‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋಗೆ ಸುದೀಪ್ ಅತಿಥಿ; ಈ ಬಾರಿ ಶಿವಣ್ಣ-ಕಿಚ್ಚ ಕಾಂಬಿನೇಷನ್

ರಿಯಾಲಿಟಿ ಶೋಗಳ ವೇದಿಕೆ ಮೇಲೆ ಸಿನಿಮಾ ಸ್ಟಾರ್​ಗಳು ಆಗಮಿಸಿ ತಮ್ಮ ಚಿತ್ರಕ್ಕೆ ಪ್ರಚಾರ ನೀಡುವುದು ಹೊಸದೇನೂ ಅಲ್ಲ. ಈಗ ‘ಕಿಚ್ಚ’ ಸುದೀಪ್ ಅವರು ‘ಡಿಕೆಡಿ 6’ ವೇದಿಕೆ ಮೇಲೆ ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಮಾಡಲಿದ್ದಾರೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋಗೆ ಸುದೀಪ್ ಅತಿಥಿ; ಈ ಬಾರಿ ಶಿವಣ್ಣ-ಕಿಚ್ಚ ಕಾಂಬಿನೇಷನ್
ಶಿವರಾಜ್​ಕುಮಾರ್-ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 30, 2022 | 6:35 AM

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ತೆರೆಗೆ ಬರೋಕೆ ಒಂದು ತಿಂಗಳು ಬಾಕಿ ಇದೆ. ಈಗಾಗಲೇ ಚಿತ್ರತಂಡ ಭರ್ಜರಿಯಾಗಿ ಸಿನಿಮಾಗೆ ಪ್ರಚಾರ ನೀಡುತ್ತಿದೆ. ಬೇರೆಬೇರೆ ರಾಜ್ಯಗಳಿಗೆ ತೆರಳಿ ಸಿನಿಮಾ ಪ್ರಚಾರ ಮಾಡಲಾಗುತ್ತಿದೆ. ಈಗ ಸುದೀಪ್ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 6​’ರ ವೇದಿಕೆ ಏರಲಿದ್ದಾರೆ. ಈ ಬಾರಿ ಶಿವರಾಜ್​ಕುಮಾರ್ ಹಾಗೂ ಸುದೀಪ್​  ಕಾಂಬಿನೇಷನ್ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆಯ ಹೈಲೈಟ್ ಆಗಿರಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ನಟನೆಯ ‘ಬೈರಾಗಿ’ ಸಿನಿಮಾ ಈ ವಾರ (ಜುಲೈ 1) ತೆರೆಗೆ ಬರುತ್ತಿದೆ. ಈ ಮಧ್ಯೆ ಅವರು ಕಿರುತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ‘ಡಿಕೆಡಿ 6’ಗೆ ಅವರು ಜಡ್ಜ್​ ಸ್ಥಾನದಲ್ಲಿ ಕೂತಿದ್ದಾರೆ. ಶಿವಣ್ಣ ಸೂಪರ್ ಆಗಿ ಡ್ಯಾನ್ಸ್ ಮಾಡುತ್ತಾರೆ. 60ನೇ ವಯಸ್ಸಿನಲ್ಲೂ ಸಖತ್ ಆಗಿ ಸ್ಟೆಪ್ ಹಾಕುತ್ತಾರೆ. ಅವರು ಅನೇಕರಿಗೆ ಮಾದರಿ. ‘ಡಿಕೆಡಿ 6’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಕೇವಲ ಜಡ್ಜ್​ ಆಗಿ ಇರದೆ ಸ್ಪರ್ಧಿಗಳಿಗೆ ಮಾರ್ಗದರ್ಶನ ಕೂಡ ನೀಡುತ್ತಿದ್ದಾರೆ. ಅವರು ಸ್ಫೂರ್ತಿದಾಯಕ ಮಾತುಗಳನ್ನು ಕೂಡ ಆಡುತ್ತಿದ್ದಾರೆ. ಈ ಕಾರಣಕ್ಕೆ ಶಿವರಾಜ್​ಕುಮಾರ್ ಎಲ್ಲರಿಗೂ ಇಷ್ಟವಾಗುತ್ತಾರೆ. ಅವರ ಜತೆ ಈ ಬಾರಿ ಕಿಚ್ಚ ಸುದೀಪ್ ಕೂಡ ಸೇರಿಕೊಳ್ಳುತ್ತಿದ್ದಾರೆ.

ಕಿರುತೆರೆಯ ವ್ಯಾಪ್ತಿ ದಿನೇ ದಿನೇ ಹಿರಿದಾಗುತ್ತಿದೆ. ರಿಯಾಲಿಟಿ ಶೋಗಳ ವೇದಿಕೆ ಮೇಲೆ ಸಿನಿಮಾ ಸ್ಟಾರ್​ಗಳು ಆಗಮಿಸಿ ತಮ್ಮ ಚಿತ್ರಕ್ಕೆ ಪ್ರಚಾರ ನೀಡುವುದು ಹೊಸದೇನೂ ಅಲ್ಲ. ಈಗ ‘ಕಿಚ್ಚ’ ಸುದೀಪ್ ಅವರು ‘ಡಿಕೆಡಿ 6’ ವೇದಿಕೆ ಮೇಲೆ ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ
Image
‘ಯಾರಾದ್ರೂ ಬಿಟ್ಟು ಹೋದ್ರೆ ಹೋಗಲಿ, ಯಾವುದೋ ಒಂದು ಹೊಸದು ಆರಂಭವಾಗುತ್ತದೆ’: ಸುದೀಪ್
Image
‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ

‘ಈ ವಾರ ಡಿಕೆಡಿ ಸ್ಟೇಜ್​ನಲ್ಲಿ ಎಂಟರ್​ಟೇನ್​ಮೆಂಟ್ ಕಿಚ್ಚು ಹಚ್ಚೋಕೆ ಬರುತ್ತಿರುವ ಗೆಸ್ಟ್​ ಯಾರು ಎಂದು ಹೇಳಿ’ ಎಂಬ ಪೋಸ್ಟ್​ಅನ್ನು ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಇದನ್ನು ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ‘ವಿಕ್ರಾಂತ್ ರೋಣ’ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಶಿವಣ್ಣ ಹಾಗೂ ಸುದೀಪ್ ಡ್ಯಾನ್ಸ್ ಮಾಡಲಿ ಎಂದು ಆಶಿಸುತ್ತಿದ್ದಾರೆ.  ‘ವಿಕ್ರಾಂತ್ ರೋಣ’ ಚಿತ್ರವನ್ನು ಜ್ಯಾಕ್ ಮಂಜು ನಿರ್ಮಾಣ ಮಾಡಿದ್ದು ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಬಾಲಿವುಡ್​ನ ಜಾಕ್ವೆಲಿನ್ ಫರ್ನಾಂಡಿಸ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ

‘ಯಾರಾದ್ರೂ ಬಿಟ್ಟು ಹೋದ್ರೆ ಹೋಗಲಿ, ಯಾವುದೋ ಒಂದು ಹೊಸದು ಆರಂಭವಾಗುತ್ತದೆ’: ಸುದೀಪ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ