ್ರೋ ಗೌಡ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​, ಚಕ್ರವರ್ತಿ ಚಂದ್ರಚೂಡ್​, ಶುಭಾ ಪೂಂಜಾ ಹಾಗೂ ಪ್ರಶಾಂತ್​ ಸಂಬರಗಿ ಇದ್ದಾರೆ. ಇವರ ಪೈಕಿ ಚಕ್ರವರ್ತಿ ಚಂದ್ರಚೂಡ್​, ಶುಭಾ ಪೂಂಜಾ, ಪ್ರಶಾಂತ್ ಹಾಗೂ ದಿವ್ಯಾ ಉರುಡುಗ ನಾಮಿನೇಟ್​ ಆಗಿದ್ದಾರೆ.

ಈ ನಾಲ್ವರಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರ ಹೋಗುತ್ತಾರೆ. ನಂತರ ಉಳಿಯೋದು 8 ಮಂದಿ ಮಾತ್ರ. ಡಬಲ್​ ನಾಮಿನೇಷನ್​ ಕೂಡ ಶೀಘ್ರದಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ. ಬಿಗ್​ ಬಾಸ್ ಘೋಷಣೆ ಮಾಡಿದಂತೆ ಇನ್ನು ಮೂರು ವಾರಗಳಲ್ಲಿ ಫಿನಾಲೆ ನಡೆಯಲಿದೆ. ಆಗಸ್ಟ್​ 8 ಅಥವಾ 15ರಂದು ಬಿಗ್​ ಬಾಸ್​ ಫಿನಾಲೆ ನಡೆಯಬಹುದು. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಇದನ್ನೂ ಓದಿ: ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ; ಬಿಗ್​ ಬಾಸ್​ ನೀಡ್ತೀರೋ ಶಿಕ್ಷೆ ಏನು?

ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ತಾಳ್ಮೆ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ

Published On - 3:12 pm, Wed, 21 July 21

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ