ರಸ್ತೆ ಅಪಘಾತದಲ್ಲಿ ಖ್ಯಾತ ನಟಿ ಸುನೇತ್ರಾ ಪಂಡಿತ್​ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಪೋಷಕ ಕಲಾವಿದೆ ಸುನೇತ್ರಾ ಪಂಡಿತ್ ಅವರಿಗೆ ಆ್ಯಕ್ಸಿಡೆಂಟ್ ಆಗಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಖ್ಯಾತ ನಟಿ ಸುನೇತ್ರಾ ಪಂಡಿತ್​ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
ಕಿರುತೆರೆ ಕಲಾವಿದೆ ಸುನೇತ್ರಾ ಪಂಡಿತ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 08, 2022 | 9:52 AM

ಕನ್ನಡ ಚಿತ್ರರಂಗದ ಪಾಲಿಗೆ ಪದೇ ಪದೇ ಕಹಿ ಸುದ್ದಿ ಕೇಳಿಬರುತ್ತಿದೆ. ಕಿರುತೆರೆಯ ಖ್ಯಾತ ನಟಿ ಹಾಗೂ ಡಬ್ಬಿಂಗ್ ಕಲಾವಿದೆ ಸುನೇತ್ರಾ ಪಂಡಿತ್ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ನಟಿಗೆ ಗಂಭೀರ ಗಾಯ ಆಗಿದೆ. ಶನಿವಾರ (ಮೇ 7) ತಡರಾತ್ರಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ಸುನೇತ್ರಾ ಪಂಡಿತ್ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಎನ್.ಆರ್. ಕಾಲೋನಿಯ 9ನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕ ಹಂಪ್ ಮತ್ತು ರಸ್ತೆ ಗುಂಡಿ ಕಾರಣದಿಂದ ಆ್ಯಕ್ಸಿಡೆಂಟ್ ಆಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸುನೇತ್ರಾ ಪಂಡಿತ್ ಅವರಿಗೆ ತೀವ್ರ ರಕ್ತಸ್ರಾವ ಆಗಿದೆ. ಸ್ಥಳೀಯರ ಸಹಾಯದಿಂದ ಕೂಡಲೇ ಅವರನ್ನು ಬಸವನಗುಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.

ಸುನೇತ್ರಾ ಪಂಡಿತ್ ಅವರ ಬಗ್ಗೆ ಇನ್ನಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸವನಗುಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳ ದುಸ್ಥಿತಿ ಬಗ್ಗೆ ಇರುವ ದೂರುಗಳಿಗೆ ಲೆಕ್ಕವಿಲ್ಲ. ಅವೈಜ್ಞಾನಿಕ ಹಂಪ್, ಎಲ್ಲೆಂದರಲ್ಲಿ ಕಾಣಿಸುವ ಹೊಂಡಗಳು, ಕಾಮಗಾರಿಗಳ ಕಾರಣದಿಂದಾದ ಗುಂಡಿಗಳು ಎಲ್ಲ ಕಡೆ ಕಾಣಸಿಗುತ್ತವೆ. ಸಾವಿನ ಮನೆಯ ಬಾಗಿಲಿನಂತೆ ಎದುರಾಗುವ ಇಂಥ ರಸ್ತೆಗಳಲ್ಲಿ ವಾಹನ ಸವಾರರು ಜೀವ ಬಿಗಿ ಹಿಡಿದುಕೊಂಡು ಸಾಗಬೇಕಾದ ಸ್ಥಿತಿ ಇದೆ. ಪ್ರತಿ ದಿನ ಒಂದಿಲ್ಲೊಂದು ಅಪಘಾತ ಪ್ರಕರಣ ವರದಿ ಆಗುತ್ತಲೇ ಇರುತ್ತದೆ. ಈಗ ಪೋಷಕ ಕಲಾವಿದೆ ಸುನೇತ್ರಾ ಪಂಡಿತ್ ಅವರಿಗೆ ಆ್ಯಕ್ಸಿಡೆಂಟ್ ಆಗಿರುವ ಸುದ್ದಿ ಕೇಳಿ ಅವರ ಆಪ್ತರು ಮತ್ತು ಅಭಿಮಾನಿಗಳು ಮರುಗುವಂತಾಗಿದೆ.

ಕನ್ನಡದ ಕಿರುತೆರೆಯಲ್ಲಿ ಸುನೇತ್ರಾ ಪಂಡಿತ್ ಹೆಚ್ಚು ಖ್ಯಾತಿ ಹೊಂದಿದ್ದಾರೆ. ‘ಸಿಲ್ಲಿ ಲಲ್ಲಿ’ ಧಾರಾವಾಹಿಯಲ್ಲಿ ಅವರು ನಿಭಾಯಿಸಿದ ವಿಶಾಲು ಎಂಬ ಪಾತ್ರವನ್ನು ಫ್ಯಾನ್ಸ್ ಮರೆಯುವಂತಿಲ್ಲ. ಕಾಮಿಡಿ ಪಾತ್ರಗಳಲ್ಲಿ ಅವರು ಭರಪೂರ ಮನರಂಜನೆ ನೀಡಿದ್ದಾರೆ. ಎಲ್ಲ ಬಗೆಯ ಪಾತ್ರಗಳಿಗೂ ಜೀವ ತುಂಬವ ಮೂಲಕ ಜನಮನ ಗೆದ್ದಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಇರುವ ಅವರು, ಈಗಲೂ ಸಕ್ರಿಯರಾಗಿದ್ದಾರೆ. ಅನೇಕ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಡಬ್ಬಿಂಗ್ ಕಲಾವಿದೆ ಕೂಡ ಆಗಿರುವ ಸುನೇತ್ರಾ ಪಂಡಿತ್ ಅವರು ಹಲವು ನಟಿಯರಿಗೆ ಕಂಠದಾನ ಮಾಡಿದ್ದಾರೆ. ಅವರ ಪತಿ ರಮೇಶ್ ಪಂಡಿತ್ ಕೂಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ.

ಸದ್ಯ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುನೇತ್ರಾ ಪಂಡಿತ್ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ವೈದ್ಯರು ಅಥವಾ ಕುಟುಂಬದವರು ಹೆಲ್ತ್ ಅಪ್ಡೇಟ್ ನೀಡಬೇಕಿದೆ. ಸುನೇತ್ರಾ ಪಂಡಿತ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಕೊರೊನಾದಿಂದ ಸಹೋದರಿಯನ್ನು ಕಳೆದುಕೊಂಡಿದ್ದ ಸುನೇತ್ರಾ ಪಂಡಿತ್

2021ರಲ್ಲಿ ಕೊರೊನಾ ರಣಕೇಕೆ ಹಾಕಿದಾಗ ಸುನೇತ್ರಾ ಪಂಡಿತ್ ಅವರ ಕುಟುಂಬದಲ್ಲೂ ದುಃಖ ಆವರಿಸಿತ್ತು. ಕೊರೊನಾ ವೈರಸ್​ನಿಂದಾಗಿ ಅವರ ಸಹೋದರಿ ಸರಿತಾ ಅಸುನೀಗಿದರು. ಆ್ಯಂಬುಲೆನ್ಸ್ಗಳ ಅಸಮರ್ಪಕತೆ ಹಾಗೂ ಜನರ ನಿರ್ಲಕ್ಷ್ಯದ ಬಗ್ಗೆ ಸುನೇತ್ರಾ ಪಂಡಿತ್ ಹಾಗೂ ರಮೇಶ್ ಪಂಡಿತ್ ಅವರು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಕೊರೊನಾ ಇಲ್ಲ ಅನ್ನೋವ್ರಿಗೆ ಕಪಾಳಕ್ಕೆ ಹೊಡೆಯಿರಿ; ಅಕ್ಕನ ಕಳೆದುಕೊಂಡು ಕಣ್ಣೀರಿಟ್ಟ ನಟಿ ಸುನೇತ್ರಾ ಪಂಡಿತ್

ಇದನ್ನೂ ಓದಿ: ಬೆಳಗ್ಗೆ ಮಗನ ‘ಕಥೆಗೆ ಸಾವಿಲ್ಲ’ ಕೃತಿ ಬಿಡುಗಡೆ, ಸಂಜೆ ಕೊರೊನಾದಿಂದ ತಂದೆಯ ಸಾವು

Published On - 9:11 am, Sun, 8 May 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ