AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಕಿಚ್ಚನ ಬೆಂಬಲ ಸಿಕ್ಕ ಬಳಿಕ ಬದಲಾಯ್ತು ಡ್ರೋನ್​ ಪ್ರತಾಪ್​ ವರಸೆ; ಎಲ್ಲರಿಗೂ ಶಾಕ್​

Drone Prathap: ಪ್ರತಾಪ್​ ಅವರು ಎಲ್ಲರೊಂದಿಗೆ ಬೆರೆಯಬೇಕು ಎಂಬುದು ಬಹುತೇಕರ ಅಭಿಪ್ರಾಯ ಆಗಿತ್ತು. ಅವರು ಯಾವಾಗಲೂ ಚಿಂತೆಯಲ್ಲಿ ಮುಳುಗಿರುತ್ತಾರೆ ಎಂದು ಆರೋಪಿಸಲಾಗಿತ್ತು. ಆದರೆ ಈಗ ಎಲ್ಲವೂ ಬದಲಾಗಿದೆ. ಪ್ರತಾಪ್​ ಅವರಲ್ಲಿ ಆಗಿರುವ ಬದಲಾವಣೆ ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ಅದರ ಝಲಕ್​ ಇಲ್ಲಿದೆ..

Bigg Boss Kannada: ಕಿಚ್ಚನ ಬೆಂಬಲ ಸಿಕ್ಕ ಬಳಿಕ ಬದಲಾಯ್ತು ಡ್ರೋನ್​ ಪ್ರತಾಪ್​ ವರಸೆ; ಎಲ್ಲರಿಗೂ ಶಾಕ್​
ಬಿಗ್​ ಬಾಸ್​ ಕನ್ನಡ ಸೀಸನ್​ 10
ಮದನ್​ ಕುಮಾರ್​
|

Updated on: Oct 15, 2023 | 2:34 PM

Share

ಈ ಬಾರಿ ಬಿಗ್ ಬಾಸ್​ (Bigg Boss Kannada) ಮನೆಯಲ್ಲಿ ಸ್ಪರ್ಧಿಸುತ್ತಿರುವ ಸದಸ್ಯರ ಪೈಕಿ ಮೊದಲ ವಾರದಲ್ಲೇ ಅತಿ ಹೆಚ್ಚು ಚರ್ಚೆಗೆ ಒಳಗಾದ ವ್ಯಕ್ತಿ ಎಂದರೆ ಅದು ಡ್ರೋನ್​ ಪ್ರತಾಪ್​. ಹಲವು ಕಾರಣಗಳಿಂದಾಗಿ ಅವರನ್ನು ಟಾರ್ಗೆಟ್​ ಮಾಡಲಾಗಿತ್ತು. ಮೊದಲನೆಯದಾಗಿ ಅವರು ಅಸಮರ್ಥರ ಗುಂಪಿನಲ್ಲಿ ಇದ್ದರು. ಎರಡನೆಯದಾಗಿ ಅವರನ್ನು ಅನೇಕರು ಹೀಯಾಳಿಸಿದ್ದರು. ಆ ನೋವಿನಿಂದಾಗಿ ಪ್ರತಾಪ್​ (Drone Prathap) ಅವರು ಕಣ್ಣೀರು ಹಾಕಿದ್ದರು. ಆದರೆ ಶನಿವಾರದ (ಅಕ್ಟೋಬರ್​ 14) ಎಪಿಸೋಡ್​ನಲ್ಲಿ ಪ್ರತಾಪ್​ ಅವರಿಗೆ ಕಿಚ್ಚ ಸುದೀಪ್​ (Kichcha Sudeep) ಕಡೆಯಿಂದ ಬೆಂಬಲ ಸಿಕ್ಕಿತು. ಇನ್ನುಳಿದವರಿಗೆ ಕಿಚ್ಚ ಕ್ಲಾಸ್​ ತೆಗೆದುಕೊಂಡರು. ಸುದೀಪ್​ ತುಂಬಿದ ಧೈರ್ಯದಿಂದ ಪ್ರತಾಪ್​ ಸಂಪೂರ್ಣ ಬದಲಾಗಿದ್ದಾರೆ. ಅದರ ಝಲಕ್ ತೋರಿಸಲು ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ.

ಇಂದು (ಅಕ್ಟೋಬರ್ 15) ಮೊದಲ ವಾರದ ಎಲಿಮಿನೇಷನ್​ ನಡೆಯಲಿದೆ. ಅದಕ್ಕೂ ಮುನ್ನ ಸುದೀಪ್​ ಅವರು ಎಲ್ಲರನ್ನೂ ಮಾತನಾಡಿಸಲಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ನ್ಯಾಯದ ತಕ್ಕಡಿ ಏರುಪೇರಾದರೆ ಅದನ್ನು ಸುದೀಪ್​ ಅವರು ಸರಿಪಡಿಸುತ್ತಾರೆ. ಸ್ಪರ್ಧಿಗಳ ತಪ್ಪುಗಳನ್ನು ತಿದ್ದಿ ಹೇಳುತ್ತಾರೆ. ಪ್ರತಾಪ್​ರನ್ನು ನಿಂದಿಸಿದವರಿಗೆ ಕಿಚ್ಚ ಕಿವಿಮಾತು ಹೇಳಿದ್ದರಿಂದ ಪ್ರತಾಪ್​ ಅವರಿಗೆ ಏನೋ ಒಂದು ರೀತಿಯ ಸಮಾಧಾನ ಸಿಕ್ಕಂತೆ ಆಗಿದೆ. ಅಲ್ಲದೇ ಪ್ರತಾಪ್​ ಬಗ್ಗೆ ಇನ್ನುಳಿದವರಿಗೆ ಇದ್ದ ಭಾವನೆ ಕೂಡ ಬದಲಾಗಿದೆ.

ಪ್ರತಾಪ್​ ಅವರು ಎಲ್ಲರೊಂದಿಗೆ ಬೆರೆಯಬೇಕು ಎಂಬುದು ಬಹುತೇಕರ ಅಭಿಪ್ರಾಯ ಆಗಿತ್ತು. ಅವರು ಯಾವಾಗಲೂ ಚಿಂತೆಯಲ್ಲಿ ಮುಳುಗಿರುತ್ತಾರೆ ಎಂದು ಆರೋಪಿಸಲಾಗಿತ್ತು. ಆದರೆ ಈಗ ಎಲ್ಲವೂ ಬದಲಾಗಿದೆ. ಪ್ರತಾಪ್​ ಅವರು ತನಿಶಾ ಕುಪ್ಪಂಡ ಮತ್ತು ಸಂಗೀತಾ ಶೃಂಗೇರಿ ಜೊತೆ ಸೇರಿ ರ‍್ಯಾಂಪ್​ ವಾಕ್​ ಮಾಡಿದ್ದಾರೆ. ಅಷ್ಟೇ ಅಲ್ಲದೇ ಭರ್ಜರಿಯಾಗಿ ಡ್ಯಾನ್ಸ್​ ಕೂಡ ಮಾಡಿದ್ದಾರೆ. ಅವರಲ್ಲಿ ಆಗಿರುವ ಬದಲಾವನೆ ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ಮನೆಯಲ್ಲಿ ಈ ಮೊದಲು ಉಂಟಾಗಿದ್ದ ಬಿಗುವಿನ ವಾತಾವರಣವನ್ನು ತಿಳಿಗೊಳಿಸಿದ್ದಕ್ಕಾಗಿ ಕಿಚ್ಚ ಸುದೀಪ್​ ಅವರಿಗೆ ಪ್ರೇಕ್ಷಕರು ಭೇಷ್​ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಹರಕೆ ಕುರಿಯಂತಾಗಿದ್ದ ಡ್ರೋನ್ ಪ್ರತಾಪ್ ಬೆಂಬಲಕ್ಕೆ ನಿಂತ ಸುದೀಪ್, ಕ್ಷಮೆ ಕೇಳಿದ ಸಂತೋಶ್

‘ಪ್ರತಾಪ್​ ಓಪನ್ಅಪ್​ ಆಗಬೇಕು ಎಂದು ತುಕಾಲಿ ಅವರೇ ನೀವು ಹೇಳ್ತಾಯಿದ್ರಿ. ಓಪನ್​ಅಪ್​ ಮಾಡಿಸುವುದು ಎಂದರೆ ಹೀಗೆ ಸರ್​.. ನಮ್ಮದು ವರ್ತೂರು ಟೊಮ್ಯಾಟೋ ಅಲ್ಲ. ನಾಟಿ ಟೊಮ್ಯಾಟೋ.. ವೆರಿ ನಾಟಿ’ ಎಂದು ಕಿಚ್ಚ ಸುದೀಪ್​ ಅವರು ಹೇಳಿದ ಡೈಲಾಗ್​ ಹೇಳಿ ಎಲ್ಲರೂ ನಕ್ಕಿದ್ದಾರೆ. ಒಟ್ಟಿನಲ್ಲಿ ‘ಸೂಪರ್​ ಸಂಡೇ ವಿತ್​ ಸುದೀಪ​’ ಸಂಚಿಕೆ ಸಖತ್​ ಫನ್​ ಆಗಿರಲಿದೆ ಎಂಬುದಕ್ಕೆ ಈ ಪ್ರೋಮೋ ಸಾಕ್ಷಿ ಒದಗುಸುತ್ತಿದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರತಿ ದಿನ ರಾತ್ರಿ 9.30ಕ್ಕೆ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ‘ಜಿಯೋ ಸಿನಿಮಾ’ ಮೂಲಕ 24 ಗಂಟೆ ಉಚಿತವಾಗಿ ಈ ಶೋ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು