AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಗಿಲ್ಲಿ ನಟ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ. ರಿಷಾ ಅವರ ಬಟ್ಟೆಗಳನ್ನು ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿಲಾಗಿದೆ. ಸದ್ಯ ಈ ಪ್ರಕರಣವನ್ನು ಮಹಿಳಾ ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ರಿಷಾ-ಗಿಲ್ಲಿ
Vinay Kashappanavar
| Edited By: |

Updated on: Nov 17, 2025 | 6:52 PM

Share

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಎಲ್ಲರ ಜೊತೆ ತಮಾಷೆ ಮಾಡುತ್ತಾ ಕಾಲ ಕಳೆಯುತ್ತಾ ಇದ್ದಾರೆ. ಆದರೆ ಅವರು ಮಾಡುವ ಕೆಲವು ತಮಾಷೆಯಿಂದ ತೊಂದರೆ ಕೂಡ ಉಂಟಾಗುತ್ತದೆ. ಅಚ್ಚರಿ ಎಂದರೆ, ಈಗ ಬಿಗ್ ಬಾಸ್ ಮನೆ ಒಳಗಿನ ವಿಷಯ ಮಹಿಳಾ ಆಯೋಗದ (Women Commission) ತನಕ ತಲುಪಿದೆ! ಹೌದು, ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಅಷ್ಟಕ್ಕೂ ಗಿಲ್ಲಿ ಮಾಡಿದ ತಪ್ಪು ಏನು? ಸಹ ಸ್ಪರ್ಧಿ ರಿಷಾ (Risha) ಅವರ ಬಟ್ಟೆಗಳನ್ನು ಮುಟ್ಟಿದ್ದು. ಈ ವಿಚಾರವನ್ನು ಇಟ್ಟುಕೊಂಡು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಬಿಗ್ ಬಾಸ್ ಮನೆಯಲ್ಲಿ ಒಂದು ದಿನ ರಿಷಾ ಅವರು ಗಿಲ್ಲಿ ನಟನ ತಾಳ್ಮೆ ಕೆಡುವಂತೆ ನಡೆದುಕೊಂಡಿದ್ದರು. ಬಾತ್ ರೂಮ್ ಒಳಗೆ ಹೋಗಿದ್ದ ರಿಷಾ ಅವರು ದೀರ್ಘ ಸಮಯ ತೆಗೆದುಕೊಂಡರು. ತಮಗೆ ನೀರು ಬೇಕು ಎಂದು ಗಿಲ್ಲಿ ನಟ ಮನವಿ ಮಾಡಿದರೂ ಕೂಡ ರಿಷಾ ಅದಕ್ಕೆ ಸ್ಪಂದಿಸಲಿಲ್ಲ. ಅದರಿಂದಾಗಿ ಗಿಲ್ಲಿಗೆ ಕೋಪ ಬಂತು. ಆಗ ಗಿಲ್ಲಿ ನಡೆದುಕೊಂಡ ರೀತಿಯಿಂದ ಎಲ್ಲರಿಗೂ ಅಚ್ಚರಿ ಆಯಿತು.

ಗಿಲ್ಲಿ ಅವರು ರಿಷಾ ಅವರ ಬಟ್ಟೆಗಳನ್ನೆಲ್ಲ ತಂದು ಬಾತ್​ ರೂಮ್​ ಮುಂದೆ ಸುರಿದರು. ಆ ಬಳಿಕ ಗಿಲ್ಲಿ ಮತ್ತು ರಿಷಾ ನಡುವೆ ದೊಡ್ಡ ಜಗಳ ಆಯಿತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಈಗ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ಅಲ್ಲದೇ, ಗಿಲ್ಲಿ ನಟ ಅವರು ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.

ಈ ದೂರಿನ ಅನ್ವಯ ಮಹಿಳಾ ಆಯೋಗವು ವಿಡಿಯೋ ಫೂಟೇಜ್ ಪರಿಶೀಲನೆ ಮಾಡುತ್ತಿದೆ. ಆದರೆ ಬಿಗ್ ಬಾಸ್ ಆಯೋಜಕರು ಯಾವುದೇ ವಿಡಿಯೋ ಫೂಟೇಜ್ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಗದ ಕಾರಣಕ್ಕೆ ಈ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ.

ಇದನ್ನೂ ಓದಿ: ಕಿಚ್ಚ ಸುದೀಪ್ ರೀತಿಯಲ್ಲೇ ಬಿಗ್​ ಬಾಸ್ ನಿರೂಪಣೆ ಮಾಡಿದ ಗಿಲ್ಲಿ ನಟ

ಜಗಳ ನಡೆದಾಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದರು. ಅದು ಬಿಗ್ ಬಾಸ್ ಮನೆಯ ಮೂಲ ನಿಯಮದ ಉಲ್ಲಂಘನೆ. ಆದರೂ ಕೂಡ ಇನ್ನುಳಿದ ಸ್ಪರ್ಧಿಗಳು ಕೇವಲ ವಾರ್ನಿಂಗ್ ನೀಡಿ ರಿಷಾ ಅವರನ್ನು ಉಳಿಸಿಕೊಂಡರು. ವಾರಾಂತ್ಯದ ಸಂಚಿಕೆಯಲ್ಲಿ ಈ ವಿಚಾರದ ಬಗ್ಗೆ ಸುದೀಪ್ ಕೂಡ ಮಾತನಾಡಿದ್ದರು. ಹೆಣ್ಮಕ್ಕಳ ಬಟ್ಟೆ, ಬ್ಯಾಗ್​​ಗಳಿಗೆ ಅನುಮತಿ ಇಲ್ಲದೇ ಕೈ ಹಾಕಬಾರದು ಎಂದು ಗಿಲ್ಲಿಗೆ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!