BBK 9 Finale: ಬಿಗ್ ಬಾಸ್ ಫಿನಾಲೆಯಲ್ಲಿದೆ ಸಿಕ್ಕಾಪಟ್ಟೆ ಮನರಂಜನಾ ಕಾರ್ಯಕ್ರಮ; ಇಲ್ಲಿದೆ ವಿವರ

‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ಹೇಗಿರಲಿದೆ ಎನ್ನುವುದರ ಝಲಕ್​ ಅನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಬಿಗ್ ಬಾಸ್ ಸೀಸನ್ 7ರ ವಿನ್ನರ್ ಶೈನ್ ಶೆಟ್ಟಿ, ನಟಿ ಸಂಜನಾ ಆನಂದ್ ಮೊದಲಾದವರು ಸ್ಟೆಪ್ ಹಾಕಿದ್ದಾರೆ.

BBK 9 Finale: ಬಿಗ್ ಬಾಸ್ ಫಿನಾಲೆಯಲ್ಲಿದೆ ಸಿಕ್ಕಾಪಟ್ಟೆ ಮನರಂಜನಾ ಕಾರ್ಯಕ್ರಮ; ಇಲ್ಲಿದೆ ವಿವರ
ಶೈನ್ ಶೆಟ್ಟಿ-ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 30, 2022 | 3:09 PM

‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆಗೆ (BBK 9 Finale) ಕೌಂಟ್​​ಡೌನ್ ಶುರುವಾಗಿದೆ. ಇಂದು (ಡಿಸೆಂಬರ್ 30) ಹಾಗೂ ನಾಳೆ (ಡಿಸೆಂಬರ್ 31) ರಾತ್ರಿ 7.30ಕ್ಕೆ ಫಿನಾಲೆ ನಡೆಯಲಿದೆ. ಬಿಗ್ ಬಾಸ್​​ನ (Bigg Boss) ದೀರ್ಘ ಪಯಣ ಈಗ ಪೂರ್ಣಗೊಳ್ಳುತ್ತಿದೆ. ಸ್ಪರ್ಧಿಗಳಿಗೆ ತಮ್ಮ ತಮ್ಮ ಮನೆ ಸೇರುವ ಖುಷಿ ಹಾಗೂ ದೊಡ್ಮನೆ ಬಿಟ್ಟು ಹೋಗಬೇಕಲ್ಲ ಎಂಬ ದುಃಖ ಎರಡೂ ಇದೆ. ಈ ಬಾರಿ ಫಿನಾಲೆ ಅದ್ದೂರಿಯಾಗಿ ನಡೆಯಲಿದೆ. ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ.

‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ಹೇಗಿರಲಿದೆ ಎನ್ನುವುದರ ಝಲಕ್​ ಅನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಬಿಗ್ ಬಾಸ್ ಸೀಸನ್ 7ರ ವಿನ್ನರ್ ಶೈನ್ ಶೆಟ್ಟಿ, ನಟಿ ಸಂಜನಾ ಆನಂದ್ ಮೊದಲಾದವರು ಸ್ಟೆಪ್ ಹಾಕಿದ್ದಾರೆ. ಇವರ ಡ್ಯಾನ್ಸ್​ನಿಂದ ಫಿನಾಲೆ ವೇದಿಕೆಯ ರಂಗು ಹೆಚ್ಚಿದೆ. ಇಂದು ಹಾಗೂ ನಾಳೆ ಎರಡೂ ದಿನ ಮನರಂಜನಾ ಕಾರ್ಯಕ್ರಮಗಳು ಇರಲಿವೆ.

ಸ್ಪರ್ಧಿಗಳ ಸಮಾಗಮ

ಈ ಬಾರಿ ಒಟ್ಟೂ 18 ಸ್ಪರ್ಧಿಗಳು ಬಿಗ್ ಬಾಸ್​ನಲ್ಲಿ ಪಾಲ್ಗೊಂಡಿದ್ದರು. ಆ ಪೈಕಿ 13 ಸ್ಪರ್ಧಿಗಳು ಈಗಾಗಲೇ ಎಲಿಮಿನೇಟ್ ಆಗಿದ್ದಾರೆ. ಆ ಸ್ಪರ್ಧಿಗಳು ಬಿಗ್ ಬಾಸ್ ಫಿನಾಲೆಯಲ್ಲಿ ಭಾಗಿ ಆಗುತ್ತಿದ್ದಾರೆ. ಹೊಸ ಸ್ಪರ್ಧಿಗಳ ಕುರಿತಂತೆ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಕೆಲವರು ಡ್ಯಾನ್ಸ್ ಕೂಡ ಮಾಡಲಿದ್ದಾರೆ ಅನ್ನೋದು ವಿಶೇಷ.

ಇದನ್ನೂ ಓದಿ
Image
Roopesh Rajanna: ಎಲ್ಲರ ಎದುರು ರೂಪೇಶ್ ರಾಜಣ್ಣಗೆ ಶೇಪ್​ಔಟ್ ಮಾಡಿದ ಪತ್ನಿ
Image
ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು
Image
ಅರವಿಂದ್ ಬಳಿಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ವಾಸುಕಿ ವೈಭವ್​; ಸ್ಪರ್ಧಿಗಳಿಗೆ ಸಿಕ್ಕಾಪಟ್ಟೆ ಸರ್​ಪ್ರೈಸ್​
Image
Roopesh Shetty: ‘ಸಾನ್ಯಾ ಐಯ್ಯರ್ ಅಂದ್ರೆ ಯಾರು?’ ದೀಪಿಕಾ ದಾಸ್​​ಗೆ ಪ್ರಶ್ನೆ ಮಾಡಿದ ರೂಪೇಶ್ ಶೆಟ್ಟಿ

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು

ದೊಡ್ಮನೆ ಒಳಗೆ ಸುದೀಪ್​?

ಪ್ರತಿ ಬಾರಿ ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಕಿಚ್ಚ ಸುದೀಪ್ ಅವರು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ. ಕೊನೆಯದಾಗಿ ಉಳಿದುಕೊಳ್ಳುವ ಎರಡು ಸ್ಪರ್ಧಿಗಳನ್ನು ಅವರು ವೇದಿಕೆಗೆ ಕರೆದುಕೊಂಡು ಬರುತ್ತಾರೆ. ಪ್ರತಿ ಬಾರಿ ಇದು ನಡೆದುಕೊಂಡು ಬಂದೇ ಇದೆ. ಈ ಬಾರಿಯೂ ಸುದೀಪ್ ಅವರು ದೊಡ್ಮನೆ ಒಳಗೆ ಕಾಲಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇಂದು ನಡೆಯಲಿದೆ ಎಲಿಮಿನೇಷನ್​

ಸದ್ಯ ದೊಡ್ಮನೆಯಲ್ಲಿ ಐವರು ಸ್ಪರ್ಧಿಗಳಿದ್ದಾರೆ. ಈ ಪೈಕಿ ಇಂದು ಇಬ್ಬರನ್ನು ಎಲಿಮಿನೇಟ್ ಮಾಡುವ ಸಾಧ್ಯತೆ ಇದೆ. ಮೂವರು ಸ್ಪರ್ಧಿಗಳು ಮುಂದಿನ ಎಪಿಸೋಡ್​​ವರೆಗೆ ಉಳಿದುಕೊಳ್ಳಲಿದ್ದಾರೆ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದಿವ್ಯಾ ಉರುಡುಗ, ದೀಪಿಕಾ ದಾಸ್ ತಮ್ಮ ತಮ್ಮ ಸ್ಟ್ರೆಂತ್ ಏನು ಎಂಬುದನ್ನು ತೋರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್