ಚಿರಂಜೀವಿ ನಟಿಸಿದ್ದ ಈ ಧಾರಾವಾಹಿಯಲ್ಲಿ ಶಾರುಖ್ ಖಾನ್ ಕೂಡ ಬಣ್ಣ ಹಚ್ಚಿದ್ದರು

1978ರಲ್ಲಿ ಚಿರಂಜೀವಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರ ಮೊದಲ ಚಿತ್ರವನ್ನು ಕೆ. ವಾಸು ನಿರ್ದೇಶನ ಮಾಡಿದ್ದರು. ಹಲವು ಸಿನಿಮಾಗಳಲ್ಲಿ ನಟಿಸಿದ ಬಳಿಕವೂ ಚಿರಂಜೀವಿ ಅವರು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು! ಈ ವಿಚಾರ ಅನೇಕರಿಗೆ ಗೊತ್ತಿಲ್ಲ. ಆ ಅಪರೂಪದ ಸಂಗತಿ ಬಗ್ಗೆ ಇಲ್ಲಿದೆ ಮಾಹಿತಿ..

ಚಿರಂಜೀವಿ ನಟಿಸಿದ್ದ ಈ ಧಾರಾವಾಹಿಯಲ್ಲಿ ಶಾರುಖ್ ಖಾನ್ ಕೂಡ ಬಣ್ಣ ಹಚ್ಚಿದ್ದರು
ಶಾರುಖ್​ ಖಾನ್​, ಜಿರಂಜೀವಿ
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Sep 09, 2023 | 10:31 AM

‘ಮೆಗಾ ಸ್ಟಾರ್​’ ಚಿರಂಜೀವಿ (Mega Star Chiranjeevi) ಅವರಿಗೆ ಟಾಲಿವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಸ್ಟಾರ್ ಆಗಿ ಅವರು ಚಿತ್ರರಂಗದಲ್ಲಿ ಮೆರೆಯುತ್ತಿದ್ದಾರೆ. ಚಿರಂಜೀವಿಗೆ ಈಗ 68 ವರ್ಷ ವಯಸ್ಸು. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ಎನರ್ಜಿಯಿಂದ ನಟಿಸುತ್ತಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಅವರ ನಟನೆಯ ‘ಭೋಲಾ ಶಂಕರ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ. ಅವರ ಒಪ್ಪಿಕೊಳ್ಳಲಿರುವ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ಹೀಗಿರುವಾಗಲೇ ಒಂದು ಅಚ್ಚರಿಯ ವಿಚಾರ ರಿವೀಲ್ ಆಗಿದೆ. ಚಿರಂಜೀವಿ ಅವರು ದೊಡ್ಡ ಪರದೆಗೆ ಕಾಲಿಟ್ಟ ಬಳಿಕವೂ ಧಾರಾವಾಹಿ (TV Serial) ಒಂದರಲ್ಲಿ ನಟಿಸಿದ್ದರು. ಈ ಧಾರಾವಾಹಿಯಲ್ಲಿ ಶಾರುಖ್ ಖಾನ್ (Shah Rukh Khan) ಅವರು ಅತಿಥಿ ಪಾತ್ರ ಮಾಡಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

1978ರಲ್ಲಿ ಚಿರಂಜೀವಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರ ಮೊದಲ ಚಿತ್ರವನ್ನು ಕೆ. ವಾಸು ನಿರ್ದೇಶನ ಮಾಡಿದ್ದರು. ಹಲವು ಸಿನಿಮಾಗಳಲ್ಲಿ ನಟಿಸಿದ ಬಳಿಕವೂ ಚಿರಂಜೀವಿ ಅವರು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು! ಈ ವಿಚಾರ ಅನೇಕರಿಗೆ ಗೊತ್ತಿಲ್ಲ. ಈ ಬಗ್ಗೆ ನ್ಯೂಸ್​18 ಇಂಗ್ಲಿಷ್ ವರದಿ ಮಾಡಿದೆ. 1985ರಲ್ಲಿ ಪ್ರಸಾರ ಕಂಡ ‘ರಜನಿ’ ಧಾರಾವಾಹಿಯಲ್ಲಿ ಬಸು ಚಟರ್ಜಿ ಹಾಗೂ ಪ್ರಿಯಾ ತೆಂಡೂಲ್ಕರ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. ಚಿರಂಜೀವಿ ಅವರು ಈ ಧಾರಾವಾಹಿಯ ಕೆಲವು ಎಪಿಸೋಡ್​ಗಳಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಬೇಕಿತ್ತು. ಆದರೆ, ಚಿತ್ರರಂಗದಲ್ಲಿ ಭರ್ಜರಿ ಬೇಡಿಕೆ ಇದ್ದಿದ್ದರಿಂದ ಚಿರಂಜೀವಿಗೆ ಕಾಲ್​ಶೀಟ್ ನೀಡೋಕೆ ಸಾಧ್ಯವಾಗಿಲ್ಲ. ಈ ಕಾರಣದಿಂದ ಅವರು ಒಂದು ಎಪಿಸೋಡ್​ನಲ್ಲಿ ಅತಿಥಿ ಪಾತ್ರ ಮಾಡಿದ್ದರು.

ಇದನ್ನೂ ಓದಿ: ‘ಮೆಗಾ ಸ್ಟಾರ್​’ ಚಿರಂಜೀವಿಗೆ ದೆಹಲಿಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆ; ಬೇಕಿದೆ ಒಂದು ವಾರ ವಿಶ್ರಾಂತಿ

‘ರಜನಿ’ ಧಾರಾವಾಹಿ ಡಿಡಿ ನ್ಯಾಷನಲ್​ನಲ್ಲಿ ಪ್ರಸಾರ ಕಂಡಿತ್ತು. ಶಾರುಖ್ ಖಾನ್ ಕೂಡ ಈ ಧಾರಾವಾಹಿಯ ಎರಡು ಎಪಿಸೋಡ್​ನಲ್ಲಿ ಅತಿಥಿ ಪಾತ್ರ ಮಾಡಿದ್ದರು. ಈ ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿತ್ತು. ಕೆಲವು ಸಂಘಟನೆಗಳು ಧಾರಾವಾಹಿಯನ್ನು ವಿರೋಧಿಸಿ ದೂರದರ್ಶನದ ಕಚೇರಿ ಎದುರು ಪ್ರತಿಭಟನೆ ಮಾಡಿದರು. ಹೀಗಾಗಿ, ಕೆಲವೇ ಎಪಿಸೋಡ್ ಬಳಿಕ ಈ ಧಾರಾವಾಹಿ ಕೊನೆಗೊಳಿಸಬೇಕಾಯಿತು.

ಇದನ್ನೂ ಓದಿ: Jawan Movie Review: ಶಾರುಖ್​ ಖಾನ್​ ಅಭಿಮಾನಿಗಳಿಗಾಗಿ ಅಟ್ಲಿ ಮಾಡಿದ ಮಿಕ್ಸ್​ ಮಸಾಲಾ ಸಿನಿಮಾ

ಚಿರಂಜೀವಿ ಅವರ ನಟನೆಯ ‘ಭೋಲಾ ಶಂಕರ್’ ಚಿತ್ರ ಹೀನಾಯವಾಗಿ ಸೋತಿದೆ. ತಮನ್ನಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಚಿರಂಜೀವಿ ಅವರು ದೊಡ್ಡ ಸೋಲು ಕಂಡಿದ್ದಾರೆ. ಇದಾದ ಬಳಿಕ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಅವರು ಹೆಚ್ಚು ಎಚ್ಚರಿಕೆಯಿಂದ ಸಿನಿಮಾ ಸ್ಕ್ರಿಪ್ಟ್ ಆಯ್ಕೆ ಮಾಡಿಕೊಳ್ಳಲಿ ಅನ್ನೋದು ಅಭಿಮಾನಿಗಳ ಆಸೆ.

ಇನ್ನು ಶಾರುಖ್ ಖಾನ್ ಅವರ ವಿಚಾರಕ್ಕೆ ಬರೋದಾದರೆ ‘ಜವಾನ್’ ಚಿತ್ರದ ಮೂಲಕ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಎರಡು ದಿನಕ್ಕೆ ಈ ಚಿತ್ರ 125 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ