ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್ನ ವಿನ್ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗುತ್ತಾರೆ ಎಂದು ವರದಿ ಆಗಿತ್ತು. ಆದರೆ, ಹಾಗಾಗಿಲ್ಲ. ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.
ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ.
ಇದನ್ನೂ ಓದಿ: ‘ಕಾರ್ತಿಕ್ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್
ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್ ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ಈ ಬೆಲ್ಟ್ ನನ್ನ ಕೈಯಲ್ಲಿ ಇದೆ ಎಂದರೆ ಅದಕ್ಕೆ ಕಾರಣ ಸ್ಕ್ರಿಪ್ಟ್ ಕಾರಣ’ ಎಂದಿದ್ದರು ಹುಲಿ ಕಾರ್ತಿಕ್. ಸ್ಕ್ರಿಪ್ಟ್ ರೈಟರ್ ಸಂದೀಪ್ ಅವರಿಗೆ ಧನ್ಯವಾದ ಹೇಳಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.