AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್ ಮಾಡಿ ಮತ್ತೆ ಇಕ್ಕಟ್ಟಿಕೆ ಸಿಲುಕಿದ ರಜತ್; ಮತ್ತೊಂದು ದೂರು ದಾಖಲು

ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ಸಿಗರೇಟ್ ಹಚ್ಚಿ ವಿಡಿಯೋ ಮಾಡಿದ ಆರೋಪ ಅವರ ಮೇಲಿದೆ. ಈ ಕುರಿತು ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ರಜತ್, ಈಗ ಮತ್ತೆ ಅದೇ ರೀತಿ ವಿವಾದ ಸೃಷ್ಟಿಸಿದ್ದಾರೆ.

ರೀಲ್ಸ್ ಮಾಡಿ ಮತ್ತೆ ಇಕ್ಕಟ್ಟಿಕೆ ಸಿಲುಕಿದ ರಜತ್; ಮತ್ತೊಂದು ದೂರು ದಾಖಲು
ರಜತ್
ರಾಮ್​, ಮೈಸೂರು
| Edited By: |

Updated on: Feb 05, 2026 | 2:58 PM

Share

ಬಿಗ್ ಬಾಸ್ ಸ್ಪರ್ಧಿ ಹಾಗೂ ನಟ ರಜತ್ (Rajat) ಅವರು ಈಗ ಮತ್ತೆ ಇಕ್ಕಟ್ಟಿಕ್ಕೆ ಸಿಲುಕಿದ್ದಾರೆ. ಈ ಮೊದಲು ಮಚ್ಚು ಹಿಡಿದು ರೀಲ್ಸ್ ಮಾಡಿ ಅವರು ಜೈಲುವಾಸ ಅನುಭವಿಸಬೇಕಾಗಿ ಬಂದಿತ್ತು. ಈಗ ಅವರು ಮತ್ತೆ ರೀಲ್ಸ್ ಮಾಡಿದ ಕಾರಣಕ್ಕೆ ತೊಂದರೆ ಅನುಭವಿಸುವಂತಾಗಿದೆ. ಮೈಸೂರು ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ರಜತ್ ವಿಡಿಯೋ ಮಾಡಿದ್ದಾರೆ. ಈ ವೇಳೆ ಅವರು ಸಿಗರೇಟ್ ಹಚ್ಚಿದ್ದಾರೆ. ಇದರಿಂದ ಅವರ ವಿರುದ್ಧ ದೂರು ದಾಖಲಾಗಿದೆ.

ಇತ್ತೀಚೆಗೆ ರಜತ್ ಅವರು ವಿಡಿಯೋ ಒಂದನ್ನು ಮಾಡಿದರು. ಈ ವಿಡಿಯೋದಲ್ಲಿ ಅವರು ರೆಟ್ರೋ ಸ್ಟೈಲ್ ಕಾರಲ್ಲಿ ಬರುತ್ತಾರೆ. ಈ ವೇಳೆ ಅವರು ಸಿಗರೇಟ್ ಕೂಡ ಹಚ್ಚುತ್ತಾರೆ. ಈ ವಿಡಿಯೋ ಶೂಟ್ ಆಗಿದ್ದು ಮೈಸೂರು ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಎದುರು. ಈ ಸಂಬಂಧ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

View this post on Instagram

A post shared by Rajath kishan G (@bujjjjii)

ದೂರಿನಲ್ಲಿ ಏನಿದೆ?

ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಈ ದೂರನ್ನು ನೀಡಿದ್ದಾರೆ. ರಜತ್ ವಿರುದ್ದ ಎಫ್​ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಲಾಗಿದೆ. ‘ರಜತ್ ಪಾರಂಪರಿಕ ಕಟ್ಟಡದ ಮುಂದೆ ಅನುಮತಿ ಪಡೆಯದೆ ವಿಡಿಯೋ ಮಾಡಿದ್ದಾರೆ. ಸಿಗರೇಟ್ ಹಿಡಿದು ಕಾರಿನಿಂದ ಇಳಿದಿದ್ದಾರೆ. ಇದು ಅವರ ಫಾಲೋರ್ಸ್‌ಗೆ ಕೆಟ್ಟ ಸಂದೇಶ ನೀಡುತ್ತದೆ. ಈ ಮೊದಲು ಕೂಡ ಮಚ್ಚು ಹಿಡಿದು ರೀಲ್ಸ್ ಮಾಡಿದ್ದಕ್ಕೆ ಎಫ್​ಐಅರ್ ದಾಖಲಾಗಿತ್ತು. ಇದೀಗ ಮತ್ತೆ ಅದೇ ರೀತಿ ಮಾಡಿದ್ದಾರೆ. ಅವರ ವಿರುದ್ದ ಕ್ರಮ ಕೈಗೊಳ್ಳಿ’ ಎಂದು ದೂರಿನಲ್ಲಿ ಕೋರಲಾಗಿದೆ.

ಇದನ್ನೂ ಓದಿ: ನಿಮಗೆ ಬೇಕಾದವರಿಗೇ ಕಿಚ್ಚನ ಚಪ್ಪಾಳೆ ಕೊಡೋಕೆ ಆಗತ್ತಾ? ರಜತ್ ಕಿಶನ್ ಖಡಕ್ ಪ್ರಶ್ನೆ

ಹಿಂದಿನ ಪ್ರಕರಣ

ಕಲರ್ಸ್​​ ರಿಯಾಲಿಟಿ ಶೋ ಒಂದರಲ್ಲಿ ರಜತ್ ಹಾಗೂ ವಿನಯ್ ಗೌಡ ಭಾಗಿ ಆಗಿದ್ದರು. ಶೋ ಶೂಟಿಂಗ್ ಮುಗಿದ ಬಳಿಕ ಸ್ಟುಡಿಯೋ ಹೊರಗೆ ವಿನಯ್ ಹಾಗೂ ರಜತ್ ನಿಜವಾದ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಈ ಸಂಬಂಧ ಎಫ್​​ಐಆರ್ ದಾಖಲಿಸಿ, ಇಬ್ಬರನ್ನೂ ಅರೆಸ್ಟ್ ಮಾಡಲಾಗಿತ್ತು. ಆ ಬಳಿಕ ಜಾಮೀನು ಪಡೆದು ಇಬ್ಬರೂ ಹೊರ ಬಂದಿದ್ದರು. ನಂತರ ಕೋರ್ಟ್​​ಗೆ ಸರಿಯಾಗಿ ಹಾಜರಾಗದ ಕಾರಣ ಅವರನ್ನು ಮತ್ತೆ ಬಂಧಿಸಲಾಯಿತು. ಈ ಪ್ರಕರಣದ ನೆನಪು ಮಾಸುವ ಮುನ್ನವೇ ಅವರಿಗೆ ಮತ್ತೊಂದು ತೊಂದರೆ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ