​BBK9 ಆರಂಭ: ಮನೆ ಒಳಗೆ ಹೋದ ಹಳೆಯ ಸ್ಪರ್ಧಿಗಳು ಇವರೇ: ಅರವಿಂದ್​​ಗಿಲ್ಲ ಅವಕಾಶ

ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇರಲಿದ್ದಾರೆ. ಆ ಸಾಲಿನಲ್ಲಿ ಮನೆ ಸೇರಿದ ಸ್ಪರ್ಧಿಗಳು ಇವರೇ.

​BBK9 ಆರಂಭ: ಮನೆ ಒಳಗೆ ಹೋದ ಹಳೆಯ ಸ್ಪರ್ಧಿಗಳು ಇವರೇ: ಅರವಿಂದ್​​ಗಿಲ್ಲ ಅವಕಾಶ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 24, 2022 | 6:35 PM

‘ಬಿಗ್ ಬಾಸ್ ಕನ್ನಡ ಸೀಸನ್ 9’ (Bigg Boss Kannada Season 9) ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ (Bigg Boss)​ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇರಲಿದ್ದಾರೆ. ಆ ಸಾಲಿನಲ್ಲಿ ಮನೆ ಸೇರಿದ ಸ್ಪರ್ಧಿಗಳು ಇವರೇ.

ಅರುಣ್ ಸಾಗರ್:

ಅರುಣ್ ಸಾಗರ್ ಅವರು ಬಿಗ್ ಬಾಸ್​ನ ಮೊದಲ ಸ್ಪರ್ಧಿಯಾಗಿ ಎಂಟ್ರಿ ಪಡೆದಿದ್ದಾರೆ. ಬಿಗ್ ಬಾಸ್ ಸೀಸನ್​ 1ರ ಸ್ಪರ್ಧಿ ಆಗಿದ್ದರು. ಅವರು ಈ ಶೋನಲ್ಲಿ ರನ್ನರ್ ಅಪ್​ ಆಗಿ ಹೊರಹೊಮ್ಮಿದ್ದರು. ಅವರು ನಟನೆ ಜತೆಗೆ ಕಲಾ ನಿರ್ದೇಶಕನಾಗಿಯೂ ಗುರುತಿಸಿಕೊಂಡಿದ್ದಾರೆ. ಅರುಣ್ ಅವರು ಸಾಕಷ್ಟು ಮನರಂಜನೆ ನೀಡುತ್ತಾರೆ. ಈ ಕಾರಣಕ್ಕೆ ಅವರಿಗೆ ಅವಕಾಶ ನೀಡಲಾಗಿದೆ.

ಅನುಪಮಾ ಗೌಡ:

ಅನುಪಮಾ ಗೌಡ ಅವರು ಈ ಮೊದಲು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದರು. ಈ ಮೂಲಕ ಅವರ ಖ್ಯಾತಿ ಹೆಚ್ಚಿತ್ತು. ನಟಿಯಾಗಿ, ನಿರೂಪಕಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಿಂಬಾಲಕರು ಇದ್ದಾರೆ. ಈ ಕಾರಣಕ್ಕೆ ಅವರ ಎಂಟ್ರಿ ಸಾಕಷ್ಟು ಕುತೂಹಲ ಮೂಡಿಸಿದೆ.

ದಿವ್ಯಾ ಉರುಡುಗ:

ದಿವ್ಯಾ ಉರುಡುಗ ಅವರು ಸೀಸನ್ 8ರಲ್ಲಿ ಕಾಣಿಸಿಕೊಂಡಿದ್ದರು. ಅರವಿಂದ್ ಕೆಪಿ ಜತೆಗಿನ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟ ಆಗಿತ್ತು. ಈ ಬಾರಿ ಅವರು ಮತ್ತೆ ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ. ಕಳೆದ ಬಾರಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಬಾರಿ ಅವರು ವಿನ್ ಆಗಲೇಬೇಕು ಎಂಬ ಹಂಬಲದೊಂದಿಗೆ ಬಂದಿದ್ದಾರೆ. ಅರವಿಂದ್ ಕೆಪಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಅವರು ಈ ಬಾರಿ ದೊಡ್ಮನೆಗೆ ಬರುತ್ತಿಲ್ಲ.

ಪ್ರಶಾಂತ್ ಸಂಬರ್ಗಿ: ಎಲ್ಲರನ್ನೂ ವಿರೋಧಿಸಿ ಗಮನ ಸೆಳೆದಿದ್ದ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಎಲ್ಲರನ್ನೂ ವಿರೋಧಿಸಿ ಕಳೆದ ಬಾರಿ ಗಮನ ಸೆಳೆದಿದ್ದರು. ಈ ಬಾರಿಯೂ ಅವರು ತಮ್ಮ ಖಡಕ್ ವ್ಯಕ್ತಿತ್ವದ ಮೂಲಕ ಗಮನ ಸೆಳೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ದೀಪಿಕಾ ದಾಸ್:

ದೀಪಿಕಾ ದಾಸ್ ಅವರು ಬಿಗ್ ಬಾಸ್ ಮನೆಗೆ ಈ ಮೊದಲೇ ಎಂಟ್ರಿ ಕೊಟ್ಟಿದ್ದರು. ಅವರು ಈ ಬಾರಿಯೂ ಮತ್ತೆ ಬಂದಿದ್ದಾರೆ. ಶೈನ್ ಶೆಟ್ಟಿ ಜತೆಗಿನ ಫ್ರೆಂಡ್​​ಶಿಪ್​ನಿಂದ ಅವರು ಗಮನ ಸೆಳೆದಿದ್ದರು. ಅವರು ಯಾವ ರೀತಿ ಈ ಬಾರಿ ಆಡುತ್ತಾರೆ ಎಂಬುದು ಸದ್ಯದ ಕುತೂಹಲ.

Published On - 6:18 pm, Sat, 24 September 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ