AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಇದು ಆರಂಭ ಮಾತ್ರ; ಈ ವಾರ ಇರಲಿದೆ ಟ್ವಿಸ್ಟ್ ಮೇಲೆ ಟ್ವಿಸ್ಟ್?

ಬಿಗ್ ಬಾಸ್ ಮನೆಯಲ್ಲಿ ಈ ವಾರ ಟ್ವಿಸ್ಟ್ ಮೇಲೆ ಟ್ವಿಸ್ಟ್ ಎದುರಾಗುತ್ತಿದ್ದು, ವೋಟಿಂಗ್ ಲೆಕ್ಕಾಚಾರವೇ ಬದಲಾಗಿದೆ. ತಾಂಡವ್ ರಾಮ್ ಎಲಿಮಿನೇಷನ್ ವೀಕ್ಷಕರಿಗೆ ಶಾಕ್ ನೀಡಿದ್ದು, ಇದು ಅನ್ಯಾಯ ಎಂಬ ಚರ್ಚೆ ಶುರುವಾಗಿದೆ. ಇದರ ಬೆನ್ನಲ್ಲೇ ವೈಲ್ಡ್ ಕಾರ್ಡ್ ಸ್ಪರ್ಧಿಗಳ ಜೊತೆ ತಾಂಡವ್ ಮತ್ತೆ ಮನೆಗೆ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಬಿಗ್ ಬಾಸ್​ನಲ್ಲಿ ಇದು ಆರಂಭ ಮಾತ್ರ; ಈ ವಾರ ಇರಲಿದೆ ಟ್ವಿಸ್ಟ್ ಮೇಲೆ ಟ್ವಿಸ್ಟ್?
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Sep 25, 2026 | 7:30 AM

Share

ಮುಖ್ಯಾಂಶಗಳು

  • ಮೂರನೇ ವಾರದಲ್ಲೇ ಬಿಗ್ ಟ್ವಿಸ್ಟ್
  • ಬದಲಾಯ್ತು ಬಿಗ್ ಬಾಸ್ ಮನೆ ವಾತಾವರಣ
  • ಎಲಿಮಿನೇಷನ್ ನಿರ್ಧಾರ ಅನ್ಯಾಯ ಎಂದ ವೀಕ್ಷಕರು

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಈ ವಾರ ಟ್ವಿಸ್ಟ್ ಮೇಲೆ ಟ್ವಿಸ್ಟ್​​ಗಳು ಎದುರಾಗುತ್ತಾ ಇವೆ. ಮೂರನೇ ವಾರಕ್ಕೆ ಸಾಕಷ್ಟು ತಿರುವುಗಳು ಎದುರಾಗಿವೆ. ಯಾರೂ ಊಹಿಸದ ಸ್ಪರ್ಧಿ ಎಲಿಮಿನೇಟ್ ಆಗಿದ್ದಾರೆ. ಇದರಿಂದ ಮನೆಯ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ. ಇದು ಆರಂಭ ಮಾತ್ರ ಎಂದು ಹೇಳಲಾಗುತ್ತಾ ಇದೆ. ಈ ವಾರ ಇನ್ನಷ್ಟು ಟ್ವಿಸ್ಟ್​ಗಳನ್ನು ನಿರೀಕ್ಷಿಸಬಹುದು.

ತಾಂಡವ್ ರಾಮ್ ಕಂಬ್ಯಾಕ್?

ಬಿಗ್ ಬಾಸ್ ಮನೆಯಲ್ಲಿ ಎಂದಿಗೂ ಎಲಿಮಿನೇಷನ್ ನಡೆಯೋದು ಜನರ ವೋಟ್ ಆಧರಿಸಿಯೇ. ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಯಾರನ್ನೋ ಹೊರ ಕಳುಹಿಸುವ ಅಧಿಕಾರವನ್ನು ಬಿಗ್ ಬಾಸ್ ಈವರೆಗೆ ನೀಡಿಲ್ಲ, ಮುಂದೆ ನೀಡುವುದೂ ಇಲ್ಲ ಎಂಬುದು ಎಲ್ಲರ ನಂಬಿಕೆ ಆಗಿತ್ತು. ಆದರೆ, ಈ ವಾರ ಅದಕ್ಕೆ ಅಪವಾದ ಎಂಬ ಘಟನೆ ನಡೆದಿದೆ. ನಾಲ್ಕು ಸ್ಪರ್ಧಿಗಳ ಶೇ.50ರಷ್ಟು ವೋಟ್ ಕಿತ್ತುಕೊಳ್ಳುವ ಅವಕಾಶವನ್ನು ಬಿಗ್ ಬಾಸ್ ನೀಡಿದರು.

ಇಷ್ಟಕ್ಕೆ ನಿಂತಿಲ್ಲ. ಆ ನಾಲ್ವರನ್ನು ಮಾತ್ರ ನಾಮಿನೇಷನ್​ಗೆ ನಿಲ್ಲಿಸಲಾಯಿತು. ಇದು ಅನೇಕರಿಗೆ ಅಚ್ಚರಿ ತಂದಿದೆ. ಈ ಪೈಕಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿರುವ ತಾಂಡವ್ ರಾಮ್ ಅವರು ಎಲಿಮಿನೇಟ್ ಆಗಿದ್ದಾರೆ. ಇದು ಅನ್​ಫೇರ್ ಎಂದು ಅನೇಕರಿಗೆ ಅನಿಸಿದೆ. ಅವರು ಹೊರ ಹೋದರೂ, ಇದೇ ವಾರ ಅವರನ್ನು ಮತ್ತೆ ತರುವ ಎಲ್ಲಾ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಬರ್ತಾರೆ ವೈಲ್ಡ್ ಕಾರ್ಡ್ ಸ್ಪರ್ಧಿಗಳು?

ಇದನ್ನೂ ಓದಿ: ‘ಬಿಗ್ ಬಾಸ್ ಇದು ನ್ಯಾಯಸಮ್ಮತವಲ್ಲ’; ತಾಂಡವ್ ಎಲಿಮಿನೇಷನ್​ಗೆ ಓಪನ್ ಆಗಿ ಅಸಮಾಧಾನ ಹೊರಹಾಕಿದ ಗಗನ್

‘ಬಿಗ್ ಬಾಸ್ ಕನ್ನಡ ಸೀಸನ್ 13’ಅಲ್ಲಿ ಈ ವಾರ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ವೈಲ್ಡ್​ ಕಾರ್ಡ್ ಮೂಲಕ ಬರೋದು ಯಾರು ಎಂಬ ಕುತೂಹಲ ವೀಕ್ಷಕರಲ್ಲಿ ಮೂಡಿದೆ. ಇವರ ಜೊತೆ ತಾಂಡವ್ ರಾಮ್ ಕೂಡ ಎಂಟ್ರಿ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:29 am, Fri, 25 September 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ದಸರಾ ರಜೆಗೆ ಪ್ರವಾಸಿಗರ ದಂಡು: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
ದಸರಾ ರಜೆಗೆ ಪ್ರವಾಸಿಗರ ದಂಡು: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು
ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಸ್ಟಿಂಗ್ ಆಪರೇಷನ್: ಉನ್ನತ ಮಟ್ಟದ ತನಿಖೆಗೆ ನೀಡಲು ಸರ್ಕಾರ ಹಿಂದೇಟು!
ಸ್ಟಿಂಗ್ ಆಪರೇಷನ್: ಉನ್ನತ ಮಟ್ಟದ ತನಿಖೆಗೆ ನೀಡಲು ಸರ್ಕಾರ ಹಿಂದೇಟು!
ಸೂಳೆಕೆರೆಯ ಋಣ ತೀರಿಸಲು ಮುಂದಾದ ರೈತರು
ಸೂಳೆಕೆರೆಯ ಋಣ ತೀರಿಸಲು ಮುಂದಾದ ರೈತರು
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ