AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ಸ್​​ ಧಾರಾವಾಹಿಯಲ್ಲಿ ಗೌತಮಿ ಜಾಧವ್; ಪ್ರೋಮೋ ಮೂಲಕ ಫ್ಯಾನ್ಸ್​ಗೆ ಬಿಗ್ ಸರ್​ಪ್ರೈಸ್

ಗೌತಮಿ ಜಾಧವ್ ಅವರು ಬಿಗ್ ಬಾಸ್ ಕನ್ನಡದ ಬಳಿಕ ಕಲರ್ಸ್ ಕನ್ನಡದ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿಂಧೂರಿ ಎಂಬ ಪೊಲೀಸ್ ಪಾತ್ರದಲ್ಲಿ ಅವರು ಮಿಂಚಲು ರೆಡಿ ಆಗಿದ್ದಾರೆ. "ಸತ್ಯ" ಧಾರಾವಾಹಿಯ ನಂತರ ಅವರ ಈ ಹೊಸ ಪಾತ್ರ ಅಭಿಮಾನಿಗಳಿಗೆ ಸಂತೋಷ ತಂದಿದೆ. ಅವರ ಟಾಮ್ ಬಾಯ್ ಲುಕ್ ಬದಲಾಗಿ. ಸೀರೆಯಲ್ ಲಕ್ಷಣವಾಗಿ ಕಾಣಿಸಿಕೊಳ್ಳಲಿದ್ದಾರೆ.

ಕಲರ್ಸ್​​ ಧಾರಾವಾಹಿಯಲ್ಲಿ ಗೌತಮಿ ಜಾಧವ್; ಪ್ರೋಮೋ ಮೂಲಕ ಫ್ಯಾನ್ಸ್​ಗೆ ಬಿಗ್ ಸರ್​ಪ್ರೈಸ್
ಗೌತಮಿ
ರಾಜೇಶ್ ದುಗ್ಗುಮನೆ
|

Updated on: May 13, 2025 | 7:00 AM

Share

ಗೌತಮಿ ಜಾಧವ್ (Goutami Jadhav) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅತ್ತಿತ್ತ ಸುತ್ತಾಡುತ್ತಾ, ಫೋಟೋಶೂಟ್ ಮಾಡಿಸುತ್ತಾ ಸಮಯ ಕಳೆಯುತ್ತಿದ್ದಾರೆ. ಅವರು ನಟನೆಗೆ ಮರಳಬೇಕು ಎಂಬುದು ಅಭಿಮಾನಿಗಳ ಕೋರಿಕೆಯಾದರೂ ಅದು ಈಡೇರಿರಲಿಲ್ಲ. ಹೀಗಿರುವಾಗಲೇ ಗೌತಮಿ ಜಾಧವ್ ಅವರ ಕಡೆಯಿಂದ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಅವರು ಕಲರ್ಸ್ ಕನ್ನಡದ ಧಾರಾವಾಹಿಯಲ್ಲಿ ನಟಿಸಲಿದ್ದಾರೆ. ಹಾಗಾದರೆ ಹೊಸ ಧಾರಾವಾಹಿ ಆರಂಭ ಆಗುತ್ತಿದೆಯೇ? ಇಲ್ಲ. ಈಗ ಪ್ರಸಾರ ಕಾಣುತ್ತಿರುವ ಧಾರಾವಾಹಿಯಲ್ಲೇ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಇದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

ಕಲರ್ಸ್ ಕನ್ನಡದಲ್ಲಿ ‘ಭಾರ್ಗವಿ LL.B’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಜನಮನ ಗೆದ್ದಿದೆ. ಭಾರ್ಗವಿ ಪಾತ್ರದಲ್ಲಿ ರಾಧಾ ಭಗವತಿ ಅವರು ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಭಾರ್ಗವಿಗೆ ಪ್ರಾಣಾಪಯವಿದೆ. ಅವಳನ್ನು ಕಾಪಾಡಲು ಗೌತಮಿ ಜಾಧವ್ ಅವರ ಆಗಮನ ಆಗಿದೆ. ಅವರು ವಿಶೇಷ ಅತಿಥಿ ಪಾತ್ರದಲ್ಲಿ ಗಮನ ಸೆಳೆಯಲಿದ್ದಾರೆ.

ಇದನ್ನೂ ಓದಿ
Image
‘ಸದಾ ಹೃದಯದಲ್ಲಿರುತ್ತೀರಿ’; ರಾಕೇಶ್ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್
Image
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Image
‘ಕಾಂತಾರ: ಚಾಪ್ಟರ್ 1’ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ
Image
ವಿಧಿ ಕ್ರೂರ; ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ

‘ಭಾರ್ಗವಿ LL.B’ ಧಾರಾವಾಹಿ ಕಲರ್ಸ್ ಕನ್ನಡದಲ್ಲಿ ಪ್ರತಿನಿತ್ಯ ರಾತ್ರಿ 8.30ಕ್ಕೆ ಪ್ರಸಾರ ಕಾಣಲಿದೆ. ‘ನಾನು ಎಲ್ಲೇ ಕಾಲಿಟ್ಟರೂ ಅಲ್ಲೊಂದು ಸೌಂಡ್ ಇರುತ್ತೆ’ ಎಂದು ಗೌತಮಿ ಜಾಧವ್ ಎಂಟ್ರಿ ಆಗಿದೆ. ಕಿಡಿಗೇಡಿಗಳ ಸುತ್ತ ಸಿಕ್ಕಿ ಬಿದ್ದಿರುವ ಭಾರ್ಗವಿಯನ್ನು ರಕ್ಷಿಸಲು ಬರೋ ಸಿಂಧೂರಿ ಹೆಸರಿನ ಪೊಲೀಸ್ ಪಾತ್ರದಲ್ಲಿ ಅವರು ಮಿಂಚುತ್ತಿದ್ದಾರೆ.

‘ಸತ್ಯ’ ಧಾರಾವಾಹಿಯಲ್ಲಿ ಗೌತಮಿ ಜಾಧವ್ ಅವರು ಮಾಸ್ ಡೈಲಾಗ್ ಮೂಲಕ ಫೇಮಸ್ ಆಗಿದ್ದರು. ಟಾಮ್ ಬಾಯ್ ಲುಕ್​ನಲ್ಲಿ ಗಮನ ಸೆಳೆದಿದ್ದರು. ಇಲ್ಲಿ ಅವರ ಟಾಮ್ ಬಾಯ್ ಲುಕ್ ಹೋಗಿದೆ. ಇಲ್ಲಿ ಅವರು ಲಕ್ಷಣವಾಗಿ ಸೀರೆ ಉಟ್ಟು ಬಂದಿದ್ದಾರೆ. ಆದರೆ, ಗತ್ತು ಮಾತ್ರ ಹಾಗೆಯೇ ಇದೆ. ಇದನ್ನು ನೋಡಿ ಎಲ್ಲರೂ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಸೀರೆಯಲ್ಲಿ ಬೇರೆಯದೇ ರೀತಿ ಕಾಣ್ತಾರೆ ಗೌತಮಿ ಜಾಧವ್ 

‘ಸತ್ಯ’ ಧಾರಾವಾಹಿ ಬಳಿಕ ಗೌತಮಿ ಜಾಧವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ಗೆ ಕಾಲಿಟ್ಟರು. ಇಷ್ಟು ದಿನಗಳ ಕಾಲ ನೋಡಿದ ಗೌತಮಿಗೂ ಇಲ್ಲಿ ನೋಡಿದ ಗೌತಮಿಗೂ ಸಾಕಷ್ಟು ವ್ಯತ್ಯಾಸ ಇತ್ತು. ಈ ಗೌತಮಿಯನ್ನು ಜನರು ಸಾಕಷ್ಟು ಇಷ್ಟಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ