Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬರ್ತಿದೆ ‘ಭೀಮ’ ಸಿನಿಮಾ

Duniya Vijay: ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ಕೆಲ ತಿಂಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಒಟಿಟಿಯಲ್ಲಿಯೂ ಉತ್ತಮ ವೀಕ್ಷಣೆ ಕಂಡಿತ್ತು. ಇದೀಗ ಈ ಸಿನಿಮಾ ಟಿವಿಯಲ್ಲಿ ಪ್ರಸಾರ ಆಗಲಿದೆ. ‘ಭೀಮ’ ಸಿನಿಮಾ ಟಿವಿಯಲ್ಲಿ ಪ್ರಸಾರವಾಗುವ ದಿನಾಂಕ ಘೋಷಣೆ ಆಗಿದೆ.

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬರ್ತಿದೆ ‘ಭೀಮ’ ಸಿನಿಮಾ
Bheema Movie
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Mar 25, 2025 | 6:16 PM

ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆದ ಚಿತ್ರ ‘ಭೀಮ’. ದುನಿಯಾ ವಿಜಯ್ ನಿರ್ದೇಶಿಸಿ, ನಟಿಸಿರುವ ಈ ಸಿನಿಮಾ, ಸಮಾಜದಲ್ಲಿ ಯುವ ಜನತೆಗೆ ಸಿಗುತ್ತಿರುವ ಡ್ರಗ್ಸ್ ಬಗ್ಗೆ ಹಾಗೂ ಅದರ ಪರಿಣಾಮದ ಬಗ್ಗೆ ವಿವರ ಇತ್ತು. ಈಗ ಈ ಚಿತ್ರವು ಟಿವಿಯಲ್ಲಿ ಬರಲು ರೆಡಿ ಆಗಿದೆ. ಹೌದು, ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಭೀಮ’ ಸಿನಿಮಾ ಪ್ರಸಾರ ಕಾಣಲಿದೆ. ಈ ಬಗ್ಗೆ ಪ್ರೋಮೋ ಮೂಲಕ ಮಾಹಿತಿ ನೀಡಲಾಗಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಸಾಮಾನ್ಯವಾಗಿ ಹಬ್ಬ-ಹರಿದಿನಗಳಲ್ಲಿ ಹೊಸ ಸಿನಿಮಾಗಳು ಟಿವಿಯಲ್ಲಿ ಪ್ರಸಾರ ಕಾಣೋದು ವಾಡಿಕೆ. ಅದೇ ರೀತಿ ಈಗ ಯುಗಾದಿ ಹಬ್ಬ ಸಮೀಪಿಸಿದೆ. ಯುಗಾದಿ ಪ್ರಯುಕ್ತ ಮಾರ್ಚ್ 30ರ ರಾತ್ರಿ 7.30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಭೀಮ’ ಚಿತ್ರ ಪ್ರಸಾರ ಕಾಣಲಿದೆ. ದುನಿಯಾ ವಿಜಯ್ ನಟನೆಯ ಈ ಚಿತ್ರವನ್ನು ಥಿಯೇಟರ್​ನಲ್ಲಿ ಮಿಸ್ ಮಾಡಿಕೊಂಡವರು ಕಿರುತೆರೆಯಲ್ಲಿ ವೀಕ್ಷಿಸಬಹುದಾಗಿದೆ.

ದುನಿಯಾ ವಿಜಯ್ ಸಿನಿಮಾಗಳು ಸದಾ ರಾ ಆಗಿರುತ್ತವೆ. ಅವರ ನಿರ್ದೇಶನದ ‘ಸಲಗ’ ಸಿನಿಮಾ ಸಖತ್ ರಗಡ್ ಆಗಿ ಮೂಡಿ ಬಂದಿತ್ತು. ಅದೇ ರೀತಿ ‘ಭೀಮ’ ಚಿತ್ರವು ರಾ ಶೈಲಿಯಲ್ಲಿ ಪ್ರೇಕ್ಷಕರ ಎದುರು ತಂದಿದ್ದರು ವಿಜಯ್. ಇದು ಅವರದ್ದೇ ನಿರ್ದೇಶನದ ಸಿನಿಮಾ. ಈಗ ಚಿತ್ರವು ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರ ಕಾಣುತ್ತಿದೆ. ಇದನ್ನು ಕಿರುತೆರೆ ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:ತಮಿಳು ಸಿನಿಮಾದಲ್ಲಿ ದುನಿಯಾ ವಿಜಯ್, ಮುಹೂರ್ತದ ವಿಡಿಯೋ ಇಲ್ಲಿದೆ

ದುನಿಯಾ ವಿಜಯ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. 2007ರಲ್ಲಿ ರಿಲೀಸ್ ಆದ ‘ದುನಿಯಾ’ ಸಿನಿಮಾ ಅವರ ಬದುಕು ಬದಲಿಸಿತು. ಅವರು ತೆಲುಗು ಸಿನಿಮಾಗಳಲ್ಲೂ ನಟಿಸುತ್ತಾ ಇದ್ದಾರೆ. ‘ಮೂಗುತ್ತಿ ಅಮ್ಮನ್ 2’ ಹೆಸರಿನ ತಮಿಳು ಸಿನಿಮಾದಲ್ಲಿ ನಟಿಸುತ್ತಾ ಇದ್ದಾರೆ. ಇದರ ಜೊತೆಗೆ ಕನ್ನಡದಲ್ಲೂ ಅವರು ಸಿನಿಮಾ ಮಾಡುತ್ತಿದ್ದಾರೆ. ಅವರ ಮಗಳ ಚಿತ್ರಕ್ಕೆ ವಿಜಯ್ ಅವರದ್ದೇ ನಿರ್ದೇಶನ ಇದೆ.

ದುನಿಯಾ ವಿಜಯ್ ಅವರಿಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ಪರಭಾಷೆಗಳಲ್ಲಿ ವಿಜಯ್ ಅವರು ಸಿನಿಮಾ ಮಾಡುತ್ತಿದ್ದಾರೆ. ಅಲ್ಲಿ ವಿಲನ್ ಪಾತ್ರಗಳನ್ನು ಮಾಡಿ ಗಮನ ಸೆಳೆಯುತ್ತಾ ಇದ್ದಾರೆ. ಈ ಮೂಲಕ ಅವರು ಅಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Tue, 25 March 25

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ