‘ಕೃಷ್ಣ ಇಲ್ಲದ ಮಹಾಭಾರತ, ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’; ಎಲ್ಲರದ್ದೂ ಒಂದೇ ಅಭಿಪ್ರಾಯ

ಸುದೀಪ್ ಅವರು ಈ ವರೆಗೆ ‘ಬಿಗ್ ಬಾಸ್​’ನ 10 ಟಿವಿ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು, 11ನೇ ಸೀಸನ್​ನ ನಿರೂಪಣೆ ನಡೆಯುತ್ತಿದೆ. ಈಗ ಸುದೀಪ್ ಅವರು ಬಿಗ್ ಬಾಸ್ ತೊರೆಯೋ ನಿರ್ಧಾರ ಮಾಡಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿಲ್ಲ. ಅವರನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಎಲ್ಲರೂ ಹೇಳಿದ್ದಾರೆ.

‘ಕೃಷ್ಣ ಇಲ್ಲದ ಮಹಾಭಾರತ, ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’; ಎಲ್ಲರದ್ದೂ ಒಂದೇ ಅಭಿಪ್ರಾಯ
ಕಿಚ್ಚ ಸುದೀಪ್

Updated on: Oct 14, 2024 | 2:23 PM

ಮಹಾಭಾರತದಲ್ಲಿ ಕೃಷ್ಣನ ಪಾತ್ರದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇಡೀ ಮಹಭಾರತಕ್ಕೆ ಅವರದ್ದೇ ನೇತೃತ್ವ. ಅವರು ಇಲ್ಲದೆ ಮಹಾಭಾರತವನ್ನು ಊಹಿಸಿಕೊಳ್ಳುವುದು ಕಷ್ಟ. ಈಗ ಸುದೀಪ್ ಅವರು ‘ಬಿಗ್ ಬಾಸ್’ ತೊರೆದ ಬಗ್ಗೆಯೂ ಇದೇ ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ. ‘ಸುದೀಪ್ ಇಲ್ಲದ ಬಿಗ್ ಬಾಸ್​ನ ಊಹಿಸಿಕೊಳ್ಳೋದು ಕಷ್ಟ’ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಬೇರೆ ಹೀರೋಗಳು ನಿರೂಪಣೆಗೆ ಬಂದರೆ ಟಿಆರ್​ಪಿ ತಗ್ಗಲಿದೆ ಎನ್ನುವ ಅಭಿಪ್ರಾಯ ಹೊರಹಾಕಿದ್ದಾರೆ.

ಮಾಜಿ ಸ್ಪರ್ಧಿಗಳಾದ ಪ್ರಶಾಂತ್ ಸಂಬಂರ್ಗಿ, ವಿನಯ್ ಗೌಡ ಅವರು ಈ ಬಗ್ಗೆ ಮಾತನಾಡಿದ್ದು, ‘ಕೃಷ್ಣ ಇಲ್ಲದ ಮಹಾಭಾರತ ಹಾಗೂ ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’ ಎಂದು ಅವರು ಹೇಳಿದ್ದಾರೆ. ಸುದೀಪ್ ಮಗಳು ಸಾನ್ವಿ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ಅಪ್ಪಾ ನಿಮ್ಮ ಜರ್ನಿ ಬಗ್ಗೆ ಖುಷಿ ಇದೆ. ನಿಮ್ಮಂತೆ ಬೇರೆ ಯಾರಿಗೂ ಮಾಡಲು ಸಾಧ್ಯವಿಲ್ಲ. ನಿಮ್ಮನ್ನು ಆ ಸ್ಟೇಜ್​ ಮೇಲೆ ನೋಡುವುದನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್​’ ಹೊಸ ಸೀಸನ್​ಗೆ ಸುದೀಪ್ ಪಡೆದ ಸಂಭಾವನೆ ಎಷ್ಟು? ಮೊದಲು ಎಷ್ಟಿತ್ತು?

ಅನೇಕರು ಕಲರ್ಸ್ ಕನ್ನಡ ವಾಹಿನಿಯ ವಿರುದ್ಧ ಕಿಡಿಕಾರಿದ್ದಾರೆ. ‘ಬಿಗ್ ಬಾಸ್​ನಿಂದ ಸುದೀಪ್ ಅವರನ್ನು ಕಳೆದುಕೊಂಡ ನೀವು ಸಾಕಷ್ಟು ದೊಡ್ಡ ನಷ್ಟ ಅನುಭವಿಸುತ್ತಿರಿ’ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸುದೀಪ್​ಗೆ ಅವಮಾನ ಆಗಿದೆ ಎಂದು ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು. ಇದು ಕೂಡ ಸಾಕಷ್ಟು ಶಾಕಿಂಗ್ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us