ಸ್ಟಾರ್​ ಸುವರ್ಣದಲ್ಲಿ ‘ಲವ್ ಮಾಕ್ಟೇಲ್ 2’ ಸಿನಿಮಾ; ಪ್ರಸಾರ ಯಾವಾಗ?

ಕೊವಿಡ್​ ನಿಧಾನವಾಗಿ ಕಡಿಮೆ ಆಗಿದೆ. ಆದಾಗ್ಯೂ ಕೆಲ ಫ್ಯಾಮಿಲಿ ಆಡಿಯನ್ಸ್​ ಚಿತ್ರಮಂದಿರಕ್ಕೆ ಹೆಜ್ಜೆ ಹಾಕೋಕೆ ಹಿಂಜರಿದಿದ್ದಾರೆ. ಚಿತ್ರಮಂದಿರದಲ್ಲಿ ಸಿನಿಮಾ ಮಿಸ್​ ಮಾಡಿಕೊಂಡವರು ಚಿತ್ರವನ್ನು ಟಿವಿಯಲ್ಲಿ ವೀಕ್ಷಣೆ ಮಾಡಬಹುದು.

ಸ್ಟಾರ್​ ಸುವರ್ಣದಲ್ಲಿ ‘ಲವ್ ಮಾಕ್ಟೇಲ್ 2’ ಸಿನಿಮಾ; ಪ್ರಸಾರ ಯಾವಾಗ?
‘ಲವ್ ಮಾಕ್ಟೇಲ್ 2’ ಚಿತ್ರದ ಪೋಸ್ಟರ್
Follow us
TV9 Web
| Updated By: ಮದನ್​ ಕುಮಾರ್​

Updated on:Apr 06, 2022 | 8:19 AM

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶಿಸಿದ್ದ ‘ಲವ್ ಮಾಕ್ಟೇಲ್’ ಸಿನಿಮಾ ( (Love Mocktail) ಸೂಪರ್ ಹಿಟ್​ ಆಗಿತ್ತು. ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ಇದೇ ಜೋಶ್​ನಲ್ಲಿ ‘ಲವ್​ ಮಾಕ್ಟೇಲ್​ 2’ (Love Mocktail 2) ಮಾಡಿದ್ದರು ಡಾರ್ಲಿಂಗ್​ ಕೃಷ್ಣ. ಮೊದಲ ಪಾರ್ಟ್​ಗೂ 2ನೇ ಪಾರ್ಟ್​ಗೂ ಲಿಂಕ್​ ಕೊಟ್ಟು, ಸಾಕಷ್ಟು ನಗಿಸುವ ಪಂಚಿಂಗ್​ ಡೈಲಾಗ್​ಗಳನ್ನು ಇಟ್ಟಿದ್ದರು ನಿರ್ದೇಶಕ ಕೃಷ್ಣ. ಚಿತ್ರಮಂದಿರಗಳಲ್ಲಿ, ಒಟಿಟಿಯಲ್ಲೂ ಈ ಸಿನಿಮಾ ಸಾಕಷ್ಟು ಸದ್ದು ಮಾಡಿತ್ತು. ಈಗ ಚಿತ್ರ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ.

‘ಲವ್​ ಮಾಕ್ಟೇಲ್​​’ ಚಿತ್ರದಲ್ಲಿ ಆದಿ (ಡಾರ್ಲಿಂಗ್​ ಕೃಷ್ಣ) ಹಾಗೂ ನಿಧಿ (ಮಿಲನಾ ನಾಗರಾಜ್​) ಮದುವೆ ಆಗಿತ್ತು. ಆದರೆ, ನಿಧಿ ಕ್ಯಾನ್ಸರ್​ನಿಂದ ಸಾಯುತ್ತಾಳೆ. ಆ ಬಳಿಕ ಆದಿ ಒಂಟಿ ಆಗುತ್ತಾನೆ. ಆದಿಗೆ ಮದುವೆ ಮಾಡಿಸೋ ಪ್ರಯತ್ನವೇ ಪಾರ್ಟ್​ 2ನ ಹೈಲೈಟ್​. ಈ ಚಿತ್ರವನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿ ಮೆಚ್ಚಿಕೊಂಡಿದ್ದರು. ಆ ಬಳಿಕ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆಗಿತ್ತು. ವಿಶೇಷ ಎಂದರೆ ಹಲವು ದಿನಗಳ ಕಾಲ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ಟ್ರೆಂಡಿಂಗ್​ನಲ್ಲಿಯೂ ಇತ್ತು. ಸ್ಟಾರ್​ ಸುವರ್ಣದಲ್ಲಿ  ಇಂದು (ಏಪ್ರಿಲ್​ 6) ಸಂಜೆ ಆರು ಗಂಟೆಗೆ ‘ಲವ್​ ಮಾಕ್ಟೇಲ್​ 2’ ಪ್ರಸಾರ ಆಗಲಿದೆ.

ಕೊವಿಡ್​ ನಿಧಾನವಾಗಿ ಕಡಿಮೆ ಆಗಿದೆ. ಆದಾಗ್ಯೂ ಕೆಲ ಫ್ಯಾಮಿಲಿ ಆಡಿಯನ್ಸ್​ ಚಿತ್ರಮಂದಿರಕ್ಕೆ ಹೆಜ್ಜೆ ಹಾಕೋಕೆ ಹಿಂಜರಿದಿದ್ದಾರೆ. ಚಿತ್ರಮಂದಿರದಲ್ಲಿ ಸಿನಿಮಾ ಮಿಸ್​ ಮಾಡಿಕೊಂಡವರು ಚಿತ್ರವನ್ನು ಟಿವಿಯಲ್ಲಿ ವೀಕ್ಷಣೆ ಮಾಡಬಹುದು.

‘ಲವ್ ಮಾಕ್ಟೇಲ್ 2’ನಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಕಾಣಿಸಿಕೊಂಡಿರುವುದಲ್ಲದೇ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಿಜ ಜೀವನದ ಜೋಡಿಯಾದ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಅವರ ‘ಲವ್ ಮಾಕ್ಟೇಲ್’ ಈ ಹಿಂದೆ ಮೋಡಿ ಮಾಡಿತ್ತು. ಆದ್ದರಿಂದಲೇ ಚಿತ್ರದ ಎರಡನೇ ಭಾಗದ ಬಗ್ಗೆ ನಿರೀಕ್ಷೆಗಳು ಗರಿಗೆದರಿದ್ದವು. ಈ ನಿರೀಕ್ಷೆಯನ್ನು ಚಿತ್ರ ಹುಸಿ ಮಾಡಿಲ್ಲ. ಮೊದಲ ಪಾರ್ಟ್​ನಲ್ಲಿ ಕಳೆದುಕೊಂಡಿದ್ದ ನಿಧಿಯನ್ನು ಪಾರ್ಟ್​ 2ನಲ್ಲಿ ಮತ್ತೆ ತೆರೆಮೇಲೆ ತರೋ ಪ್ರಯತ್ನವೂ ಆಗಿತ್ತು.

ಇದನ್ನೂ ಓದಿ: ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಪುನೀತ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಶೀಘ್ರವೇ ರಿಲೀಸ್​; ಅಪ್ಪು ಅಭಿಮಾನಿಗಳಿಗೆ ಗುಡ್​ ನ್ಯೂಸ್​  

Published On - 8:00 am, Wed, 6 April 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ