AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ನವೆಂಬರ್ 16ರಿಂದ ‘ಗೌರಿಪುತ್ರ’ ಧಾರಾವಾಹಿ ಪ್ರಸಾರ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಹೊಸ ಧಾರಾವಾಹಿ ‘ಗೌರಿಪುತ್ರ’ ಪ್ರೋಮೋ ಬಿಡುಗಡೆಯಾಗಿದ್ದು, ವೀಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ನಟ ರಿತ್ವಿಕ್ ಕೃಪಾಕರ್ ಹಾಗೂ ಅನು ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಭಾವುಕ ಕುಟುಂಬ ಆಧಾರಿತ ಧಾರಾವಾಹಿಯು ತಾಯಿಯ ಕನಸು ಈಡೇರಿಸುವ ಮಗನ ಕಥಾಹಂದರ ಹೊಂದಿದ್ದು, ನವೆಂಬರ್ 16ರಿಂದ ಅಧಿಕೃತವಾಗಿ ಪ್ರಸಾರವಾಗಲಿದೆ.

ಜೀ ಕನ್ನಡದಲ್ಲಿ ನವೆಂಬರ್ 16ರಿಂದ ‘ಗೌರಿಪುತ್ರ’ ಧಾರಾವಾಹಿ ಪ್ರಸಾರ
Gouri Putra
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 31, 2026 | 5:04 PM

Share

ಕಿರುತೆರೆ ವೀಕ್ಷಕರಿಗೆ ವಿಭಿನ್ನ ಹಾಗೂ ಭಾವನಾತ್ಮಕ ಕಥೆಗಳನ್ನು ನೀಡುತ್ತಾ ಬಂದಿರುವ ಜೀ ಕನ್ನಡ ವಾಹಿನಿ, ಈಗ ಮತ್ತೊಂದು ಕೌತುಕಭರಿತ ಹಾಗೂ ಕುಟುಂಬ ಆಧಾರಿತ ಹೊಸ ಧಾರಾವಾಹಿ ‘ಗೌರಿಪುತ್ರ’ ಪ್ರಸಾರಕ್ಕೆ ಸಜ್ಜಾಗಿದೆ. ಈ ಧಾರಾವಾಹಿಯ ಹೊಸ ಪ್ರೋಮೋ ಪ್ರೇಕ್ಷಕರ ಗಮನ ಸೆಳೆದಿದ್ದು, ಕಥೆಯ ತಿರುಳೇನು ಎಂಬುದರ ಸುಳಿವು ನೀಡಿದೆ.

ರಿತ್ವಿಕ್ ಕೃಪಾಕರ್: ‘ರಾಮಾಚಾರಿ’ ಧಾರಾವಾಹಿಯ ಮೂಲಕ ಮನೆಮಾತಾಗಿರುವ ನಟ ರಿತ್ವಿಕ್ ಕೃಪಾಕರ್ ಈ ಧಾರಾವಾಹಿಯಲ್ಲಿ ನಾಯಕನಾಗಿ (ಮಾಸ್ ಮತ್ತು ಕ್ಲಾಸ್ ಲುಕ್‌ನಲ್ಲಿ) ಕಾಣಿಸಿಕೊಳ್ಳಲಿದ್ದಾರೆ.

ಅನು ಪ್ರಭಾಕರ್: ಚಿತ್ರರಂಗದ ಹಿರಿಯ ಹಾಗೂ ಜನಪ್ರಿಯ ನಟಿ ಅನು ಪ್ರಭಾಕರ್ ಅವರು ಮುಖ್ಯ ಪಾತ್ರವಾದ ‘ಗೌರಿ’ಯಾಗಿ ಬಣ್ಣ ಹಚ್ಚಿದ್ದಾರೆ.

ಇತರ ಕಲಾವಿದರು: ಹಿರಿಯ ನಟ ರಮೇಶ್ ಭಟ್, ಮಹತಿ ಭಟ್ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.

View this post on Instagram

A post shared by Zee Kannada (@zeekannada)

ಬಿಡುಗಡೆಯಾಗಿರುವ ಹೊಸ ಪ್ರೋಮೋ ಪ್ರಕಾರ, ತಾಯಿಯೊಬ್ಬಳ ಆಸೆಯನ್ನು ಈಡೇರಿಸಲು ಮಗ ಹೊರಡುವ ಭಾವನಾತ್ಮಕ ಹಾಗೂ ಅನಿರೀಕ್ಷಿತ ತಿರುವುಗಳ ಕಥೆ ಇದಾಗಿದೆ. ಅಮ್ಮನಿಗಾಗಿ, ಅಮ್ಮನಿಗೆ ತವರು ಮನೆ ಮರಳಿಸಿಕೊಡಲು ಮದುವೆ ಮಂಟಪದಲ್ಲಿ ತನಗಿಷ್ಟವಿಲ್ಲದ ಹುಡುಗೊ ಜೊತೆ ಮದುವೆ ಆಗುವ ಕಥೆ ಇದರಲ್ಲಿದೆ. ಕಥೆಯ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ದ್ವಿಗುಣಗೊಳಿಸಿದೆ.

ಇದನ್ನೂ ಓದಿ: ಜೀ ಕನ್ನಡದಲ್ಲಿ ಹೊಸ ಧಾರಾವಾಹಿ; ರಿತ್ವಿಕ್ ಕೃಪಾಕರ್ ಹಾಗೂ ಅನು ಪ್ರಭಾಕರ್ ಅಭಿನಯದ ‘ಗೌರಿಪುತ್ರ’ ಶೀಘ್ರದಲ್ಲೇ ಪ್ರಾರಂಭ

ಹೊಸ ಶೈಲಿಯ ಕಥಾಹಂದರ ಹೊಂದಿರುವ ‘ಗೌರಿಪುತ್ರ’ ಧಾರಾವಾಹಿಯು ನವೆಂಬರ್ 16ರಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಧಾರಾವಾಹಿಯನ್ನು ನೋಡಲು ವೀಕ್ಷಕರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:02 pm, Sat, 31 October 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?
ವಿಜಯಪುರ ವಿಮಾನ ನಿಲ್ದಾಣ ಜೊತೆಗೆ ಪೈಲಟ್ ಟ್ರೈನಿಂಗ್ ಶಾಲೆ ಆರಂಭಕ್ಕೆ ಪ್ಲಾನ್
ವಿಜಯಪುರ ವಿಮಾನ ನಿಲ್ದಾಣ ಜೊತೆಗೆ ಪೈಲಟ್ ಟ್ರೈನಿಂಗ್ ಶಾಲೆ ಆರಂಭಕ್ಕೆ ಪ್ಲಾನ್
ಕಾಗೋಡು ತಿಮ್ಮಪ್ಪಗೆ ಡಿಕೆಶಿ​ ವಿಡಿಯೋ ಕಾಲ್​​: ಆರೋಗ್ಯ ವಿಚಾರಿಸಿದ ಸಿಎಂ
ಕಾಗೋಡು ತಿಮ್ಮಪ್ಪಗೆ ಡಿಕೆಶಿ​ ವಿಡಿಯೋ ಕಾಲ್​​: ಆರೋಗ್ಯ ವಿಚಾರಿಸಿದ ಸಿಎಂ
ಸೌಜನ್ಯ ಶವ ಪತ್ತೆಯಾದ ಸ್ಥಳದಲ್ಲಿ ಎಸ್‌ಐಟಿ ತಂಡದಿಂದ ಕ್ರೈಂ ಸೀನ್ ಮರುಸೃಷ್ಟಿ
ಸೌಜನ್ಯ ಶವ ಪತ್ತೆಯಾದ ಸ್ಥಳದಲ್ಲಿ ಎಸ್‌ಐಟಿ ತಂಡದಿಂದ ಕ್ರೈಂ ಸೀನ್ ಮರುಸೃಷ್ಟಿ
ಬೆಂಗಳೂರಿನಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆ
ಬೆಂಗಳೂರಿನಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆ
ಕೋರಮಂಗಲದಲ್ಲಿ ಬಿಎಂಟಿಸಿ ಬಸ್ ಅಗ್ನಿ ಅವಘಡ; ತಪ್ಪಿದ ಅನಾಹುತ!
ಕೋರಮಂಗಲದಲ್ಲಿ ಬಿಎಂಟಿಸಿ ಬಸ್ ಅಗ್ನಿ ಅವಘಡ; ತಪ್ಪಿದ ಅನಾಹುತ!
ಮುಗಿಯಿತು ಮದುವೆ ಸಂಭ್ರಮ, ಶುರು ಆಯ್ತು ಎವಿಕ್ಷನ್ ಭಯ: ವಿಡಿಯೋ
ಮುಗಿಯಿತು ಮದುವೆ ಸಂಭ್ರಮ, ಶುರು ಆಯ್ತು ಎವಿಕ್ಷನ್ ಭಯ: ವಿಡಿಯೋ
ಮಹಿಳಾ ಹೈನುಗಾರರ ಜೊತೆ ಸಂವಾದ: ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಮಹಿಳಾ ಹೈನುಗಾರರ ಜೊತೆ ಸಂವಾದ: ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ