AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ದೈವಾರಾಧನೆ ದೃಶ್ಯಗಳ ಮಾಡಲ್ಲ: ನಿರ್ದೇಶಕ ಪ್ರೀತಮ್ ಶೆಟ್ಟಿ

Preetham Shetty: ‘ಕಾವೇರಿ ಕನ್ನಡ ಮೀಡಿಯಂ’ ಧಾರಾವಾಹಿ ನಿರ್ದೇಶಕ ಪ್ರೀತಮ್ ಶೆಟ್ಟಿ ಮಾತನಾಡಿ, ತಾವು ಇನ್ನುಮುಂದೆ ದೈವಾರಾಧನೆ ದೃಶ್ಯಗಳ ಮಾಡಲ್ಲ ಅಂದಿದ್ದಾರೆ.

ಇನ್ಮುಂದೆ ದೈವಾರಾಧನೆ ದೃಶ್ಯಗಳ ಮಾಡಲ್ಲ: ನಿರ್ದೇಶಕ ಪ್ರೀತಮ್ ಶೆಟ್ಟಿ
ಮಂಜುನಾಥ ಸಿ.
|

Updated on:Feb 10, 2024 | 11:51 PM

Share

‘ಕಾವೇರಿ ಕನ್ನಡ ಮೀಡಿಯಂ’ ಧಾರಾವಾಹಿಯಲ್ಲಿ (Serial) ದೈವಾರಾಧನೆ ದೃಶ್ಯಗಳನ್ನು ಪ್ರದರ್ಶಿಸಿರುವ ವಿಚಾರವಾಗಿ ಮಂಗಳೂರು, ಪಂಜೇಶ್ವರಗಳಲ್ಲಿ ಕೆಲವರು ಧಾರಾವಾಹಿ ವಿರುದ್ಧ ದೂರು ದಾಖಲಿಸಿದ್ದು, ದೈವಾರಾಧನೆಯನ್ನು ಹಣ ಮಾಡುವ ದಂಧೆಯಾಗಿ ಬಳಸಿಕೊಳ್ಳಲಾಗುತ್ತಿದೆ. ಧಾರಾವಾಹಿ, ಸಿನಿಮಾಗಳಲ್ಲಿ ತಮ್ಮ ಆಚರಣೆಗಳ ಅನುಕರಣೆ ಮಾಡುತ್ತಿರುವುದು ಭಾವನೆಗೆ ಧಕ್ಕೆಯಾಗಿದೆ ಎಂದು ದೂರು ನೀಡಿದ್ದರು. ದೈವದ ದೃಶ್ಯಗಳನ್ನು ಧಾರಾವಾಹಿಯಿಂದ ತೆಗೆದುಹಾಕಬೇಕು, ದೈವಾರಾಧಕರ ಭಾವನೆಗೆ ಧಕ್ಕೆ ತಂದಿರುವ ಧಾರಾವಾಹಿಯ ತಂಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಲಾಗಿದೆ.

‘ಕಾವೇರಿ ಕನ್ನಡ ಮೀಡಿಯಂ’ ಧಾರಾವಾಹಿಯನ್ನು ಪ್ರೀತಮ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದು, ವಿವಾದದ ಬಗ್ಗೆ ಮಾತನಾಡಿರುವ ಪ್ರೀತಮ್ ಶೆಟ್ಟಿ, ‘2019 ಪಿಂಗಾರ ಸಿನಿಮಾನ ನಿರ್ದೆಶನ ಮಾಡಿದ್ದೇ ಅದು ಕಂಪ್ಲೀಟ್ ಆಗಿ ದೈವಾರಾಧನೆ ಬಗ್ಗೆನೇ ಸಿನಿಮಾ ಮಾಡಲಾಗಿತ್ತು, ಚಿತ್ರಕ್ಕಾಗಿ ನ್ಯಾಷನಲ್ ಅವಾರ್ಡ್ ಜೊತೆ ಸಾಕಷ್ಟು ಪ್ರಶಸ್ತಿಗಳನ್ನ ಪಡೆದಿದ್ದೇನೆ, 2016 ರಲ್ಲಿ ಮೀನಾಕ್ಷಿ ಮದುವೆ ಎಂಬ ಧಾರಾವಾಹಿಯಲ್ಲೂ ದೇವರಾಧನೆ ತೋರಿಸಿದ್ದೇ, ಅದ್ರೆ ಅವಾಗ ಯಾವುದೇ ರೀತಿ ಸಮಸ್ಯೆ ಆಗಿರಲಿಲ್ಲ , ನಾನು ಮಂಗಳೂರಿನವನೇ ನಮ್ಮ ಮನೆಯಲ್ಲೂ ದೇವರಾಧನೆ ಇದೇ, ಈಗ ನಾವು ಆಚಾರ ವಿಚಾರ ಗಮನದಲ್ಲಿಟ್ಟುಕೊಂಡೇ ಮಾಡಿರೋದು’ ಎಂದಿದ್ದಾರೆ.

ಇದನ್ನೂ ಓದಿ:‘ಕಾಂತಾರ 2’ ಸಿನಿಮಾ ವಿರುದ್ಧ ಹೋರಾಟದ ಎಚ್ಚರಿಕೆ: ಕಾರಣ?

‘ಪ್ರಶಾಂತ್ ಮುಂಚೇಯೆ ಹೇಳಿದ್ರು ಒಂದು ವಾರ ನಾನ್ ವೆಜ್ ಸೇವಿಸಬಾರದು ಶೂಟಿಂಗ್ ನಲ್ಲಿ ಯಾರು ಚಪ್ಪಲಿ ಹಾಕಬಾರದು ಅಂತ ನಾವೆಲ್ಲು ಅಪಹಾಸ್ಯ ಮಾಡಿಲ್ಲ , ಧಾರವಾಹಿಯಲ್ಲಿ ನಾಯಕಿ ಕೊರಗಜ್ಜನ‌ಭಕ್ತೆ ಮೊದಲಿನಿಂದಲೂ ಹೀಗಾಗಿ ಕಷ್ಟ ಬಂದಾಗ ದೈವ ಯಾವ ರೀತಿ ಪರಿಹಾರ ನೀಡುತ್ತೆ ಎಂಬ ಒಳ್ಳೆ ರೀತಿಯಲ್ಲಿ ನಾವು ತೋರಿಸಿದ್ದೇವೆ ಎಲ್ಲೂ ಅಪಹಾಸ್ಯ ಮಾಡಿಲ್ಲ’ ಎಂದು ಪ್ರೀತಮ್ ಹೇಳಿದ್ದಾರೆ.

ಧಾರಾವಾಹಿಯಲ್ಲಿನ ದೈವಾರಾಧನೆ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಮಾಡಲಾಗಿರುವ ಒತ್ತಾಯದ ಬಗ್ಗೆ ಮಾತನಾಡಿರುವ ಪ್ರೀತಮ್ ಶೆಟ್ಟಿ, ‘ಸೋಮವಾರ ಧಾರವಾಹಿಯ ಎಪಿಸೋಡ್ ಪ್ರಸಾರ ಮಾಡುವ ಬಗ್ಗೆ ಮುಖ್ಯಸ್ಥರೆಲ್ಲ ಸೇರಿ ನಿರ್ಧಾರ ತೆಗೆದುಕೊಳ್ಳಬೇಕು. ಧಾರಾವಾಹಿ ಪ್ರದರ್ಶನ ಮಾಡದೇ ಇರೋ ಬಗ್ಗೆ ಈಗಾಲೇ ನಾನು ಏನೂ ಹೇಳೋದಕ್ಕೆ ಆಗಲ್ಲ. ಆದರೆ ಇನ್ನು ಮುಂದೆ ನಾನು ಈ ರೀತಿಯ ದೈವರಾಧನೆ ದೃಶ್ಯಗಳನ್ನು ಮಾಡುವುದಿಲ್ಲ’ ಎಂದು ಪ್ರೀತಮ್ ಶೆಟ್ಟಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Sat, 10 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!