ಭರ್ಜರಿ ಟಿಆರ್ಪಿ ಪಡೆದ ‘ಭಾಗ್ಯಲಕ್ಷ್ಮೀ’; ಬಿಗ್ ಬಾಸ್ ಟಿಆರ್ಪಿ ಎಷ್ಟು?
Kannada Serials TRP: ಬಿಗ್ ಬಾಸ್ ಟಿಆರ್ಪಿಯಲ್ಲಿ ಭರ್ಜರಿ ಏರಿಕೆ ಕಂಡಿದೆ. ಶನಿವಾರದ ಎಪಿಸೋಡ್ನಲ್ಲಿ 9.4 ಟಿವಿಆರ್ ಸಿಕ್ಕಿದೆ. ಭಾನುವಾರದ ಎಪಿಸೋಡ್ಗೆ 9 ಟಿವಿಆರ್ ಸಿಕ್ಕಿದೆ. ಸೋಮವಾರದಿಂದ ಶುಕ್ರವಾರದವರೆಗೆ ಈ ಶೋ 7.2 ಟಿಆರ್ಪಿ ಪಡೆದಿದೆ.
ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ (Bhagyalakshmi Serial) ಪ್ರೇಕ್ಷಕರಿಗೆ ಇಷ್ಟ ಆಗುತ್ತಿದೆ. ಹಲವು ಟ್ವಿಸ್ಟ್ಗಳನ್ನು ಪಡೆದು ಈ ಧಾರಾವಾಹಿ ಮುನ್ನುಗ್ಗುತ್ತಿದೆ. ಈಗ ಧಾರಾವಾಹಿಯ ಟಿಆರ್ಪಿಯಲ್ಲಿ ಏರಿಕೆ ಆಗಿದೆ. ಆರು ಅಥವಾ ಏಳನೇ ಸ್ಥಾನದಲ್ಲಿ ಇರುತ್ತಿದ್ದ ಈ ಧಾರಾವಾಹಿಗೆ ಈಗ ಭರ್ಜರಿ ಟಿಆರ್ಪಿ ಸಿಕ್ಕಿದೆ. ಈ ಕಾರಣದಿಂದ ಧಾರಾವಾಹಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಎನ್ನುವ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್
ಬಿಗ್ ಬಾಸ್ ಟಿಆರ್ಪಿಯಲ್ಲಿ ಭರ್ಜರಿ ಏರಿಕೆ ಕಂಡಿದೆ. ಶನಿವಾರದ ಎಪಿಸೋಡ್ನಲ್ಲಿ 9.4 ಟಿವಿಆರ್ ಸಿಕ್ಕಿದೆ. ಭಾನುವಾರದ ಎಪಿಸೋಡ್ಗೆ 9 ಟಿವಿಆರ್ ಸಿಕ್ಕಿದೆ. ಸೋಮವಾರದಿಂದ ಶುಕ್ರವಾರದವರೆಗೆ ಈ ಶೋ 7.2 ಟಿಆರ್ಪಿ ಪಡೆದಿದೆ. ಬಿಗ್ ಬಾಸ್ ಭರ್ಜರಿ ಫೈಟ್ ನಡೆದಿತ್ತು. ಸಂಗೀತಾ ಕಣ್ಣಿಗೆ ಹಾನಿ ಆಗಿತ್ತು. ಆ ವಾರದ ಟಿಆರ್ಪಿ ಇದಾಗಿದೆ.
ಪುಟ್ಟಕ್ಕನ ಮಕ್ಕಳು
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಲವು ತಿಂಗಳಿಂದ ಮೊದಲ ಸ್ಥಾನದಲ್ಲಿ ಮುನ್ನಡೆಯುತ್ತಿದೆ. ಈ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಬಾರಿ ಈ ಧಾರಾವಾಹಿಯ ಟಿಆರ್ಪಿ ಎರಡಂಕಿಯಲ್ಲಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.
ಭಾಗ್ಯಲಕ್ಷ್ಮೀ
ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ವೀಕ್ಷಕರಿಂದ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ಸುಷ್ಮಾ ರಾವ್, ಸುದರ್ಶನ್, ಸುಷ್ಮಾ ನಾಣಯ್ಯ ಮೊದಲಾದವರು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ವೀಕ್ಷಕರಿಗೆ ಈ ಧಾರಾವಾಹಿಯ ಕಥೆ ಇಷ್ಟ ಆಗಿದೆ.
ಗಟ್ಟಿಮೇಳ
‘ಗಟ್ಟಿಮೇಳ’ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈ ಧಾರಾವಾಹಿ ಒಳ್ಳೆಯ ಟಿಆರ್ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಟಿಆರ್ಪಿ ರೇಸ್ನಲ್ಲಿ ಮೂರನೇ ಸ್ಥಾನದಲ್ಲಿದೆ.
ಅಮೃತಧಾರೆ-ಸತ್ಯ
ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ನಟಿಸಿರುವ ‘ಅಮೃತಧಾರೆ’ ಧಾರಾವಾಹಿ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ‘ಸತ್ಯ’ ಧಾರಾವಾಹಿಗೂ ಒಂದೇ ರೀತಿಯ ಟಿಆರ್ಪಿ ಸಿಕ್ಕಿದ್ದು. ಈ ಧಾರಾವಾಹಿಯೂ ನಾಲ್ಕನೇ ಸ್ಥಾನದಲ್ಲಿದೆ.
ಶ್ರೀರಸ್ತು ಶುಭಮಸ್ತು
‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ.
ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ
‘ಸೀತಾ ರಾಮ’
‘ಸೀತಾ ರಾಮ’ ಧಾರಾವಾಹಿಯ ಟಿಆರ್ಪಿ ದಿನ ಕಳೆದಂತೆ ಕುಗ್ಗುತ್ತಿದೆ. ಈ ಧಾರಾವಾಹಿ ಆರಂಭದಲ್ಲಿ ಉತ್ತಮ ಟಿಆರ್ಪಿ ಪಡೆದಿತ್ತು. ಈ ಧಾರಾವಾಹಿ ಪ್ರಸಾರದ ಸಮಯದಲ್ಲಿ ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿರುವುದಕ್ಕೋ ಏನೋ ‘ಸೀತಾ ರಾಮ’ ಧಾರಾವಾಹಿಯ ಟಿಆರ್ಪಿ ಕುಸಿದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ