ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?

‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ರಾಜೀವ್​ ಪಾತ್ರದ ಮೂಲಕ ಗುರುತಿಸಿಕೊಂಡ ಗಗನ್​ ಚಿನ್ನಪ್ಪ ಅವರು ಮೂರನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ.

ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?
ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 15, 2021 | 8:33 PM

ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅನೇಕ ಅಭಿಮಾನಿಗಳು ಪ್ರಯತ್ನಪಡುತ್ತಿರುತ್ತಾರೆ. ಆದರೆ, ಬಹುತೇಕ ಸೆಲೆಬ್ರಿಟಿಗಳು ಇದಕ್ಕೆ ಆಸ್ಪದ ಕೊಡುವುದಿಲ್ಲ. ಆದರೆ, ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ಮಾಹಿತಿ ಹಂಚಿಕೊಳ್ಳೋಕೆ ಬಿಗ್​ ಬಾಸ್ ಮಿನಿ ಸೀಸನ್​ ಆರಂಭಗೊಂಡಿದೆ. ತೆರೆಮೇಲೆ ಮಿಂಚುತ್ತಿದ್ದ ಕಲರ್ಸ್​ ಕನ್ನಡ ಕಿರುತೆರೆ ಕಲಾವಿದರು ಒಂದು ಕಡೆ ಸೇರಿದ್ದು, ವೀಕ್ಷಕರಿಗೆ ಭರಪೂರ ಮನರಂಜನೆ ಸಿಗುತ್ತಿದೆ.

‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ರಾಜೀವ್​ ಪಾತ್ರದ ಮೂಲಕ ಗುರುತಿಸಿಕೊಂಡ ಗಗನ್​ ಚಿನ್ನಪ್ಪ ಅವರು ಮೂರನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ಪ್ರವೇಶಿಸಿರುವುದಕ್ಕೆ ಅವರು ಸಖತ್​ ಥ್ರಿಲ್​ ಆಗಿದ್ದಾರೆ. ಬಿಗ್​ ಬಾಸ್​ ಮನೆ ಪ್ರವೇಶಿಸುತ್ತಿದ್ದಂತೆ ಅವರಿಗೆ ಎದುರಾದ ಅಕುಲ್​ ಬಾಲಾಜಿ ಅವರು ನಾನಾ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಕೆಲ ವೈಯಕ್ತಿಕ ವಿಚಾರಗಳನ್ನು ಗಗನ್​ ಚಿನ್ನಪ್ಪ ಹಂಚಿಕೊಂಡಿದ್ದಾರೆ.

ನಿಮಗಿಂತ ವಯಸ್ಸಿನಲ್ಲಿ ದೊಡ್ಡವರ ಜತೆ ನೀವು ಹೆಚ್ಚು ಬೆರೆಯುತ್ತೀರಂತೆ ಹೌದಾ? ಎಂದು ಪ್ರಶ್ನೆ ಮಾಡಲಾಯಿತು. ಇದನ್ನು ಗಗನ್ ಒಪ್ಪಿಕೊಂಡಿದ್ದಾರೆ. ‘ಅಪ್ಪನ ಫ್ರೆಂಡ್ಸ್​ ನನ್ನ ತಂದೆ ಜತೆ ಬೆರೆಯೋದು ಕಡಿಮೆ. ಅವರು ನನ್ನ ಜತೆ ಸಮಯ ಕಳೆದಿದ್ದೇ ಹೆಚ್ಚು. ನಾವೆಲ್ಲರೂ ಒಟ್ಟಿಗೆ ಕೂತು ಕುಡಿತೀವಿ’ ಎಂದರು ಅವರು.

ಗಗನ್​ಗೆ ಸೂಪರ್​ ಸೀನಿಯರ್​ಮೇಲೆ ಕ್ರಶ್​ ಆಗಿತ್ತು ಎನ್ನುವ ವಿಚಾರ ಕೂಡ ಬಯಲಾಗಿದೆ. ‘ಪದವಿ ಸೇರಿದ್ದೆ. ಆ ಹುಡುಗಿ ಫೈನಲ್​ ಇಯರ್​ ಅಲ್ಲಿದ್ದಳು. ಅವಳ ಮೇಲೆ ಕ್ರಶ್​ ಆಗಿತ್ತು. ಅನೇಕ ಬಾರಿ ನಾವು ಒಟ್ಟಿಗೆ ಕಾಣಿಸಿಕೊಂಡಿದ್ವಿ’ ಎಂದಿದ್ದಾರೆ ಗಗನ್.

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭವಾಗಿದೆ. ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿರೋದು ವಿಶೇಷ. ಕೊನೆಯ ಎಪಿಸೋಡ್​ಅನ್ನು ಕಿಚ್ಚ ಸುದೀಪ್​ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮಿನಿ ಸೀಸನ್​ ನಿರೂಪಣೆಗೆ ಸುದೀಪ್​ ಬರೋದು ಪಕ್ಕಾ; ಆದರೆ ಯಾವಾಗ?

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು