ಬಿಗ್ ಬಾಸ್ ಮನೆಗೆ ಬಂದ ಪತ್ನಿ ಬಳಿ ಎರಡನೇ ಮಗುವಿಗೆ ಬೇಡಿಕೆ ಇಟ್ಟ ಧನರಾಜ್

ಬಿಗ್ ಬಾಸ್ ಕನ್ನಡದ ಫ್ಯಾಮಿಲಿ ವೀಕ್‌ನಲ್ಲಿ ಧನರಾಜ್ ಅವರ ಕುಟುಂಬದ ಆಗಮನವು ಸಾಕಷ್ಟು ಉತ್ಸಾಹ ತಂದಿದೆ. ಪತ್ನಿ ಪ್ರಜ್ಞಾ ಅವರೊಂದಿಗೆ ನಡೆದ ಸಂಭಾಷಣೆಯಲ್ಲಿ, ಧನರಾಜ್ ಎರಡನೇ ಮಗುವನ್ನು ಹೊಂದುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಪ್ರಜ್ಞಾ ಅವರು ಆಶ್ಚರ್ಯಚಕಿತರಾದರೂ, ಭವಿಷ್ಯದಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ. ಈ ಭೇಟಿಯು ಸ್ಪರ್ಧಿಗಳ ನಡುವಿನ ಒತ್ತಡವನ್ನು ಕಡಿಮೆ ಮಾಡಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಿದೆ.

ಬಿಗ್ ಬಾಸ್ ಮನೆಗೆ ಬಂದ ಪತ್ನಿ ಬಳಿ ಎರಡನೇ ಮಗುವಿಗೆ ಬೇಡಿಕೆ ಇಟ್ಟ ಧನರಾಜ್
ಧನರಾಜ್-ಪ್ರಜ್ಞಾ
Follow us
ರಾಜೇಶ್ ದುಗ್ಗುಮನೆ
|

Updated on: Jan 03, 2025 | 7:12 AM

ಬಿಗ್ ಬಾಸ್ ಮನೆಯಲ್ಲಿ ಈ ವಾರ ಎಲ್ಲರೂ ಜಾಲಿ ಮೂಡ್​ನಲ್ಲಿ ಇದ್ದಾರೆ. ಏಕೆಂದರೆ ಇದು ಫ್ಯಾಮಿಲಿ ವೀಕ್. ಸ್ಪರ್ಧಿಗಳ ಮಧ್ಯೆ ಇದ್ದ ವೈರತ್ವವೆಲ್ಲ ಮರೆತು ಎಲ್ಲರೂ ಹಾಯಾಗಿ ಸಮಯ ಕಳೆಯುವಂತೆ ಮಾಡಿದ್ದು ಈ ವಾರ. ಟಾಸ್ಕ್​ನ ಜಂಜಾಟ ಬದಿಗಿಟ್ಟು ಸ್ಪರ್ಧಿಗಳ ಗಮನ ಆಟದ ಮೇಲೆ ಇದೆ. ಜನವರಿ 2ರ ಎಪಿಸೋಡ್​ನಲ್ಲಿ ಧನರಾಜ್ ಅವರ ಕುಟುಂಬ ದೊಡ್ಮನೆಗೆ ಬಂದಿದೆ. ಅಷ್ಟೇ ಅಲ್ಲ, ಅಲ್ಲಿ ಸಾಕಷ್ಟು ಫನ್ ಆ್ಯಕ್ಟಿವಿಟಿ ನಡೆದಿದೆ. ಈ ವೇಳೆ ಧನರಾಜ್ ಅವರು ಪತ್ನಿ ಬಳಿ ಎರಡನೇ ಮಗುವನ್ನು ಹೊಂದುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಧನರಾಜ್ ಅವರ ಪತ್ನಿಯ ಹೆಸರು ಪ್ರಜ್ಞಾ ಆಚಾರ್ಯ. ಅವರು ಕೂಡ ಪತಿಯ ಜೊತೆ ಸೇರಿ ವಿಡಿಯೋ ಕಂಟೆಂಟ್​ಗಳನ್ನು ಮಾಡುತ್ತಾ ಇರುತ್ತಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ ಒಂದೂವರೆ ಲಕ್ಷ ಜನ ಹಿಂಬಾಲಕರು ಇದ್ದಾರೆ. ಈಗ ಅವರು ಬಿಗ್ ಬಾಸ್ ಮನೆ ಒಳಗೆ ಬಂದಿದ್ದಾರೆ. ಪತ್ನಿ ಬಳಿ ಅವರು ನೇರ ಮಾತುಗಳಲ್ಲಿ ಎಲ್ಲವನ್ನೂ ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯ ಮುಖ್ಯದ್ವಾರದ ಎದುರು ಕುಳಿತುಕೊಳ್ಳಲು ಜಾಗವಿದೆ. ಅದು ಧನರಾಜ್ ಹಾಗೂ ಹನುಮಂತ ಅವರ ಫೇವರಿಟ್ ಜಾಗ. ಅಲ್ಲಿಯೇ ಕುಳಿತು ಧನರಾಜ್ ಅವರು ಕ್ಯಾಪ್ಟನ್ ಆಗುವ, ಉತ್ತಮ ಪಡೆಯುವ ಹಾಗೂ ಕಿಚ್ಚನ ಚಪ್ಪಾಳೆ ಪಡೆಯುವ ಕನಸು ಕಂಡಿದ್ದರು. ಅದು ನಿಜವಾಗಿದೆ. ಈ ವಿಚಾರವನ್ನು ಅವರು ಪತ್ನಿ ಬಳಿ ಹೇಳಿಕೊಂಡಿದ್ದಾರೆ. ಇದಕ್ಕೆ ಪ್ರಜ್ಞಾ ಅವರು ‘ಹಾಗಾದರೆ ಈಗೇನು ಕೇಳಿಕೊಳ್ಳುತ್ತೀರಿ’ ಎಂದು ಕೇಳಿದ್ದಾರೆ. ಆಗ ಧನರಾಜ್ ಅವರು ಮುಚ್ಚುಮರೆ ಇಲ್ಲದೆ ಉತ್ತರಿಸಿದ್ದಾರೆ.

ಇದನ್ನೂ ಓದಿ:  ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ

‘ನನಗೆ ಎರಡನೇ ಮಗು ಬೇಕು’ ಎಂದಾಗ ಪ್ರಜ್ಞಾ ಅವರು ‘ಎಂತ ಮರಾಯಾ ನೀನು’ ಎಂದು ನಾಚಿ ನೀರಾದರು. ಆಗ ಧನರಾಜ್, ‘ನೀನು ರೆಡಿ ಇಲ್ವ? ಬೇಡವಾ’ ಎಂದು ಕೇಳಿದರು. ‘ಈಗ ಮಾತನಾಡೋದು ಬೇಡ, ಇದನ್ನೆಲ್ಲ ಮನೆಗೆ ಬಂದು ಮಾತಾಡಬೇಕಲ್ವ’ ಎಂದರು ಪ್ರಜ್ಞಾ. ಆ ಬಳಿಕ ಧನರಾಜ್ ಅವರು ಸೈಲೆಂಟ್ ಆದರು. ಇತ್ತೀಚೆಗೆ ಜನಿಸಿದ ಮಗುವನ್ನು ಎತ್ತಾಡಿ ಧನರಾಜ್ ಖುಷಿಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.