‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್

ಧಾರಾವಾಹಿ ಶೂಟಿಂಗ್ ವೇಳೆ ಚಂದನ್​ ಅವರು ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು. ಬಳಿಕ ಚಂದನ್​ ಕ್ಷಮೆ ಕೇಳಿದರು.

‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್
ಚಂದನ್ ಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 01, 2022 | 3:17 PM

ಕನ್ನಡದ ಹೀರೋ ಚಂದನ್ ಕುಮಾರ್ (ಚಂದನ್ ಕುಮಾರ್) ಸುದ್ದಿಯಲ್ಲಿದ್ದಾರೆ. ತೆಲುಗಿನ ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿ ಶೂಟಿಂಗ್ ವೇಳೆ ಅವರು ಕಿರಿಕ್ ಮಾಡಿಕೊಂಡಿದ್ದಾರೆ. ಇದರಿಂದ ಅವರ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಚಂದನ್​ ಕುಮಾರ್ ಅವರಿಂದ ಸ್ಪಷ್ಟನೆ ನೀಡುವ ಕೆಲಸ ಆಗಿತ್ತು. ‘ಅಮ್ಮನಿಗೆ ಅನಾರೋಗ್ಯ ಉಂಟಾಗಿದೆ. ಆ ಚಿಂತೆಯಲ್ಲಿ ಈ ರೀತಿ ಆಯಿತು’ ಎಂದು ಹೇಳಿದ್ದರು. ಇದಕ್ಕೆ ಪೂರಕವಾಗಿ ಈಗ ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಧಾರಾವಾಹಿ ಶೂಟಿಂಗ್ ವೇಳೆ ಚಂದನ್​ ಅವರು ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು. ಬಳಿಕ ಚಂದನ್​ ಕ್ಷಮೆ ಕೇಳಿದರು. ಆದಾಗ್ಯೂ ಪರಿಸ್ಥಿತಿ ಬಿಗಡಾಯಿಸಿತ್ತು. ಆಗ ಕೈಕೈ ಮಿಲಾಯಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಚಂದನ್ ಕಡೆಯಿಂದ ಸ್ಪಷ್ಟನೆ ದೊರಕಿತ್ತು.

ಇದನ್ನೂ ಓದಿ
Image
Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ
Image
Chandan Kumar: ಕನ್ನಡದ ನಟ ಚಂದನ್​ ಕುಮಾರ್​ಗೆ ತೆಲುಗು ಧಾರಾವಾಹಿ ಶೂಟಿಂಗ್​ ಸೆಟ್​ನಲ್ಲಿ ಹಲ್ಲೆ; ವಿಡಿಯೋ ವೈರಲ್​
Image
ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್
Image
ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ; ಲಾಕ್​ಡೌನ್​ ಮಧ್ಯೆಯೇ ಸಿಂಪಲ್​ ವಿವಾಹ

‘ಅಮ್ಮನಿಗೆ ಅನಾರೋಗ್ಯ ಕಾಡಿದೆ. ನಾನು ಆ ಟೆನ್ಷನ್​​ನಲ್ಲಿ ಇದ್ದೆ. ಆಸ್ಪತ್ರೆಯಿಂದ ನೇರವಾಗಿ ಶೂಟಿಂಗ್​ಗೆ ತೆರಳಿದ್ದೆ. ಆಗ ಕ್ಯಾಮೆರಾ ಸಹಾಯಕ ನನಗೆ ಸ್ವಲ್ಪ ಕಿರಿಕಿರಿ ಮಾಡಿದರು. ಹೀಗಾಗಿ ಆ ಘಟನೆ ನಡೆಯಿತು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ.

‘ಬೇಗ ಗುಣಮುಖರಾಗಿ ಅಮ್ಮಾ. ನಿಮ್ಮನ್ನು ನೋಡಿಕೊಳ್ಳಲು ನಾನು ಅಲ್ಲಿರಬೇಕಿತ್ತು. ನಾನು ನಿಮ್ಮನ್ನು ನೋಡಲು ಬರುತ್ತಿದ್ದೇನೆ. ಲವ್​​ ಯೂ ಸೋ ಮಚ್​’ ಎಂದು ಚಂದನ್ ಕುಮಾರ್ ಬರೆದುಕೊಂಡಿದ್ದಾರೆ. ಇದಕ್ಕೆ ಚಂದನ್ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ. ‘ನಿಮ್ಮ ತಾಯಿ ಬೇಗ ಗುಣಮುಖರಾಗುತ್ತಾರೆ. ಆ ಧಾರಾವಾಹಿಯಿಂದ ಬೇಗ ಹೊರಬನ್ನಿ’ ಎಂದು ಫ್ಯಾನ್ಸ್ ಕೋರಿದ್ದಾರೆ.

ಇದನ್ನೂ ಓದಿ: Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ

ಚಂದನ್ ಕುಮಾರ್ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಚಂದನ್ ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ. ಕವಿತಾ ಗೌಡ ಅವರನ್ನು ಪ್ರೀತಿಸಿ ಮುದುವೆ ಆದರು. ಈ ಮೊದಲು ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಹೆಸರಿನ ತೆಲುಗು ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದರು. ಮದುವೆ ಸಂದರ್ಭದಲ್ಲಿ ಈ ಧಾರಾವಾಹಿಯಿಂದ ಅವರು ಹೊರ ಬಂದಿದ್ದರು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ