Deepika Das: ಕಾಡಾದ ಬಿಗ್ ಬಾಸ್​​ ಮನೆ; ದೊಡ್ಮನೆಗೆ ದೀಪಿಕಾ ದಾಸ್ ರೀ ಎಂಟ್ರಿ

ದೀಪಿಕಾ ದಾಸ್ ಅವರು ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದರು. ಮನೆಯಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದರು. ಇದರ ಹೊರತಾಗಿಯೂ ಅವರು ಬಿಗ್ ಬಾಸ್ ಮನೆಯಿಂದ ಕಳೆದ ವೀಕೆಂಡ್​ನಲ್ಲಿ ಔಟ್ ಆಗಿದ್ದರು.

Deepika Das: ಕಾಡಾದ ಬಿಗ್ ಬಾಸ್​​ ಮನೆ; ದೊಡ್ಮನೆಗೆ ದೀಪಿಕಾ ದಾಸ್ ರೀ ಎಂಟ್ರಿ
ದೀಪಿಕಾ ದಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 22, 2022 | 11:15 AM

‘ಬಿಗ್ ಬಾಸ್ ಕನ್ನಡ ಸೀಸನ್ 9’ (BBK 9) ಕುತೂಹಲ ಹೆಚ್ಚಿಸಿಕೊಳ್ಳುತ್ತಿದೆ. ಈಗಾಗಲೇ ಸುಮಾರು ಎರಡು ತಿಂಗಳು ಪೂರ್ಣಗೊಂಡ ಹೊರತಾಗಿಯೂ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿಲ್ಲ. ಹೀಗಿರುವಾಗಲೇ ಒಂದು ಅಚ್ಚರಿಯ ಅಪ್​ಡೇಟ್ ಸಿಕ್ಕಿದೆ. ಇಡೀ ಬಿಗ್ ಬಾಸ್ (Bigg Boss) ಮನೆ ಕಾಡಾಗಿದೆ. ಅಷ್ಟೇ ಅಲ್ಲ ಹೊಸ ಸ್ಪರ್ಧಿಯ ಎಂಟ್ರಿ ಆಗಿದೆ. ಅದು ದೀಪಿಕಾ ದಾಸ್ (Deepika Das) ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ದೀಪಿಕಾ ದಾಸ್ ಅವರು ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದರು. ಮನೆಯಲ್ಲಿ ಅವರು ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದರು. ಇದರ ಹೊರತಾಗಿಯೂ ಅವರು ಬಿಗ್ ಬಾಸ್ ಮನೆಯಿಂದ ಕಳೆದ ವೀಕೆಂಡ್​ನಲ್ಲಿ ಔಟ್ ಆಗಿದ್ದರು. ಆದರೆ, ದೀಪಿಕಾ ದಾಸ್ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳುಹಿಸಿಯೇ ಇಲ್ಲ ಎನ್ನಲಾಗುತ್ತಿದೆ. ಅವರನ್ನು ಸೀಕ್ರೆಟ್ ರೂಂನಲ್ಲಿ ಇರಿಸಲಾಗಿತ್ತು ಎಂದು ವರದಿ ಆಗಿದೆ. ಈಗ ಅವರು ಬಿಗ್ ಬಾಸ್​ಗೆ ಕಂಬ್ಯಾಕ್ ಮಾಡಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಕಲರ್ಸ್​ ಕನ್ನಡ ವಾಹಿನಿ ಹೊಸ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಇಡೀ ಬಿಗ್ ಬಾಸ್ ಮನೆ ಕಾಡಾಗಿದೆ. ಸ್ಪರ್ಧಿಗಳು ತಮಗೆ ಸಿಕ್ಕ ಸೌಕರ್ಯಗಳನ್ನು ಕಳೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಗೋಣಿ ಚೀಲದಲ್ಲೇ ಬಟ್ಟೆ ಮಾಡಿಕೊಂಡಿದ್ದಾರೆ. ಹೀಗಾಗಿ, ಸ್ಪರ್ಧಿಗಳು ಕಾಡಾಗಿರುವ ಗಾರ್ಡನ್ ಏರಿಯಾದಲ್ಲೇ ವಾಸ ಮಾಡಬೇಕು. ಊಟ ತಿಂಡಿ ಎಲ್ಲವೂ ಅಲ್ಲಿಯೇ.

ತರಕಾರಿಗಳನ್ನು ಪಡೆಯಲು ಬಿಗ್ ಬಾಸ್ ಕಡೆಯಿಂದ ಟಾಸ್ಕ್ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಗೆದ್ದು ಮನೆಯವರು ತರಕಾರಿ ಪಡೆದರು. ಆಗಲೇ ಬಿಗ್ ಬಾಸ್ ಕಡೆಯಿಂದ ಒಂದು ಘೋಷಣೆ ಆಗಿದೆ. ‘ಮತ್ತೊಂದು ಸದಸ್ಯ ಈ ಆಟವನ್ನು ಆಡಿ ತರಕಾರಿ ಗೆದ್ದುಕೊಂಡಿದ್ದಾನೆ’ ಎಂದು ಬಿಗ್ ಬಾಸ್ ಹೇಳಿದರು.

ಇದನ್ನೂ ಓದಿ: ಕನ್ನಡ ಬಿಗ್ ಬಾಸ್ ವೈಲ್ಡ್ ಕಾರ್ಡ್​ ಎಂಟ್ರಿ ಬಗ್ಗೆ ವೀಕ್ಷಕರಿಗೆ ಮೂಡಿದೆ ಅನುಮಾನ

ಇದು ದೀಪಿಕಾ ದಾಸ್ ಎನ್ನಲಾಗಿದೆ. ದೀಪಿಕಾ ದಾಸ್ ಕೈಯಲ್ಲಿ ಕಡಗ ಇತ್ತು. ಇಂದು ಎಂಟ್ರಿ ಕೊಡುತ್ತಿರುವ ಹೊಸ ಸದಸ್ಯನ ಕೈಯಲ್ಲೂ ಕಡಗ ಇದೆ. ಹೀಗಾಗಿ, ವೀಕ್ಷಕರು ಈ ಬಗ್ಗೆ ಊಹೆ ಮಾಡಿದ್ದಾರೆ. ಇಂದಿನ (ನವೆಂಬರ್ 22) ಎಪಿಸೋಡ್​ನಲ್ಲಿ ಆ ವಿಚಾರ ರಿವೀಲ್ ಆಗಲಿದೆ.

Published On - 10:59 am, Tue, 22 November 22

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ