
2021ರ ಅಂತ್ಯದಲ್ಲಿ ತೆರೆಗೆ ಬಂದ ‘ಪುಷ್ಪ’ ಸಿನಿಮಾ (Pushpa Movie) ಮಾಡಿದ ಹವಾ ತುಂಬಾನೇ ದೊಡ್ಡದು. ಈ ಚಿತ್ರ ಬಾಲಿವುಡ್ನಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 300 ಕೋಟಿ ರೂಪಾಯಿ ದಾಟಿದೆ. ಈ ಚಿತ್ರ ಹಲವು ದಾಖಲೆಗಳನ್ನು ಬರೆದಿದೆ. ಈಗ ಸಿನಿಮಾ ಮತ್ತೊಂದು ದಾಖಲೆ ಮಾಡಿದೆ. ಅಕ್ಟೋಬರ್ 9ರಂದು ನಡೆದ ಫಿಲ್ಮ್ಫೇರ್ (FilmFare) ಅವಾರ್ಡ್ ಫಂಕ್ಷನ್ನಲ್ಲಿ ‘ಪುಷ್ಪ’ ಚಿತ್ರ 6 ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ರಂಗು ರಂಗಿನ ವೇದಿಕೆ ಮೇಲೆ ತಂಡದವರು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಪಡೆದು ಖುಷಿಪಟ್ಟರು.
67ನೇ ಸಾಲಿನ ಫಿಲ್ಮ್ಫೇರ್ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಿತು. ಗಣ್ಯಾತಿ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಪೋಸ್ ನೀಡಿದರು. ಅವಾರ್ಡ್ ಫಂಕ್ಷನ್ನಲ್ಲಿ ಸ್ಯಾಂಡಲ್ವುಡ್, ಟಾಲಿವುಡ್ ಮೊದಲಾದ ಚಿತ್ರರಂಗದ ನಟ,ನಟಿ ಹಾಗೂ ತಂತ್ರಜ್ಞರು ಭಾಗಿ ಆಗಿದ್ದರು.
‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರು ಉತ್ತಮವಾಗಿ ನಟಿಸಿದ್ದಾರೆ. ಅವರ ರಗಡ್ ಲುಕ್ ಎಲ್ಲರಿಗೂ ಇಷ್ಟವಾಗಿತ್ತು. ಹೀಗಾಗಿ, ‘ಅತ್ಯುತ್ತಮ’ ನಟ ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ನಿರ್ದೇಶನ (ಸುಕುಮಾರ್), ಅತ್ಯುತ್ತಮ ಸಂಗೀತ ನಿರ್ದೇಶನ (ದೇವಿಶ್ರೀ ಪ್ರಸಾದ್), ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ಗಾಯಕಿ, ಅತ್ಯುತ್ತಮ ಗಾಯಕ, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಈ ಚಿತ್ರ ಪಡೆದುಕೊಡಿದೆ. ಈ ಬಗ್ಗೆ ಅಲ್ಲು ಅರ್ಜುನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದು, ಕ್ಲೀನ್ ಸ್ವೀಪ್ ಎಂದು ಬರೆದುಕೊಂಡಿದ್ದಾರೆ. ಈ ವಿಚಾರ ಅಲ್ಲು ಅರ್ಜುನ್ ಫ್ಯಾನ್ಸ್ ಖುಷಿಯನ್ನು ಹೆಚ್ಚಿಸಿದೆ. ಅಲ್ಲು ಅರ್ಜುನ್ ಟ್ವೀಟ್ಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಇಡೀ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ: Pushpa 2: ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆಯಲ್ವಾ ನಿರ್ದೇಶಕ ಸುಕುಮಾರ್? ಇಲ್ಲಿದೆ ದೊಡ್ಡ ಪ್ಲ್ಯಾನ್
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕಾಗಿ ಅವರು ತೂಕ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರು ಸ್ಟುಡಿಯೋ ಒಂದರಿಂದ ಹೊರ ಬರುತ್ತಿರುವ ಸಂದರ್ಭದ ಫೋಟೋ ವೈರಲ್ ಆಗಿತ್ತು. ಈ ಫೋಟೋದಲ್ಲಿ ಅವರ ದೇಹದ ತೂಕ ಹೆಚ್ಚಿದಂತೆ ಕಂಡು ಬಂದಿತ್ತು.