AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡು ಕ್ವಾಟರ್ ಕೊಡಿಸಿದರೆ ಯಾರು ಬೇಕಾದರೂ ಒಳ್ಳೆಯವನು ಎನ್ನುತ್ತಾನೆ’; ತಂದೆ ಆರೋಪಕ್ಕೆ ಚೈತ್ರಾ ತಿರುಗೇಟು

ಚೈತ್ರಾ ಕುಂದಾಪುರ ಅವರ ಮದುವೆಯನ್ನು ತಂದೆ ಬಾಲಕೃಷ್ಣ ನಾಯ್ಕ್ ವಿರೋಧಿಸಿದ್ದಾರೆ. ಅಲ್ಲದೆ, ಹಲವು ಆರೋಪಗಳನ್ನು ಮಾಡಿದ್ದಾರೆ. ಮೋಸ, ವಂಚನೆ ಹಾಗೂ ಹಣದ ಆಸೆಯ ಆರೋಪಗಳನ್ನು ಚೈತ್ರಾ ಮೇಲೆ ಹೊರಿಸಿದ್ದಾರೆ. ಚೈತ್ರಾ ತಮ್ಮ ತಂದೆಯನ್ನು ಕುಡುಕ ಎಂದು ಕರೆದಿದ್ದಾರೆ. ಈ ವಿವಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಎರಡು ಕ್ವಾಟರ್ ಕೊಡಿಸಿದರೆ ಯಾರು ಬೇಕಾದರೂ ಒಳ್ಳೆಯವನು ಎನ್ನುತ್ತಾನೆ’; ತಂದೆ ಆರೋಪಕ್ಕೆ ಚೈತ್ರಾ ತಿರುಗೇಟು
ಚೈತ್ರಾ-ಚೈತ್ರಾ ತಂದೆ
ರಾಜೇಶ್ ದುಗ್ಗುಮನೆ
|

Updated on: May 15, 2025 | 12:49 PM

Share

ಚೈತ್ರಾ ಕುಂದಾಪುರ (Chaithra Kundapura) ಅವರ ಬಗ್ಗೆ ತಂದೆ ಬಾಲಕೃಷ್ಣ ನಾಯ್ಕ್ ಮಾಡಿದ ಆರೋಪ ಸಂಚಲನ ಸೃಷ್ಟಿ ಮಾಡಿದೆ. ಇತ್ತೀಚೆಗೆ ಚೈತ್ರಾ ಅವರು ವಿವಾಹ ಆದರು. ಆದರೆ, ಈ ಮದುವೆಗೆ ತಮ್ಮನ್ನು ಕರೆದೇ ಇಲ್ಲ ಎಂದು ಬಾಲಕೃಷ್ಣ ಆರೋಪಿಸಿದ್ದಾರೆ. ಅಲ್ಲದೆ, ಚೈತ್ರಾ ಮಾಡಿದ ಮೋಸ-ವಂಚನೆಗಳನ್ನು ಕೂಡ ಅವರು ಬಿಚ್ಚಿಟ್ಟಿದ್ದಾರೆ. ಈ ಆರೋಪಗಳಿಗೆ ಚೈತ್ರಾ ಅವರು ಸ್ಪಷ್ಟನೆ ನೀಡಿದ್ದಾರೆ. ‘ತಂದೆ ಕುಡುಕ’ ಎಂದು ನೇರ ಮಾತುಗಳಲ್ಲಿ ಅವರು ಹೇಳಿಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಅವರು ಶ್ರೀಕಾಂತ್ ಕಶ್ಯಪ್ ಹೆಸರಿನ ಹುಡಗನನ್ನು ಇತ್ತೀಚೆಗೆ ವಿವಾಹ ಆದರು. ಈ ಮದುವೆಗೆ ಚೈತ್ರಾ ತಂದೆ ಅವರು ಬಂದಿರಲಿಲ್ಲ. ತಂದೆ ಸ್ಥಾನದಲ್ಲಿ ನಿಂತು ರಜತ್ ಅವರು ಒಂದಷ್ಟು ಶಾಸ್ತ್ರಗಳನ್ನು ಮಾಡಿದ್ದರು. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿತ್ತು. ಮದುವೆ ಆದ ಕೆಲವೇ ದಿನಗಳಲ್ಲಿ ಮಾತನಾಡಿದ್ದ ಬಾಲಕೃಷ್ಣ ಅವರು ನನಗೆ ವಿವಾಹಕ್ಕೆ ಆಮಂತ್ರಣವೇ ಇರಲಿಲ್ಲ ಎಂದು ಮಾಧ್ಯಮಗಳ ಎದುರು ಹೇಳಿಕೆ ನೀಡಿದ್ದರು.

ಈ ಹೇಳಿಕೆ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಒಂದನ್ನು ಹಾಕಿದ್ದಾರೆ. ‘ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟ‌ರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ’ ಎಂದು ಚೈತ್ರಾ ಬರೆದಿದ್ದಾರೆ.

ಇದನ್ನೂ ಓದಿ
Image
ಮಾಧುರಿ ದೀಕ್ಷಿತ್ ರಿಯಾಲಿಟಿ ಶೋಗೆ ಪಡೆಯುತ್ತಾರೆ 25 ಕೋಟಿ ರೂಪಾಯಿ
Image
17ನೇ ವಯಸ್ಸಿಗೆ ನಟನೆ; ಸಲ್ಲುಗಿಂತ ಹೆಚ್ಚು ಸಂಭಾವನೆ ಪಡೆದ ಮಾಧುರಿ
Image
ಅಂಗಾಂಗ ದಾನ ಮಾಡುವ ಪ್ರತಿಜ್ಞೆ ಮಾಡಿದ ರಕ್ಷಕ್ ಬುಲೆಟ್; ತಂದೆಯೇ ಕಾರಣ
Image
ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

ಚೈತ್ರಾ ಬಗ್ಗೆ ತಂದೆ ಬಾಲಕೃಷ್ಣ ಅವರು ಹಲವು ಆರೋಪಗಳನ್ನು ಮಾಡಿದ್ದಾರೆ. ಹಣದ ಆಸೆಗೆ ಚೈತ್ರಾ ಸಾಕಷ್ಟು ಮೋಸ ಮಾಡಿದ್ದಾರೆ ಎಂದಿದ್ದಾರೆ. ಚೈತ್ರಾ ಮಾತ್ರವಲ್ಲದೆ, ಚೈತ್ರಾ ಪತಿ ಶ್ರೀಕಾಂತ್ ಕೂಡ ಕಳ್ಳ ಎನ್ನುವ ಆರೋಪವನ್ನು ಅವರು ಮಾಡಿದ್ದರು.

ಇದನ್ನೂ ಓದಿ: ಸಂಕಷ್ಟದಲ್ಲಿ ಚೈತ್ರಾ ಕುಂದಾಪುರ ವಿವಾಹ; ಮದುವೆ ಆದ ಕೆಲವೇ ದಿನಕ್ಕೆ ತಂದೆಯಿಂದಲೇ ಬಂತು ದೊಡ್ಡ ಆರೋಪ

‘ನನ್ನ ಮಗಳ ವಿವಾಹವನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ನನ್ನ ಪುತ್ರಿಯ ಬೆಂಬಲ ಕೊಟ್ಟಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ’ ಎಂದು ಬಾಲಕೃಷ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ