ಫಿಲ್ಮ್​​ಫೇರ್ ಅವಾರ್ಡ್ ಫಂಕ್ಷನ್​ನಲ್ಲಿ ಕ್ಲೀನ್​ಸ್ವೀಪ್ ಮಾಡಿದ ‘ಪುಷ್ಪ’; ಸಿಕ್ಕ ಪ್ರಶಸ್ತಿಗಳೆಷ್ಟು?

67ನೇ ಸಾಲಿನ ಫಿಲ್ಮ್​ಫೇರ್ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಿತು. ಗಣ್ಯಾತಿ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿ ಪೋಸ್ ನೀಡಿದರು.

ಫಿಲ್ಮ್​​ಫೇರ್ ಅವಾರ್ಡ್ ಫಂಕ್ಷನ್​ನಲ್ಲಿ ಕ್ಲೀನ್​ಸ್ವೀಪ್ ಮಾಡಿದ ‘ಪುಷ್ಪ’; ಸಿಕ್ಕ ಪ್ರಶಸ್ತಿಗಳೆಷ್ಟು?
ಅಲ್ಲು ಅರ್ಜುನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 10, 2022 | 2:38 PM

2021ರ ಅಂತ್ಯದಲ್ಲಿ ತೆರೆಗೆ ಬಂದ ‘ಪುಷ್ಪ’ ಸಿನಿಮಾ (Pushpa Movie) ಮಾಡಿದ ಹವಾ ತುಂಬಾನೇ ದೊಡ್ಡದು. ಈ ಚಿತ್ರ ಬಾಲಿವುಡ್​ನಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 300 ಕೋಟಿ ರೂಪಾಯಿ ದಾಟಿದೆ. ಈ ಚಿತ್ರ ಹಲವು ದಾಖಲೆಗಳನ್ನು ಬರೆದಿದೆ. ಈಗ ಸಿನಿಮಾ ಮತ್ತೊಂದು ದಾಖಲೆ ಮಾಡಿದೆ. ಅಕ್ಟೋಬರ್ 9ರಂದು ನಡೆದ ಫಿಲ್ಮ್​ಫೇರ್ (FilmFare) ಅವಾರ್ಡ್​ ಫಂಕ್ಷನ್​ನಲ್ಲಿ ‘ಪುಷ್ಪ’ ಚಿತ್ರ 6 ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ರಂಗು ರಂಗಿನ ವೇದಿಕೆ ಮೇಲೆ ತಂಡದವರು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಪಡೆದು ಖುಷಿಪಟ್ಟರು.

67ನೇ ಸಾಲಿನ ಫಿಲ್ಮ್​ಫೇರ್ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಿತು. ಗಣ್ಯಾತಿ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿ ಪೋಸ್ ನೀಡಿದರು. ಅವಾರ್ಡ್​ ಫಂಕ್ಷನ್​ನಲ್ಲಿ ಸ್ಯಾಂಡಲ್​ವುಡ್, ಟಾಲಿವುಡ್ ಮೊದಲಾದ ಚಿತ್ರರಂಗದ ನಟ,ನಟಿ ಹಾಗೂ ತಂತ್ರಜ್ಞರು ಭಾಗಿ ಆಗಿದ್ದರು.

ಇದನ್ನೂ ಓದಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ಕಿರುತೆರೆ ಜಗತ್ತಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ ನೋಡಿ; ಒಂದು ದಿನಕ್ಕೆ ಎಷ್ಟು ಲಕ್ಷ?
Image
‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರು ಉತ್ತಮವಾಗಿ ನಟಿಸಿದ್ದಾರೆ. ಅವರ ರಗಡ್ ಲುಕ್​ ಎಲ್ಲರಿಗೂ ಇಷ್ಟವಾಗಿತ್ತು. ಹೀಗಾಗಿ, ‘ಅತ್ಯುತ್ತಮ’ ನಟ ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ನಿರ್ದೇಶನ (ಸುಕುಮಾರ್), ಅತ್ಯುತ್ತಮ ಸಂಗೀತ ನಿರ್ದೇಶನ (ದೇವಿಶ್ರೀ ಪ್ರಸಾದ್), ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ಗಾಯಕಿ, ಅತ್ಯುತ್ತಮ ಗಾಯಕ, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಈ ಚಿತ್ರ ಪಡೆದುಕೊಡಿದೆ. ಈ ಬಗ್ಗೆ ಅಲ್ಲು ಅರ್ಜುನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದು, ಕ್ಲೀನ್ ಸ್ವೀಪ್ ಎಂದು ಬರೆದುಕೊಂಡಿದ್ದಾರೆ. ಈ ವಿಚಾರ ಅಲ್ಲು ಅರ್ಜುನ್ ಫ್ಯಾನ್ಸ್ ಖುಷಿಯನ್ನು ಹೆಚ್ಚಿಸಿದೆ. ಅಲ್ಲು ಅರ್ಜುನ್ ಟ್ವೀಟ್​ಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಇಡೀ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆಯಲ್ವಾ ನಿರ್ದೇಶಕ ಸುಕುಮಾರ್? ಇಲ್ಲಿದೆ ದೊಡ್ಡ ಪ್ಲ್ಯಾನ್​

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕಾಗಿ ಅವರು ತೂಕ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರು ಸ್ಟುಡಿಯೋ ಒಂದರಿಂದ ಹೊರ ಬರುತ್ತಿರುವ ಸಂದರ್ಭದ ಫೋಟೋ ವೈರಲ್ ಆಗಿತ್ತು. ಈ ಫೋಟೋದಲ್ಲಿ ಅವರ ದೇಹದ ತೂಕ ಹೆಚ್ಚಿದಂತೆ ಕಂಡು ಬಂದಿತ್ತು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ