AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ ಕಲರ್ಸ್ ಕನ್ನಡದ ‘ಅಗ್ನಿಸಾಕ್ಷಿ’ ಧಾರಾವಾಹಿ

ಕಲರ್ಸ್ ಕನ್ನಡ ವಾಹಿನಿಯ 'ಅಗ್ನಿಸಾಕ್ಷಿ' ಧಾರಾವಾಹಿ ಯಶಸ್ವಿಯಾಗಿ 100 ಸಂಚಿಕೆಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಅಗ್ನಿ ಹಾಗೂ ಸಾಕ್ಷಿ ನಡುವಿನ ದ್ವೇಷವು ನಿಧಾನವಾಗಿ ಪ್ರೀತಿಯಾಗಿ ಬದಲಾಗುತ್ತಿರುವ ಕಥಾಹಂದರ ವೀಕ್ಷಕರನ್ನು ಸೆಳೆದಿದ್ದು, ಚಿತ್ರತಂಡ ಸೆಟ್‌ನಲ್ಲಿ ಕೇಕ್ ಕತ್ತರಿಸಿ ಶತಕದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಿದೆ. ಆ ಸಂದರ್ಭದ ವಿವರ ಇಲ್ಲಿದೆ.

100 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ ಕಲರ್ಸ್ ಕನ್ನಡದ ‘ಅಗ್ನಿಸಾಕ್ಷಿ’ ಧಾರಾವಾಹಿ
ಅಗ್ನಿಸಾಕ್ಷಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 22, 2026 | 11:23 AM

Share

ಮುಖ್ಯಾಂಶಗಳು

  • ಶತಕದ ಸಂಭ್ರಮದಲ್ಲಿ 'ಅಗ್ನಿಸಾಕ್ಷಿ' ಧಾರಾವಾಹಿ ತಂಡ
  • ದ್ವೇಷದಿಂದ ಪ್ರೀತಿಯತ್ತ ಅಗ್ನಿ-ಸಾಕ್ಷಿ ಪ್ರೇಮ ಪ್ರಯಾಣ
  • 10,000 ಎಪಿಸೋಡ್ ಆಗಲಿ: ನಾಯಕ ಅಗ್ನಿ ಸಂತಸ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಯಶಸ್ವಿಯಾಗಿ 100 ಸಂಚಿಕೆಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಧಾರಾವಾಹಿ ತಂಡವು ಶೂಟಿಂಗ್ ಸೆಟ್‌ನಲ್ಲಿ ಕೇಕ್ ಕತ್ತರಿಸಿ ಅದ್ಧೂರಿಯಾಗಿ ಶತಕದ ಸಂಭ್ರಮವನ್ನು ಆಚರಿಸಿದೆ. ಈ ಮೊದಲು ಕಲರ್ಸ್​​ನಲ್ಲಿ ಇದೇ ಹೆಸರಲ್ಲಿ ಧಾರಾವಾಹಿ ಪ್ರಸಾರ ಕಂಡಿತ್ತು. ಈ ಜನಪ್ರಿಯ ಟೈಟಲ್ ಜೊತೆ ವಾಹಿನಿ ಮತ್ತೆ ಬಂದು, 100 ಸಂಚಿಕೆಗಳನ್ನು ಪೂರ್ಣಗೊಳಿಸಿದೆ.

ಧಾರಾವಾಹಿಯಲ್ಲಿ ನಾಯಕ ಅಗ್ನಿ ಹಾಗೂ ನಾಯಕಿ ಸಾಕ್ಷಿ ನಡುವಿನ ಕಥೆ ಪ್ರೇಕ್ಷಕರನ್ನು ಅಪಾರವಾಗಿ ಸೆಳೆದಿದೆ. ಆರಂಭದಲ್ಲಿ ಇಬ್ಬರ ನಡುವೆ ತೀವ್ರ ದ್ವೇಷ ಹಾಗೂ ಭಿನ್ನಾಭಿಪ್ರಾಯಗಳಿದ್ದರೂ, ದಿನಕಳೆದಂತೆ ಆ ದ್ವೇಷವು ನಿಧಾನವಾಗಿ ಪ್ರೀತಿಯಾಗಿ ಬದಲಾಗುವ ಹಂತಕ್ಕೆ ಬಂದು ತಲುಪಿದೆ. ಈ ಕುತೂಹಲಕಾರಿ ಕಥಾಹಂದರವು ವೀಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

100 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ ಕುರಿತು ಸಂತಸ ಹಂಚಿಕೊಂಡಿರುವ ನಾಯಕ ಅಗ್ನಿ (ಶಮಂತ್ ಬ್ರೋ ಗೌಡ), ‘ಇವತ್ತಿಗೆ ನಮ್ಮ ಧಾರಾವಾಹಿ 100 ಸಂಚಿಕೆಗಳನ್ನು ಪೂರೈಸಿದೆ. ನಿಜಕ್ಕೂ ತುಂಬಾ ಖುಷಿಯಾಗುತ್ತಿದೆ. ಇದೇ ರೀತಿ 10,000 ಸಂಚಿಕೆಗಳಾಗಲಿ ಎಂದು ಆಶಿಸುತ್ತೇನೆ. ನಿಮ್ಮೆಲ್ಲರ ಬೆಂಬಲ ಮತ್ತು ಪ್ರೀತಿ ಹೀಗೆಯೇ ಇರಲಿ’ ಎಂದು ವೀಕ್ಷಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ‘ಅಗ್ನಿಸಾಕ್ಷಿ’ ಸೀರಿಯಲ್ ಶೀರ್ಷಿಕೆ ಗೀತೆ

ಇಡೀ ‘ಅಗ್ನಿಸಾಕ್ಷಿ’ ತಂಡವು ಈ ಯಶಸ್ಸಿನ ಖುಷಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಕಥೆಯಲ್ಲಿ ಮತ್ತಷ್ಟು ರೋಚಕ ತಿರುವುಗಳು ಬರಲಿವೆ. ಕುಟುಂಬದಲ್ಲೇ ಎದುರಾಗುತ್ತಿರುವ ತೊಂದರೆ ಅಗ್ನಿ ಹೇಗೆ ಎದುರಿಸುತ್ತಾನೆ, ತಂಗಿಗೆ ಮದುವೆ ಮಾಡಬೇಕು ಎಂಬ ಅಗ್ನಿ ಕನಸು ನನಸಾಗುತ್ತಾ ಎಂಬಿತ್ಯಾದಿ ಪ್ರಶ್ನೆಗಳಿಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:18 am, Tue, 22 September 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ