ಸಿಎಂನ ಭೇಟಿ ಮಾಡಿದ ಕಾರ್ತಿಕ್ ಮಹೇಶ್; ‘ಒಳ್ಳೆಯದಾಗಲಿ’ ಎಂದು ಹಾರೈಸಿದ ಸಿದ್ದರಾಮಯ್ಯ

‘ಬಿಗ್ ಬಾಸ್​’ ಗೆದ್ದ ಬಳಿಕ ಕಾರ್ತಿಕ್ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿರುವ ಅವರು ‘ಬಿಗ್ ಬಾಸ್’ಗೆ ಆಗಮಿಸಿದರು. ಅಲ್ಲಿ ಟಾಸ್ಕ್ ಹಾಗೂ ಮನರಂಜನೆ ಮೂಲಕ ಎಲ್ಲರ ಗಮನ ಸೆಳೆದರು. ಅವರು ಕಪ್ ಗೆದ್ದಿದ್ದಾರೆ. ಈಗ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ.

ಸಿಎಂನ ಭೇಟಿ ಮಾಡಿದ ಕಾರ್ತಿಕ್ ಮಹೇಶ್; ‘ಒಳ್ಳೆಯದಾಗಲಿ’ ಎಂದು ಹಾರೈಸಿದ ಸಿದ್ದರಾಮಯ್ಯ
ಕಾರ್ತಿಕ್ ಮಹೇಶ್-ಸಿದ್ದರಾಮಯ್ಯ
Follow us
Mangala RR
| Updated By: ರಾಜೇಶ್ ದುಗ್ಗುಮನೆ

Updated on:Feb 14, 2024 | 12:17 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ವಿನ್ ಆಗುವ ಮೂಲಕ ಕಾರ್ತಿಕ್ ಮಹೇಶ್ ಖ್ಯಾತಿ ಹೆಚ್ಚಾಗಿದೆ. ಅವರು ನಾನಾ ಕಡೆಗಳಿಗೆ ತೆರಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಇಂದು (ಫೆಬ್ರವರಿ 14) ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ನಿವಾಸದಲ್ಲಿ ಈ ಭೇಟಿ ನಡೆದಿದೆ. ಸಿದ್ದರಾಮಯ್ಯ ಅವರು ಕಾರ್ತಿಕ್ ಅವರಿಗೆ ಶುಭ ಹಾರೈಸಿದ್ದಾರೆ. ಇದರಿಂದ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

‘ಬಿಗ್ ಬಾಸ್​’ನಿಂದ ಕಾರ್ತಿಕ್ ಮಹೇಶ್​ಗೆ ಸಿಕ್ಕ ಜನಪ್ರಿಯತೆ ತುಂಬಾನೇ ದೊಡ್ಡದು. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿರುವ ಅವರು ‘ಬಿಗ್ ಬಾಸ್’ಗೆ ಬಂದರು. ಇಲ್ಲಿ ಆಟ ಹಾಗೂ ಮನರಂಜನೆ ಮೂಲಕ ಎಲ್ಲರ ಗಮನ ಸೆಳೆದರು. ಅವರು ಕಪ್ ಗೆದ್ದಿದ್ದಾರೆ. ಹೀಗಾಗಿ ಅವರು ನಾನಾ ಸೆಲೆಬ್ರಿಟಿಗಳನ್ನು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಈಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ.

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾರ್ತಿಕ್ ಆಶೀರ್ವಾದ ಪಡೆದಿದ್ದಾರೆ. ‘ಒಳ್ಳೆದಾಗಲಿ ಕಣಯ್ಯ. ಸಿನಿಮಾ ರಂಗದಲ್ಲಿ ಒಳ್ಳೆಯ ಹೆಸರು ಮಾಡು’ ಎಂದು ಹಾರೈಸಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮ ಹರೀಶ್. ಮತ್ತು ಉಲ್ಲಾಸ್ ಗೌಡ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ ಕಾರ್ತಿಕ್ ಮಹೇಶ್

ಕಾರ್ತಿಕ್ ಮಹೇಶ್ ಅವರು ಈ ಮೊದಲು ‘ಡೊಳ್ಳು’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಬಿಗ್ ಬಾಸ್ ಮನೆಯಲ್ಲಿ ಅವರು ತಮ್ಮ ಅಸಲಿ ಆಟ ತೋರಿಸಿದ್ದಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 4.6 ಲಕ್ಷ ಜನರು ಹಿಂಬಾಲಿಸುತ್ತಾರೆ. ಅವರಿಗೆ ಬಿಗ್ ಬಾಸ್ ಗೆದ್ದಿದ್ದಕ್ಕೆ 50 ಲಕ್ಷ ರೂಪಾಯಿ ಜೊತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಕಾರು ಉಡುಗೊರೆಯಾಗಿ ಸಿಕ್ಕಿತ್ತು. ಇತ್ತೀಚೆಗೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:15 pm, Wed, 14 February 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್