Divya Uruduga: ಬಿಗ್ ಬಾಸ್ ಫಿನಾಲೆ ರೇಸ್​​ನಿಂದ ದಿವ್ಯಾ ಉರುಡುಗ ಔಟ್; ಹಿನ್ನಡೆಗೆ ಕಾರಣವಾಯ್ತು ಈ ಅಂಶ

ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು. ಆದರೂ ಅವರು ಬಿಗ್ ಬಾಸ್ ಫಿನಾಲೆ ತಲುಪಿದರು.

Divya Uruduga: ಬಿಗ್ ಬಾಸ್ ಫಿನಾಲೆ ರೇಸ್​​ನಿಂದ ದಿವ್ಯಾ ಉರುಡುಗ ಔಟ್; ಹಿನ್ನಡೆಗೆ ಕಾರಣವಾಯ್ತು ಈ ಅಂಶ
ದಿವ್ಯಾ ಉರುಡುಗ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 30, 2022 | 10:55 PM

ದಿವ್ಯಾ ಉರುಡುಗ (Divya Uruduga) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ‘ಬಿಗ್ ಬಾಸ್​ ಕನ್ನಡ ಸೀಸನ್​ 9’ರ (BBK 9) ಫೈನಲಿಸ್ಟ್​​ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದರು. ಈಗ ಅವರು ಫಿನಾಲೆ ರೇಸ್​ನಿಂದ ಔಟ್ ಆಗಿದ್ದಾರೆ. ಈ ಮೂಲಕ ಫಿನಾಲೆಯಿಂದ ಮೊದಲು ಹೊರ ಹೋದ ಸ್ಪರ್ಧಿ ಅವರಾಗಿದ್ದಾರೆ.

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು. ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು. ಆದರೂ ಅವರು ಬಿಗ್ ಬಾಸ್ ಫಿನಾಲೆ ತಲುಪಿದರು.

ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ನಡುವೆ ಅವರು ಫಿನಾಲೆಯಲ್ಲಿ ಸ್ಪರ್ಧೆ ಮಾಡಿದರು. ಆದರೆ, ಫಿನಾಲೆಯಲ್ಲಿ ಈ ಸ್ಪರ್ಧಿಗಳ ಜತೆ ಸ್ಪರ್ಧೆ ಮಾಡಲು ದಿವ್ಯಾಗೆ ಸಾಧ್ಯವಾಗಿಲ್ಲ. ಕಡಿಮೆ ವೋಟ್ ಪಡೆದು ಅವರು ಎಲಿಮಿನೇಟ್ ಆಗಿದ್ದಾರೆ. ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ಮಧ್ಯೆ ಸ್ಪರ್ಧೆ ಮುಂದುವರಿದಿದೆ.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು
Image
ಅರವಿಂದ್ ಬಳಿಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ವಾಸುಕಿ ವೈಭವ್​; ಸ್ಪರ್ಧಿಗಳಿಗೆ ಸಿಕ್ಕಾಪಟ್ಟೆ ಸರ್​ಪ್ರೈಸ್​
Image
ದಿವ್ಯಾ ಉರುಡುಗಗೆ ಕಣ್ಣೀರು ಹಾಕಿಸಿದ್ದ ರೂಪೇಶ್ ರಾಜಣ್ಣ; ದೊಡ್ಮನೆಯಲ್ಲಿ ಟಾಂಗ್ ಕೊಟ್ಟ ಅರವಿಂದ್ ಕೆಪಿ
Image
Divya Uruduga: ದಿವ್ಯಾ ಉರುಡುಗ ಸಲುವಾಗಿ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ ಅರವಿಂದ್ ಕೆಪಿ

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು

ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ

ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ