BBK 9: ‘ರೂಪೇಶ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 9ರ ವಿನ್ನರ್’; ಏನಿದು ಸಮಾಚಾರ?

ಇತ್ತೀಚೆಗೆ ಕಲರ್ಸ್ ಕನ್ನಡ ವಾಹಿನಿಟಿ ಟಿವಿ ಸೀಸನ್​ನ ಪ್ರೋಮೋ ಹಂಚಿಕೊಂಡಿದೆ. ಈ ಪ್ರೋಮಗೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ರೂಪೇಶ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್​ 9’ರ ವಿನ್ನರ್ ಎಂದು ಅಭಿಮಾನಿಗಳೇ ಘೋಷಣೆ ಮಾಡಿದ್ದಾರೆ.

BBK 9: ‘ರೂಪೇಶ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 9ರ ವಿನ್ನರ್’; ಏನಿದು ಸಮಾಚಾರ?
ರೂಪೇಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 19, 2022 | 5:15 PM

‘ಬಿಗ್ ಬಾಸ್​ ಒಟಿಟಿ’ (Bigg Boss OTT) ಸೀಸನ್ ಪೂರ್ಣಗೊಂಡಿದೆ. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಸೆಪ್ಟೆಂಬರ್ 24ರಿಂದ ಹೊಸ ಸೀಸನ್ ಶುರುವಾಗಲಿದೆ. ಅದಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆಯುತ್ತಿದೆ. ಒಟಿಟಿ ಸೀಸನ್​​ನಿಂದ ನಾಲ್ಕು ಮಂದಿ, ಹಳೆ ಸೀಸನ್​ನ ಐದು ಮಂದಿ ಹಾಗೂ ಹೊಸದಾಗಿ 9 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಕಾಲಿಡಲಿದ್ದಾರೆ. ಮನೆಗೆ ಹೋಗುವ ಒಂದಷ್ಟು ಹೆಸರು ಈಗಾಗಲೇ ವೀಕ್ಷಕರಿಗೆ ತಿಳಿದಿದೆ. ಹೊಸದಾಗಿ ಸೇರ್ಪಡೆ ಆಗುವ ಕಂಟೆಸ್ಟೆಂಟ್​​ಗಳು ಯಾರು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಆ ವಿಚಾರ ಸೆಪ್ಟೆಂಬರ್ 24ರಂದು ರಿವೀಲ್ ಆಗಲಿದೆ. ಅದಕ್ಕೂ ಮೊದಲೇ ಸೋಶಿಯಲ್ ಮೀಡಿಯಾದಲ್ಲಿ ರೂಪೇಶ್ ಶೆಟ್ಟಿ (Roopesh Shetty) ಬಗ್ಗೆ ಪಾಸಿಟಿವ್ ಟಾಕ್ ಶುರುವಾಗಿದೆ.

‘ಬಿಗ್ ಬಾಸ್ ಒಟಿಟಿ’ಯಲ್ಲಿ ರೂಪೇಶ್ ಅವರು ಸಾಕಷ್ಟು ಗಮನ ಸೆಳೆದರು. ಅವರು ಟಾಪರ್ ಆಗಿ ಹೊರಹೊಮ್ಮಿ, 5 ಲಕ್ಷ ರೂಪಾಯಿ ಬಹುಮಾನ ಗಿಟ್ಟಿಸಿಕೊಂಡರು. ಈಗ ಅವರು ಟಿವಿ ಸೀಸನ್​ಗೆ ಹೋಗೋಕೆ ರೆಡಿ ಆಗುತ್ತಿದ್ದಾರೆ. ಒಟಿಟಿ ಸೀಸನ್​ನಿಂದ ಟಿವಿ ಸೀಸನ್​ಗೆ ಒಂದು ವಾರ ಗ್ಯಾಪ್ ನೀಡಲಾಗುತ್ತಿದೆ. ಅದಕ್ಕೂ ಮೊದಲು ಸೋಶಿಯಲ್ ಮೀಡಿಯಾದಲ್ಲಿ ರೂಪೇಶ್​ ಪರವಾಗಿ ಫ್ಯಾನ್ಸ್ ಮಾತನಾಡುತ್ತಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ‘ಒಂದು ದೊಡ್ಡ ಸಿನಿಮಾ ಮಾಡಿದೀನಿ, ಅದು ಇನ್ನೂ ರಿಲೀಸ್ ಆಗಿಲ್ಲ’: ಕೌತುಕ ಹೆಚ್ಚಿಸಿದ ಸೋನು ಗೌಡ
Image
ನೀಲಕುರಂಜಿ ಹೂಗಳ ಸೌಂದರ್ಯಕ್ಕೆ ಮಾರು ಹೋದ ಬಿಗ್ ಬಾಸ್ ಬೆಡಗಿ ದಿವ್ಯಾ ಉರುಡುಗ
Image
‘ಹಿಂಗೆ ಸಿನಿಮಾ ಮಾಡಿದ್ರೆ ನಿರ್ಮಾಪಕರು ನೇಣು ಹಾಕಿಕೊಳ್ತಾರೆ’: ಸುದೀಪ್​ ಹೇಳಿದ್ದು ಯಾರ ಬಗ್ಗೆ?
Image
Aryavardhan Guruji: ಜಯಶ್ರೀ ಮಾಂಗಲ್ಯ ಸರಕ್ಕೆ ಆರ್ಯವರ್ಧನ್ ಸ್ಪಾನ್ಸರ್​; ಇದು ಜೋಕ್ ಅಲ್ಲ

ಇತ್ತೀಚೆಗೆ ಕಲರ್ಸ್ ಕನ್ನಡ ವಾಹಿನಿಟಿ ಟಿವಿ ಸೀಸನ್​ನ ಪ್ರೋಮೋ ಹಂಚಿಕೊಂಡಿದೆ. ಈ ಪ್ರೋಮಗೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ರೂಪೇಶ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್​ 9’ರ ವಿನ್ನರ್ ಎಂದು ಅಭಿಮಾನಿಗಳೇ ಘೋಷಣೆ ಮಾಡಿದ್ದಾರೆ. ಇದು ರೂಪೇಶ್ ಶೆಟ್ಟಿ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಟಿವಿ ಆವೃತ್ತಿಯಲ್ಲಿ ಅವರು ಯಾವ ರೀತಿಯಲ್ಲಿ ಆಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರೂಪೇಶ್ ಶೆಟ್ಟಿ ಅವರು ಅನೇಕರಿಗೆ ಇಷ್ಟವಾಗಿದ್ದಾರೆ. ಅವರ ವ್ಯಕ್ತಿತ್ವ, ಎಂಟರ್​​ಟೇನ್​ಮೆಂಟ್ ಮಾಡುವ ರೀತಿ, ವಿವಾದಗಳಿಂದ ದೂರವೇ ಇರುವ ಅವರ ಗುಣ ಸಾಕಷ್ಟು ಇಷ್ಟವಾಗುತ್ತದೆ. ಸಾನ್ಯಾ ಅಯ್ಯರ್ ಹಾಗೂ ರೂಪೇಶ್ ಶೆಟ್ಟಿ ಅವರ ಕೆಮೆಸ್ಟ್ರಿ ಕಾರಣದಿಂದಲೂ ಅವರು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಬಂತು ಕಿಸ್​ ಶಬ್ದ; ಕೊಟ್ಟಿದ್ದು ಯಾರು, ತೆಗೆದುಕೊಂಡಿದ್ದು ಯಾರು?

ಬಿಗ್ ಬಾಸ್ ಟಿವಿ ಸೀಸನ್​ಗೆ ಒಟಿಟಿಯಿಂದ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಸಾನ್ಯಾ ಅಯ್ಯರ್ ಹಾಗೂ ಆರ್ಯವರ್ಧನ್ ಗುರೂಜಿ ಅವರು ಆಯ್ಕೆ ಆಗಿದ್ದಾರೆ. ಹಳೆಯ ಸೀಸನ್​ನಿಂದ ಪ್ರಶಾಂತ್ ಸಂಬರಗಿ, ಅನುಪಮಾ ಗೌಡ, ದೀಪಿಕಾ ದಾಸ್ ಸೇರಿ ಐವರು ಎಂಟ್ರಿ ಕೊಡುತ್ತಿದ್ದಾರೆ. ಇದರ ಜತೆಗೆ ಹೊಸದಾಗಿ 9 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರಲಿದ್ದಾರೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ