AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್ ಬಾಸ್ ವೈಲ್ಡ್ ಕಾರ್ಡ್​ ಎಂಟ್ರಿ ಬಗ್ಗೆ ವೀಕ್ಷಕರಿಗೆ ಮೂಡಿದೆ ಅನುಮಾನ

ಸಾಮಾನ್ಯವಾಗಿ ಬಿಗ್ ಬಾಸ್​ ಪ್ರತಿ ಸೀಸನ್​ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಇದ್ದೇ ಇರುತ್ತದೆ. ಕಳೆದ ಬಾರಿ ಒಂದೇ ವಾರ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಎಂಟ್ರಿ ಪಡೆದಿದ್ದರು.

ಕನ್ನಡ ಬಿಗ್ ಬಾಸ್ ವೈಲ್ಡ್ ಕಾರ್ಡ್​ ಎಂಟ್ರಿ ಬಗ್ಗೆ ವೀಕ್ಷಕರಿಗೆ ಮೂಡಿದೆ ಅನುಮಾನ
ಸುದೀಪ್
TV9 Web
| Edited By: |

Updated on: Nov 21, 2022 | 2:41 PM

Share

ಬಿಗ್ ಬಾಸ್ (Bigg Boss) ಮನೆಗೆ ವೈಲ್ಡ್ ಕಾರ್ಡ್​ ಮೂಲಕ ಯಾರನ್ನಾದರೂ ಕರೆ ತರುವುದು ವಾಡಿಕೆ. ಸದ್ಯ, ‘ಬಿಗ್ ಬಾಸ್ ಕನ್ನಡ ಸೀಸನ್ 9’ 57 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಈಗಾಗಲೇ ಅರ್ಧ ಶೋ ಪೂರ್ಣಗೊಂಡಿದೆ. ಇನ್ನು ಒಂದೂವರೆ ತಿಂಗಳಲ್ಲಿ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಸದ್ಯ ಮನೆಯಲ್ಲಿ 11 ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ನಡೆಯುತ್ತಿದೆ. ಸ್ಪರ್ಧಿಗಳು ಕಡಿಮೆ ಆದಂತೆಲ್ಲ ಆಟ ಕಠಿಣ ಆಗುತ್ತಿದೆ. ಆದಾಗ್ಯೂ, ವೈಲ್ಡ್ ಕಾರ್ಡ್​​ನ ಯಾವುದೇ ಸೂಚನೆ ಇಲ್ಲ. ಈಗ ಬಿಗ್ ಬಾಸ್​ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಬಗ್ಗೆ ವೀಕ್ಷಕರಿಗೆ ಕುತೂಹಲ ಮೂಡಿದೆ.

ಸಾಮಾನ್ಯವಾಗಿ ಬಿಗ್ ಬಾಸ್​ ಪ್ರತಿ ಸೀಸನ್​ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಇದ್ದೇ ಇರುತ್ತದೆ. ಕಳೆದ ಬಾರಿ ಒಂದೇ ವಾರ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಎಂಟ್ರಿ ಪಡೆದಿದ್ದರು. ಈ ವರ್ಷ ಅರ್ಧ ಸೀಸನ್ ಮುಗಿದರೂ ಯಾರೊಬ್ಬರೂ ಬಿಗ್ ಬಾಸ್ ಮನೆ ಒಳಗೆ ಬಂದಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ವೀಕ್ಷಕರು ಕಾಡುತ್ತಿದೆ.

ಪ್ರತಿ ಸೀಸನ್​​ನಲ್ಲಿ ಸಾಮಾನ್ಯವಾಗಿ 16 ಸ್ಪರ್ಧಿಗಳು ಮನೆ ಒಳಗೆ ಹೋಗುತ್ತಾರೆ. ಆ ಪೈಕಿ ಎಲ್ಲರೂ ಹೊಸಬರೇ ಆಗಿರುತ್ತಿದ್ದರು. ಆದರೆ, ಈ ಬಾರಿ 18 ಸ್ಪರ್ಧಿಗಳು ಮನೆ ಒಳಗೆ ಎಂಟ್ರಿ ಪಡೆದಿದ್ದರು. ಈ ಪೈಕಿ 9 ಮಂದಿ ಮಾತ್ರ ಹೊಸಬರಾಗಿದ್ದರು. ಇನ್ನು, 9 ಮಂದಿ ಹಳೆ ಸ್ಪರ್ಧಿಗಳೇ ಇದ್ದರು. ಈ ಕಾರಣಕ್ಕೆ ಈ ವರ್ಷ ಬಿಗ್ ಬಾಸ್ ಮನೆಯಲ್ಲಿ ಯಾವುದೇ ವೈಲ್ಡ್ ಕಾರ್ಡ್ ಎಂಟ್ರಿ ಇಲ್ಲದೆ ಇರಬಹುದು ಎಂದು ವೀಕ್ಷಕರು ಊಹಿಸುತ್ತಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಇದನ್ನೂ ಓದಿ: Deepika Das: ಬಿಗ್​ ಬಾಸ್​ನಿಂದ ದೀಪಿಕಾ ದಾಸ್​ ಎಲಿಮಿನೇಟ್​; 2ನೇ ಚಾನ್ಸ್​ನಲ್ಲೂ ಮುಗ್ಗರಿಸಿದ ಸೀರಿಯಲ್​ ನಟಿ

ರೂಪೇಶ್​ ರಾಜಣ್ಣ, ಪ್ರಶಾಂತ್​ ಸಂಬರ್ಗಿ, ಅರುಣ್​ ಸಾಗರ್, ದಿವ್ಯಾ ಉರುಡುಗ, ವಿನೋದ್​ ಗೊಬ್ಬರಗಾಲ, ರೂಪೇಶ್​ ರಾಜಣ್ಣ, ಆರ್ಯವರ್ಧನ್​ ಗುರೂಜಿ, ರಾಕೇಶ್​ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ಕಾವ್ಯಾ ಗೌಡ ಸದ್ಯ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಒಂದೊಮ್ಮೆ ವೈಲ್ಡ್ ಕಾರ್ಡ್ ಮೂಲಕ ಯಾರಾದರೂ ಎಂಟ್ರಿ ಪಡೆದರೆ ಆಟದ ಮಜ ಮತ್ತಷ್ಟು ಹೆಚ್ಚಲಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್