ಬಿಗ್ ಬಾಸ್ ಮನೆಗೆ ಮರಳಿದ ಬಳಿಕ ಮೌನಕ್ಕೆ ಶರಣಾದ ಪ್ರತಾಪ್; ಮೊದಲು ಮಾಡಿದ್ದೇನು?

ಎರಡು ದಿನ ಊಟ ಮಾಡದ ಕಾರಣ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರು ಬಿಗ್ ಬಾಸ್ ಮನೆಗೆ ಮರಳಿದ್ದಾರೆ.

ಬಿಗ್ ಬಾಸ್ ಮನೆಗೆ ಮರಳಿದ ಬಳಿಕ ಮೌನಕ್ಕೆ ಶರಣಾದ ಪ್ರತಾಪ್; ಮೊದಲು ಮಾಡಿದ್ದೇನು?
ಡ್ರೋನ್ ಪ್ರತಾಪ್
Follow us
ರಾಜೇಶ್ ದುಗ್ಗುಮನೆ
|

Updated on: Jan 06, 2024 | 10:56 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಸಾಕಷ್ಟು ಚರ್ಚೆ ಆಗುತ್ತಿದೆ. ಇತ್ತೀಚೆಗೆ ಬಿಗ್ ಬಾಸ್​ ಮನೆಯಿಂದ ಪ್ರತಾಪ್ ಅವರು ಹೊರ ಹೋಗಿದ್ದರು. ಅವರಿಗೆ ಅನಾರೋಗ್ಯ ಉಂಟಾಗಿತ್ತು. ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಈಗ ಅವರು ಬಿಗ್ ಬಾಸ್​ಗೆ ಮರಳಿದ್ದಾರೆ. ಈ ವೇಳೆ ಅವರು ಮೌನಕ್ಕೆ ಶರಣಾಗಿದ್ದಾರೆ. ಎಲ್ಲರ ಜೊತೆ ಹೆಚ್ಚು ಮಾತನಾಡಲು ಅವರು ಬಯಸಿಲ್ಲ. ಪ್ರತಾಪ್ ಈ ವಾರ ನಾಮಿನೇಟ್ ಆಗಿದ್ದು, ಸೇವ್ ಆಗುತ್ತಾರಾ ಅಥವಾ ಎಲಿಮಿನೇಟ್ ಆಗುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

‘ಬಿಗ್ ಬಾಸ್’ ಮನೆಯಲ್ಲಿ ಪ್ರತಾಪ್ ಅವರು ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಆರಂಭದಲ್ಲಿ ಡಲ್ ಆಗಿದ್ದ ಅವರು ನಂತರ ವೇಗ ಪಡೆದುಕೊಂಡರು. ಆದರೆ, ಇತ್ತೀಚೆಗೆ ಪ್ರತಾಪ್ ಮತ್ತೆ ಡಲ್ ಆಗಿದ್ದರು. ಅವರು ಎರಡು ದಿನ ಊಟ ಮಾಡದ ಕಾರಣ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರತಾಪ್ ಆತ್ಮಹತ್ಯೆಗೆ ಪ್ರಯತ್ನಿಸಿದರು ಎನ್ನುವ ಸುದ್ದಿಯೂ ಹರಿದಾಡಿತ್ತು. ಆದರೆ, ಇದರಲ್ಲಿ ನಿಜವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದರು.

ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಪ್ರತಾಪ್ ಅವರು ಮನೆಗೆ ಮರಳಿರುವುದನ್ನು ತೋರಿಸಲಾಗಿದೆ. ಅವರು ಬರುತ್ತಿದ್ದಂತೆ ದೇವರಿಗೆ ಊದಿನ ಕಡ್ಡಿ ಹಚ್ಚಿ ಪೂಜೆ ಮಾಡಿದ್ದಾರೆ. ಮನೆಯವರು ಮಾತನಾಡಿಸಲು ಪ್ರಯತ್ನಿಸಿದರೂ ಪ್ರತಾಪ್ ಮಾತನಾಡಿಲ್ಲ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಸುಳಿವಿಲ್ಲ, ಸ್ಪರ್ಧಿಗಳಿಗೆ ಬಿಗ್​ಬಾಸ್ ಕೊಟ್ಟ ಮಾಹಿತಿ ಏನು?

ಪ್ರತಾಪ್ ಆಸ್ಪತ್ರೆ ಸೇರುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ಟಾಸ್ಕ್ ಆಡುವಾಗ ಅವರ ಕಣ್ಣಿಗೆ ಹಾನಿ ಆಗಿತ್ತು. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈಗ ಅವರು ಮತ್ತೊಮ್ಮೆ ಚಿಕಿತ್ಸೆ ಪಡೆದು ಬಂದಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ