AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​

Coffee Nadu Chandu | Dance Karnataka Dance: ಆಗಸ್ಟ್​ 18ರಂದು ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಶೂಟಿಂಗ್​ ಆಗಿದೆ. ಈ ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮುಂದೆ ಹಾಡು ಹೇಳಲು ಕಾಫಿ ನಾಡು ಚಂದುಗೆ ಅವಕಾಶ ಸಿಕ್ಕಿದೆ.

Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​
ಕಾಫಿ ನಾಡು ಚಂದು, ಅನುಶ್ರೀ
TV9 Web
| Updated By: ಮದನ್​ ಕುಮಾರ್​|

Updated on: Aug 19, 2022 | 11:28 AM

Share

ರೀಲ್ಸ್​ ದುನಿಯಾದಲ್ಲಿ ಕಾಫಿ ನಾಡು ಚಂದು (Coffee Nadu Chandu) ಹೆಸರು ಕೇಳದವರೇ ಇಲ್ಲ ಎನ್ನಬಹುದು. ಎಲ್ಲೆಲ್ಲೂ ಚಂದು ವಿಡಿಯೋಗಳು ರಾರಾಜಿಸುತ್ತಿವೆ. ವೃತ್ತಿಯಲ್ಲಿ ಆಟೋ ಡ್ರೈವರ್​ ಆಗಿರುವ ಅವರು ತಮ್ಮದೇ ಶೈಲಿಯಲ್ಲಿ ಬರ್ತ್​ಡೇ ವಿಶ್​ ಮಾಡುವ ಮೂಲಕ ಫೇಮಸ್​ ಆಗಿದ್ದಾರೆ. ‘ನಾನು ಪುನೀತಣ್ಣ, ಶಿವಣ್ಣ ಅಭಿಮಾನಿ’ ಎಂದು ಹೇಳಿಕೊಳ್ಳುವ ಅವರಿಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಇದ್ದಾರೆ ಎಂಬುದು ವಿಶೇಷ. ಒಮ್ಮೆಯಾದರೂ ಶಿವರಾಜ್​ಕುಮಾರ್ (Shivarajkumar)​ ಅವರನ್ನು ಭೇಟಿ ಆಗಬೇಕು ಎಂಬುದು ಚಂದು ಮನದ ಆಸೆ ಆಗಿತ್ತು. ಅದನ್ನು ‘ಜೀ ಕನ್ನಡ’ ವಾಹಿನಿ ಈಡೇರಿಸಿದೆ. ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ (Dance Karnataka Dance) ಶೋಗೆ ಚಂದು ಅವರನ್ನು ಕರೆಸಲಾಗಿದೆ. ಈ ವೇಳೆ ಶಿವಣ್ಣನ ಎದುರು ಅವರು ತಮ್ಮದೇ ಶೈಲಿಯಲ್ಲಿ ಹಾಡು ಹೇಳಿ ರಂಜಿಸಿದ್ದಾರೆ. ಈ ಎಪಿಸೋಡ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಕೆಲವೇ ದಿನಗಳ ಹಿಂದೆ ನಿರೂಪಕಿ ಅನುಶ್ರೀ ಅವರಿಗೆ ಚಂದು ಒಂದು ಬೇಡಿಕೆ ಇಟ್ಟಿದ್ದರು. ‘ಜೀ ಕನ್ನಡದಲ್ಲಿ ಆ್ಯಂಕರಿಂಗ್​ ಮಾಡುವ ಅನುಶ್ರೀ ಅಕ್ಕ.. ನನಗೆ ಶಿವಣ್ಣ ಭೇಟಿ ಮಾಡಿಸಿ ಅನುಶ್ರೀ ಅಕ್ಕ.. ಓಹೋ ಅನುಶ್ರೀ ಅಕ್ಕ.. ಆಹಾ ಅನುಶ್ರೀ ಅಕ್ಕ.. ನಾನು ಶಿವಣ್ಣ ಅವರನ್ನು ನೋಡಲೇ ಬೇಕು ಅಕ್ಕ..’ ಎಂದು ಚಂದು ರೀಲ್ಸ್​ ಮಾಡಿದ್ದರು. ಈಗ ಅಂತೂ ಅವರ ಆಸೆ ಈಡೇರಿದೆ.

ಆಗಸ್ಟ್​ 18ರಂದು ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಶೂಟಿಂಗ್​ ಆಗಿದೆ. ಈ ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮುಂದೆ ಹಾಡು ಹೇಳಲು ಚಂದುಗೆ ಅವಕಾಶ ಸಿಕ್ಕಿದೆ. ಎಲ್ಲರನ್ನೂ ಅವರು ಭರ್ಜರಿಯಾಗಿ ಮನರಂಜಿಸಿದ್ದಾರೆ. ಚಂದು ಹೇಳಿದ ಹಾಡು ಕೇಳಿ ಶಿವಣ್ಣ ಕೂಡ ಚಪ್ಪಾಳೆ ತಟ್ಟಿದ್ದಾರೆ. ಶೂಟಿಂಗ್​ ವೇಳೆ ಮೊಬೈಲ್​ನಲ್ಲಿ ಸೆರೆಯಾದ ಈ ವೀಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಲೀಕ್​ ಆಗಿದೆ.

ಇನ್ನು, ಅನುಶ್ರೀ ಅವರ ಜೊತೆ ಚಂದು ಹೊಸದಾಗಿ ರೀಲ್ಸ್​ ಮಾಡಿದ್ದಾರೆ. ಅದು ಕೆಲವೇ ಗಂಟೆಗಳಲ್ಲಿ ಐದೂವರೆ ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಲಕ್ಷಾಂತರ ಜನರು ಲೈಕ್​ ಮಾಡಿದ್ದು, ಸಾವಿರಾರು ಕಮೆಂಟ್​ಗಳು ಬಂದಿವೆ. ಅನುಶ್ರೀ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಈ ರೀಲ್ಸ್​ ಶೇರ್​ ಮಾಡಿಕೊಂಡಿದ್ದಾರೆ. ಈ ಹಿಂದೆ ಅವರು ಚಂದು ರೀತಿಯಲ್ಲಿ ರೀಲ್ಸ್​ ಮಾಡಿದ್ದರು. ಒಟ್ಟಿನಲ್ಲಿ ಚಂದುಗೆ ಇದ್ದ ಜನಪ್ರಿಯತೆ ಈಗ ಇನ್ನಷ್ಟು ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ