AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದ ನಾಮಿನೇಷನ್: ಡೇಂಜರ್ ಝೋನ್​ನಲ್ಲಿ 8 ಮಂದಿ

‘ಬಿಗ್ ಬಾಸ್ ಕನ್ನಡ 12’ ಆಟದಲ್ಲಿ ಮೊದಲ ವಾರದ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಒಟ್ಟು 8 ಜನರು ಡೇಂಜರ್ ಝೋನ್ ತಲುಪಿದ್ದು ಅವರ ಮನದಲ್ಲಿ ಢವಢವ ಶುರುವಾಗಿದೆ. ಅಮಿತ್, ಕರಿಬಸಪ್ಪ, ಕಾವ್ಯಾ, ಗಿಲ್ಲಿ ನಟ, ಅಶ್ವಿನಿ, ಅಭಿಷೇಕ್, ಧನುಶ್, ಸುಧಿ ನಾಮಿನೇಟ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದ ನಾಮಿನೇಷನ್: ಡೇಂಜರ್ ಝೋನ್​ನಲ್ಲಿ 8 ಮಂದಿ
Bbk 12 Logo
ಮದನ್​ ಕುಮಾರ್​
| Edited By: |

Updated on:Apr 04, 2026 | 7:52 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ 5 ದಿನಗಳು ಕಳೆಯುತ್ತಿದ್ದಂತೆಯೇ ಆಟದ ಆರ್ಭಟ ಜೋರಾಗಿದೆ. ಒಂಟಿಗಳು ಮತ್ತು ಜಂಟಿಗಳು ಎಂಬ ಕಾನ್ಸೆಪ್ಟ್​​ನಲ್ಲಿ ಶುರುವಾದ ಆಟದಲ್ಲಿ ಪೈಪೋಟಿ ಹೆಚ್ಚಾಗಿದೆ. ಮೊದಲ ವಾರದ ನಾಮಿನೇಷನ್ (Bigg Boss Nomination) ಪ್ರಕ್ರಿಯೆ ನಡೆದಿದೆ. ಯಾರು ಬಿಗ್ ಬಾಸ್ ಮನೆಯಿಂದ ಮೊದಲ ವಾರವೇ ಹೊರಗೆ ಹೋಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಒಟ್ಟು 8 ಜನರನ್ನು ನಾಮಿನೇಟ್ ಮಾಡಲಾಗಿದೆ. ಆ 8 ಜನರು ಈಗ ಡೇಂಜರ್​ ಝೋನ್​​ನಲ್ಲಿ ಇದ್ದಾರೆ. ಆ ಪೈಕಿ ಒಬ್ಬರಿಗೆ ಬಿಗ್ ಬಾಸ್ ಜರ್ನಿ ಅಂತ್ಯವಾಗಲಿದೆ.​

ಒಂಟಿಗಳ ತಂಡದಿಂದ ಧನುಶ್ ಮತ್ತು ಕಾಕ್ರೋಚ್ ಸುಧಿ ಅವರು ನಾಮಿನೇಟ್ ಆಗಿದ್ದಾರೆ. ಟಫ್ ಸ್ಪರ್ಧಿಗಳು ಎಂಬ ಇಮೇಜ್ ಇದ್ದರೂ ಕೂಡ ಅವರು ನಾಮಿನೇಟ್ ಆಗುವಂತಾಗಿದೆ. ಟಾಸ್ಕ್​​ನಲ್ಲಿ ಅಗ್ರೆಸ್ಸಿವ್ ಆಗಿ ಆಟ ಆಡಿದರೂ ಕೂಡ ನಾಮಿನೇಟ್ ಆಗಿದ್ದಾರೆ. ಅದಕ್ಕೆ ಒಂದಷ್ಟು ಕಾರಣಗಳಿವೆ. ಮೊದಲ ಟಾಸ್ಕ್ ರದ್ದಾದಾಗ ಕಾಕ್ರೋಜ್ ಸುಧಿ ಅವರು ಏರುಧ್ವನಿಯಲ್ಲಿ ಮಾತನಾಡಿದ್ದರಿಂದಲೇ ಅವರು ನಾಮಿನೇಟ್ ಆಗಿದ್ದಾರೆ.

ಜಂಟಿಗಳ ತಂಡದಿಂದ ಆರ್​ಜೆ ಅಮಿತ್, ಬಾಡಿ ಬಿಲ್ಡರ್ ಕರಿಬಸಪ್ಪ, ಕಾವ್ಯಾ ಶೈವ, ಗಿಲ್ಲಿ ನಟ, ಅಶ್ವಿನಿ, ಅಭಿಷೇಕ್ ಅವರನ್ನು ನಾಮಿನೇಟ್ ಮಾಡಲಾಗಿದೆ. ಆರ್ಜೆ ಅಮಿತ್ ಮತ್ತು ಕರಿಬಸಪ್ಪ ಅವರು ಎಲ್ಲರ ಜೊತೆ ಹೆಚ್ಚು ಬೆರೆಯುವುದಿಲ್ಲ ಎಂಬ ಕಾರಣಕ್ಕೆ ಅವರನ್ನು ನಾಮಿನೇಟ್ ಮಾಡಲಾಗಿದೆ. ಪದೇಪದೇ ನಿಯಮ ಉಲ್ಲಂಘನೆ ಮಾಡಿದ್ದರಿಂದ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರು ನಾಮಿನೇಟ್ ಆಗಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಆಟದಲ್ಲಿ ಹಲವು ಟ್ವಿಸ್ಟ್​​ಗಳನ್ನು ನೀಡಲಾಗುತ್ತಿದೆ. ಮೂರನೇ ವಾರವೇ ಒಂದು ಫಿನಾಲೆ ಆಗಲಿದೆ ಎಂದು ಬಿಗ್ ಬಾಸ್ ಘೋಷಿಸಿದ್ದಾರೆ. ಹಾಗಾಗಿ ಮೂರನೇ ವಾರದ ಫಿನಾಲೆಯಲ್ಲಿ ವಿನ್ ಆಗಬೇಕು ಎಂಬ ಗುರಿ ಇಟ್ಟುಕೊಂಡು ಎಲ್ಲರೂ ಹರಸಾಹಸ ಮಾಡುತ್ತಿದ್ದಾರೆ. ಆದರೆ 8 ಜನರು ನಾಮಿನೇಟ್ ಆಗಿರುವುದರಿಂದ ಅವರಿಗೆ ಢವಢವ ಶುರುವಾಗಿದೆ.

ಮಲ್ಲಮ್ಮ ಅವರನ್ನು ಕೂಡ ನಾಮಿನೇಟ್ ಮಾಡಲು ಮಂಜು ಭಾಷಿಣಿ ಅವರು ಪ್ರಯತ್ನಿಸಿದರು. ಮಲ್ಲಮ್ಮ ತುಂಬ ಮುಗ್ಧರಾಗಿದ್ದು, ಮುಂದಿನ ದಿನಗಳಲ್ಲಿ ಪೈಪೋಟಿ ಹೆಚ್ಚಿದಾಗ ಅವರು ಈ ಆಟಕ್ಕೆ ಹೊಂದಿಕೊಳ್ಳುವುದು ಕಷ್ಟ ಆಗಬಹುದು ಎಂಬ ಕಾರಣಕ್ಕೆ ನಾಮಿನೇಟ್ ಮಾಡಲು ಮಂಜು ಭಾಷಿಣಿ ಪ್ರಯತ್ನಿಸಿದರು. ಆದರೆ ಅವರ ಅಭಿಪ್ರಾಯಕ್ಕೆ ಹೆಚ್ಚಿನವರ ಬೆಂಬಲ ಬಾರದ ಕಾರಣ ಮಲ್ಲಮ್ಮ ನಾಮಿನೇಟ್ ಆಗಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:32 pm, Fri, 3 October 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!