ಭರ್ಜರಿ ಟಿಆರ್​ಪಿ ಪಡೆದ ‘ಭಾಗ್ಯಲಕ್ಷ್ಮೀ’; ಬಿಗ್ ಬಾಸ್ ಟಿಆರ್​ಪಿ ಎಷ್ಟು?

Kannada Serials TRP: ಬಿಗ್ ಬಾಸ್ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ ಕಂಡಿದೆ. ಶನಿವಾರದ ಎಪಿಸೋಡ್​ನಲ್ಲಿ 9.4 ಟಿವಿಆರ್ ಸಿಕ್ಕಿದೆ. ಭಾನುವಾರದ ಎಪಿಸೋಡ್​ಗೆ 9 ಟಿವಿಆರ್ ಸಿಕ್ಕಿದೆ. ಸೋಮವಾರದಿಂದ ಶುಕ್ರವಾರದವರೆಗೆ ಈ ಶೋ 7.2 ಟಿಆರ್​ಪಿ ಪಡೆದಿದೆ.

ಭರ್ಜರಿ ಟಿಆರ್​ಪಿ ಪಡೆದ ‘ಭಾಗ್ಯಲಕ್ಷ್ಮೀ’; ಬಿಗ್ ಬಾಸ್ ಟಿಆರ್​ಪಿ ಎಷ್ಟು?
ಭಾಗ್ಯಲಕ್ಷ್ಮಿ ಧಾರಾವಾಹಿ-ಸುದೀಪ್

Updated on: Dec 21, 2023 | 2:11 PM

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ (Bhagyalakshmi Serial) ಪ್ರೇಕ್ಷಕರಿಗೆ ಇಷ್ಟ ಆಗುತ್ತಿದೆ. ಹಲವು ಟ್ವಿಸ್ಟ್​ಗಳನ್ನು ಪಡೆದು ಈ ಧಾರಾವಾಹಿ ಮುನ್ನುಗ್ಗುತ್ತಿದೆ. ಈಗ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಕೆ ಆಗಿದೆ. ಆರು ಅಥವಾ ಏಳನೇ ಸ್ಥಾನದಲ್ಲಿ ಇರುತ್ತಿದ್ದ ಈ ಧಾರಾವಾಹಿಗೆ ಈಗ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಕಾರಣದಿಂದ ಧಾರಾವಾಹಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್

ಬಿಗ್ ಬಾಸ್ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ ಕಂಡಿದೆ. ಶನಿವಾರದ ಎಪಿಸೋಡ್​ನಲ್ಲಿ 9.4 ಟಿವಿಆರ್ ಸಿಕ್ಕಿದೆ. ಭಾನುವಾರದ ಎಪಿಸೋಡ್​ಗೆ 9 ಟಿವಿಆರ್ ಸಿಕ್ಕಿದೆ. ಸೋಮವಾರದಿಂದ ಶುಕ್ರವಾರದವರೆಗೆ ಈ ಶೋ 7.2 ಟಿಆರ್​ಪಿ ಪಡೆದಿದೆ. ಬಿಗ್ ಬಾಸ್ ಭರ್ಜರಿ ಫೈಟ್​ ನಡೆದಿತ್ತು. ಸಂಗೀತಾ ಕಣ್ಣಿಗೆ ಹಾನಿ ಆಗಿತ್ತು. ಆ ವಾರದ ಟಿಆರ್​ಪಿ ಇದಾಗಿದೆ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಲವು ತಿಂಗಳಿಂದ ಮೊದಲ ಸ್ಥಾನದಲ್ಲಿ ಮುನ್ನಡೆಯುತ್ತಿದೆ. ಈ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಬಾರಿ ಈ ಧಾರಾವಾಹಿಯ ಟಿಆರ್​ಪಿ ಎರಡಂಕಿಯಲ್ಲಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

ಭಾಗ್ಯಲಕ್ಷ್ಮೀ

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ವೀಕ್ಷಕರಿಂದ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ಸುಷ್ಮಾ ರಾವ್, ಸುದರ್ಶನ್​, ಸುಷ್ಮಾ ನಾಣಯ್ಯ ಮೊದಲಾದವರು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ವೀಕ್ಷಕರಿಗೆ ಈ ಧಾರಾವಾಹಿಯ ಕಥೆ ಇಷ್ಟ ಆಗಿದೆ.

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ಅಮೃತಧಾರೆ-ಸತ್ಯ

ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ನಟಿಸಿರುವ ‘ಅಮೃತಧಾರೆ’ ಧಾರಾವಾಹಿ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ‘ಸತ್ಯ’ ಧಾರಾವಾಹಿಗೂ ಒಂದೇ ರೀತಿಯ ಟಿಆರ್​ಪಿ ಸಿಕ್ಕಿದ್ದು. ಈ ಧಾರಾವಾಹಿಯೂ ನಾಲ್ಕನೇ ಸ್ಥಾನದಲ್ಲಿದೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ.

ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

‘ಸೀತಾ ರಾಮ’

‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ದಿನ ಕಳೆದಂತೆ ಕುಗ್ಗುತ್ತಿದೆ. ಈ ಧಾರಾವಾಹಿ ಆರಂಭದಲ್ಲಿ ಉತ್ತಮ ಟಿಆರ್​ಪಿ ಪಡೆದಿತ್ತು. ಈ ಧಾರಾವಾಹಿ ಪ್ರಸಾರದ ಸಮಯದಲ್ಲಿ ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿರುವುದಕ್ಕೋ ಏನೋ ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ಕುಸಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us