AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ಸೆಪ್ಟೆಂಬರ್ 12ರಿಂದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ಶೋ

ತಾಯಂದಿರ ನೃತ್ಯ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ - ಸೂಪರ್ ಮಾಮ್’ ರಿಯಾಲಿಟಿ ಶೋ ಸೆಪ್ಟೆಂಬರ್ 12ರಿಂದ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ. ಶಿವಣ್ಣ, ತರುಣ್ ಸುಧೀರ್, ವಿಜಯ್ ರಾಘವೇಂದ್ರ ಮತ್ತು ರಚಿತಾ ರಾಮ್ ತೀರ್ಪುಗಾರರಾಗಿದ್ದು, ಅನುಶ್ರೀ ನಿರೂಪಣೆ ಮಾಡಲಿದ್ದಾರೆ. ಕುಟುಂಬದ ಜವಾಬ್ದಾರಿ ನಡುವೆ ಕನಸು ನನಸಾಗಿಸುವ ಅಮ್ಮಂದಿರ ಕಥೆ ಇಲ್ಲಿದೆ.

ಜೀ ಕನ್ನಡದಲ್ಲಿ ಸೆಪ್ಟೆಂಬರ್ 12ರಿಂದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ಶೋ
ಸೂಪರ್ ಮಾಮ್Image Credit source: Zee Kannada
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 11, 2026 | 11:26 AM

Share

ಮುಖ್ಯಾಂಶಗಳು

  • ಅಮ್ಮಂದಿರ ನೃತ್ಯ ಕನಸುಗಳಿಗೆ ಸಿಕ್ಕಿತು ಹೊಚ್ಚ ಹೊಸ ವೇದಿಕೆ
  • ಶಿವಣ್ಣ, ರಚಿತಾ ರಾಮ್ ತೀರ್ಪುಗಾರಿಕೆ
  • ವೀಕೆಂಡ್‌ನಲ್ಲಿ ಕಿರುತೆರೆ ವೀಕ್ಷಕರಿಗೆ ಸೂಪರ್ ಮಾಮ್ಸ್‌ ರಂಜನೆ

ಜೀ ಕನ್ನಡ ವಾಹಿನಿ ರಿಯಾಲಿಟಿ ಶೋಗಳ ವಿಷಯದಲ್ಲಿ ಸದಾ ಮುಂದಿದೆ. ಹೊಸ ಹೊಸ ಶೋಗಳನ್ನು ಪರಿಚಯಿಸುವ ಕೆಲಸವನ್ನು ಇದು ಮಾಡುತ್ತಲೇ ಬಂದಿದೆ. ಈ ಬಾರಿ ತಾಯಂದಿರ ನೃತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ರಿಯಾಲಿಟಿ ಶೋ ಅನ್ನು ಆರಂಭಿಸಿದೆ. ಈ ಕಾರ್ಯಕ್ರಮವು ಇದೇ ಸೆಪ್ಟೆಂಬರ್ 12ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗಲಿದೆ. ಕುಟುಂಬ, ಉದ್ಯೋಗ ಹಾಗೂ ದೈನಂದಿನ ಜವಾಬ್ದಾರಿಗಳ ನಡುವೆಯೂ ನೃತ್ಯಾಸಕ್ತಿಯನ್ನು ಜೀವಂತವಾಗಿರಿಸಿಕೊಂಡಿರುವ ತಾಯಂದಿರು ಈ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.

ಸಾಮಾನ್ಯವಾಗಿ ತಾಯಂದಿರು ತಮ್ಮ ಹೆಚ್ಚಿನ ಸಮಯವನ್ನು ಕುಟುಂಬ ಹಾಗೂ ಮನೆಗಾಗಿ ವಿನಿಯೋಗಿಸುವುದರಿಂದ, ಅವರ ಸ್ವಂತ ಆಸೆ-ಆಕಾಂಕ್ಷೆಗಳು ಬದಿಗೆ ಸರಿಯುವುದುಂಟು. ಅಂತಹ ತಾಯಂದಿರು ತಮ್ಮ ನೃತ್ಯಾಸಕ್ತಿಯನ್ನು ಪುನಃ ಕಂಡುಕೊಳ್ಳಲು ಮತ್ತು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಈ ರಿಯಾಲಿಟಿ ಶೋ ಅವಕಾಶ ನೀಡುತ್ತಿದೆ. ವರ್ಷಗಳಿಂದ ನಿಂತುಹೋಗಿದ್ದ ಕನಸುಗಳಿಗೆ ಮರುಜೀವ ನೀಡುವುದರ ಜೊತೆಗೆ, ಸ್ವಂತ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಇದು ನೆರವಾಗಲಿದೆ.

ಆರಂಭಿಕ ಆಡಿಷನ್ ಸಂಚಿಕೆಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ತಾಯಂದಿರನ್ನು ವೀಕ್ಷಕರಿಗೆ ಪರಿಚಯಿಸಲಾಗುತ್ತದೆ. ತಮ್ಮ ವೈವಿಧ್ಯಮಯ ನೃತ್ಯ ಶೈಲಿಯ ಜೊತೆಗೆ, ತಮ್ಮ ವೈಯಕ್ತಿಕ ಬದುಕಿನ ಪಯಣ, ಎದುರಿಸಿದ ಸವಾಲುಗಳು ಹಾಗೂ ಕನಸುಗಳನ್ನು ಅವರು ಈ ವೇದಿಕೆಯಲ್ಲಿ ಹಂಚಿಕೊಳ್ಳಲಿದ್ದಾರೆ. ತಾಯಂದಿರು ತಮ್ಮ ದಿನನಿತ್ಯದ ಜವಾಬ್ದಾರಿಗಳ ನಡುವೆ ತಮ್ಮ ಆಸಕ್ತಿಗಳಿಗೆ ಆದ್ಯತೆ ನೀಡಿ ನೀಡುವ ಪ್ರದರ್ಶನಗಳು ಈ ಕಾರ್ಯಕ್ರಮದ ಮುಖ್ಯ ಅಂಶವಾಗಿರಲಿವೆ.

View this post on Instagram

A post shared by Zee Kannada (@zeekannada)

ಅನುಶ್ರೀ ನಿರೂಪಣೆ, ಪ್ರಮುಖರ ತೀರ್ಪುಗಾರಿಕೆ:

ಈ ಕಾರ್ಯಕ್ರಮವನ್ನು ಅನುಶ್ರೀ ನಡೆಸಿಕೊಡಲಿದ್ದಾರೆ. ಸ್ಪರ್ಧಿಗಳ ಮೌಲ್ಯಮಾಪನ ಹಾಗೂ ಮಾರ್ಗದರ್ಶನಕ್ಕಾಗಿ ತೀರ್ಪುಗಾರರ ಬಳಗದಲ್ಲಿ ನಟ ಶಿವರಾಜ್ ಕುಮಾರ್, ನಿರ್ದೇಶಕ ತರುಣ್ ಸುಧೀರ್, ನಟ ವಿಜಯ್ ರಾಘವೇಂದ್ರ ಹಾಗೂ ನಟಿ ರಚಿತಾ ರಾಮ್ ಇರಲಿದ್ದಾರೆ. ಚಿತ್ರರಂಗದ ತಮ್ಮ ಅನುಭವಗಳ ಆಧಾರದ ಮೇಲೆ ತೀರ್ಪುಗಾರರು ಸ್ಪರ್ಧಿಗಳಿಗೆ ಸಲಹೆಗಳನ್ನು ನೀಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆ. 2ಕ್ಕೆ ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್

ವಿವಿಧ ಹಿನ್ನೆಲೆಗಳಿಂದ ಬಂದಿರುವ ತಾಯಂದಿರು ತಮ್ಮ ನೃತ್ಯ ಪ್ರತಿಭೆಯ ಮೂಲಕವೇ ಗುರುತಿಸಿಕೊಳ್ಳಲು ಮುಂದಾಗಿದ್ದು, ಈ ಶೋ ಗಮನ ಸೆಳೆಯುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:24 am, Fri, 11 September 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ