ಊದಿನಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡ ಚೈತ್ರಾ; ಇದೆಂಥಾ ವಿಚಿತ್ರ ವರ್ತನೆ

ಸಾಮಾನ್ಯವಾಗಿ ಊದಿನ ಕಡ್ಡಿ ಹಚ್ಚಿ ಗಂಟೆ ತೂಗುತ್ತಾ ದೇವರಿಗೆ ಪೂಜೆ ಮಾಡೋದು ಸಾಮಾನ್ಯ. ಆದರೆ, ಚೈತ್ರಾ ಹಾಗಲ್ಲ. ಊದಿನಕಡ್ಡಿ ಹಚ್ಚಿದ ಅವರು ಗಂಟೆ ತೂಗುತ್ತಾ ತಮಗೆ ತಾವೇ ಪೂಜೆ ಮಾಡಿಕೊಂಡರು. ಇದು ಅನೇಕರಿಗೆ ಶಾಕಿಂಗ್ ಎನಿಸಿದೆ.

ಊದಿನಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡ ಚೈತ್ರಾ; ಇದೆಂಥಾ ವಿಚಿತ್ರ ವರ್ತನೆ
ಚೈತ್ರಾ
Follow us
ರಾಜೇಶ್ ದುಗ್ಗುಮನೆ
|

Updated on: Nov 07, 2024 | 6:50 AM

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹೊರಗೆ ಅವರ ಬಗ್ಗೆ ಇದ್ದ ನೆಗೆಟಿವ್ ಟಾಕ್​ ಸ್ವಲ್ಪ ಕಡಿಮೆ ಆಗಿದೆ. ಅವರ ಆಟ ಕೆಲವರಿಗೆ ಇಷ್ಟ ಆಗುತ್ತಿದೆ. ಈ ಮಧ್ಯೆ ಅವರು ಕೆಲವು ವಿಚಿತ್ರ ವರ್ತನೆಗಳಿಂದ ಗಮನ ಸೆಳೆಯುತ್ತಾ ಇದ್ದಾರೆ. ಈಗ ಅವರು ಊದಿನ ಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಮನೆ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಶಿಶಿರ್​ ಅಂತೂ ಚೈತ್ರಾಗೆ ಏನೋ ಆಯಿತು ಎಂಬ ರೀತಿಯಲ್ಲಿ ನೋಡುತ್ತಿದ್ದರು. ಅವರು ದೃಷ್ಟಿ ತೆಗೆದುಕೊಂಡಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಚೈತ್ರಾ ಅವರು ಹೊರಗೆ ವಿವಾದ ಮಾಡಿಕೊಂಡು ಸುದ್ದಿ ಆದವರು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕುಂದಾಪುರದ ಉದ್ಯಮಿಯಿಂದ 5 ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಚೈತ್ರಾ ಜೈಲು ಸೇರಿದ್ದರು. ಅವರು ಕಳೆದ ವರ್ಷ ಜೈಲಿನಿಂದ ಬಿಡುಗಡೆ ಆದರು. ಈಗ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ತಮ್ಮ ಆಟವನ್ನು ಅವರು ಮುಂದುವರಿಸಿಕೊಂಡು ಹೋಗಿದ್ದಾರೆ. ಈ ಮಧ್ಯೆ ಅವರು ವಿಚಿತ್ರ ವರ್ತನೆಯಿಂದ ಗಮನ ಸೆಳೆಯುತ್ತಿದ್ದಾರೆ.

ಸಾಮಾನ್ಯವಾಗಿ ಊದಿನ ಕಡ್ಡಿ ಹಚ್ಚಿ ಗಂಟೆ ತೂಗುತ್ತಾ ದೇವರಿಗೆ ಪೂಜೆ ಮಾಡೋದು ಸಾಮಾನ್ಯ. ಆದರೆ, ಚೈತ್ರಾ ಹಾಗಲ್ಲ. ಊದಿನಕಡ್ಡಿ ಹಚ್ಚಿದ ಅವರು ಗಂಟೆ ತೂಗುತ್ತಾ ತಮಗೆ ತಾವೇ ಪೂಜೆ ಮಾಡಿಕೊಂಡರು. ಇದನ್ನು ಶಿಶಿರ್ ಅವರು ಒಂದು ಕಡೆ ನಿಂತು ನೋಡುತ್ತಾ ಇದ್ದರು. ಅವರು ಇದನ್ನು ನೋಡಿ ಶಾಕ್ ಆದಂತೆ ಇತ್ತು.

ಇದನ್ನೂ ಓದಿ: ‘ನಿಮ್ಮ ನಿಯತ್ತು ನೋಡಬೇಕಿತ್ತು’; ಹನುಮಂತ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ

ಚೈತ್ರಾ ಅವರು ಈ ಮೊದಲು ಈ ರೀತಿ ಮಾಡಿದ್ದರೋ ಅಥವಾ ಇದನ್ನು ತೋರಿಸಿದ್ದು ಇದೇ ಮೊದಲೋ ಎಂಬುದು ಗೊತ್ತಿಲ್ಲ. ಒಟ್ಟಾರೆ ಅವರ ವಿಚಿತ್ರ ವರ್ತನೆ ಗಮನ ಸೆಳೆದಿದ್ದಂತೂ ನಿಜ. ಈ ವಿಚಾರ ಭಾನುವಾರ ಚರ್ಚೆ ಆಗುವ ಸಾಧ್ಯತೆ ಇದೆ. ಇದರ ಮೇಲೆ ಸುದೀಪ್ ಅವರು ಹಾಸ್ಯ ಮಾಡಿದರೂ ಮಾಡಬಹುದು. ಈ ರೀತಿ ಮಾಡುವುದರ ಹಿಂದೆ ಏನಾದರೂ ಒಳ್ಳೆಯ ಉದ್ದೇಶ ಇದೆಯೇ ಎಂಬುದನ್ನು ಚೈತ್ರಾ ಅವರೇ ಹೇಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು