AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ: ಆರ್​ಆರ್​ ನಗರದಲ್ಲಿ ದುರಂತ ಅಂತ್ಯ

ಕಿರುತೆರೆ ಸೀರಿಯಲ್​ಗಳ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ನಂದಿನಿ ಸಿಎಂ ಅವರು ಮೃತರಾಗಿದ್ದಾರೆ. ಕನ್ನಡದ ಧಾರಾವಾಹಿಗಳು ಮಾತ್ರವಲ್ಲದೇ ತಮಿಳಿನ ಸೀರಿಯಲ್​​ನಲ್ಲೂ ನಂದಿನಿ ಅವರು ಅವಕಾಶ ಪಡೆದಿದ್ದರು. ಆದರೆ ಈಗ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ: ಆರ್​ಆರ್​ ನಗರದಲ್ಲಿ ದುರಂತ ಅಂತ್ಯ
Nandini CM
Mangala RR
| Edited By: |

Updated on:Dec 29, 2025 | 7:42 PM

Share

ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್​ಆರ್​ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ (Nandini CM Death) ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ.

ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರ ಮಾಡುತ್ತಿದ್ದರು. ದುರ್ಗಾ ಮತ್ತು ಕನಕ ಎಂಬ ಪಾತ್ರಗಳ ಮೂಲಕ ಅವರು ವೀಕ್ಷಕರಿಗೆ ಪರಿಚಿತರಾಗಿದ್ದರು. ಅವರ ನಿಧನದಿಂದ ಕಿರುತೆರೆ ಲೋಕದಲ್ಲಿ ಶೋಕ ಆವರಿಸಿದೆ.

ಇದನ್ನೂ ಓದಿ: ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ

ನಂದಿನಿ ಅವರು ಮೂಲತಃ ಕೊಟ್ಟೂರಿನವರು. ಆದರೆ ಬೆಂಗಳೂರಿನಲ್ಲಿ ವಾಸವಿದ್ದರು. ಪಿಜಿಯಲ್ಲಿ ವಾಸವಿದ್ದ ಅವರು ತಾಯಿಗೆ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ನಂದಿನಿ ನಿಧನದ ಸುದ್ದಿ ಕೇಳಿ ‘ಗೌರಿ’ ಧಾರಾವಾಹಿ ತಂಡಕ್ಕೆ ಆಘಾತ ಎದುರಾಗಿದೆ. ವೀಕ್ಷಕರು ಹಾಗೂ ಆಪ್ತರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

‘ಗೌರಿ’ ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುವ ಅವಕಾಶವನ್ನು ನಂದಿನಿ ಅವರು ಪಡೆದಿದ್ದರು. ಅವರ ನಟನೆಗೆ ವೀಕ್ಷಕರಿಗೆ ಮೆಚ್ಚುಗೆ ಸಿಕ್ಕಿತ್ತು. ಕಿರುತೆರೆ ಲೋಕದಲ್ಲಿ ಹೊಸ ಹೊಸ ಅವಕಾಶಗಳು ಅವರಿಗೆ ಸಿಗುವ ಸಾಧ್ಯತೆ ದಟ್ಟವಾಗಿತ್ತು. ಈ ಸಮಯದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬ ಪ್ರಶ್ನೆ ಕಾಡುತ್ತಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:21 pm, Mon, 29 December 25

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ