Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದಲ್ಲಿ ಕಾಮಿಡಿ ಸ್ಟಾರ್; ಹಿಟ್​ ಆ್ಯಂಡ್ ರನ್ ಕೇಸ್​ನಲ್ಲಿ ಚಂದ್ರಪ್ರಭ ಹೆಸರು

ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್​​ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ.

ವಿವಾದದಲ್ಲಿ ಕಾಮಿಡಿ ಸ್ಟಾರ್; ಹಿಟ್​ ಆ್ಯಂಡ್ ರನ್ ಕೇಸ್​ನಲ್ಲಿ ಚಂದ್ರಪ್ರಭ ಹೆಸರು
ಚಂದ್ರಪ್ರಭ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಾಜೇಶ್ ದುಗ್ಗುಮನೆ

Updated on: Sep 06, 2023 | 9:14 AM

‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಂದ್ರಪ್ರಭ ಜಿ. (Chandraprabha G) ಅವರು ಈಗ ವಿವಾದ ಒಂದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್​ನಲ್ಲಿ ಅವರಿಗೆ ಸೇರಿದ ಕಾರು ಬಳಕೆ ಆಗಿದೆ. ವೃತ್ತಿಯಲ್ಲಿ ಕಲಾವಿದ ಆಗಿರುವ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ಅಪಘಾತ ಒಂದು ನಡೆದಿದೆ. ಬೈಕ್ ಒಂದಕ್ಕೆ ಕಾರು ಗುದ್ದಿದೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್​​ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ. ಮಾಲ್ತೇಶ್​ಗೆ ಏನಾಯಿತು ಎಂದು ನೋಡುವ ಪ್ರಯತ್ನವನ್ನೂ ಕಾರು ಚಾಲಕ ಮಾಡಿಲ್ಲ. ಈ ಕಾರು ಚಂದ್ರಪ್ರಭ ಅವರಿಗೆ ಸೇರಿದ್ದಾಗಿದೆ.

ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ನಡೆಯುವ ಸಂದರ್ಭದಲ್ಲಿ ಚಂದ್ರಪ್ರಭ ಅವರೇ ಕಾರು ಓಡಿಸುತ್ತಿದ್ದರೋ ಅಥವಾ ಬೇರೆಯವರು ಈ ಕಾರನ್ನು ತೆಗೆದುಕೊಂಡು ಹೋಗಿದ್ದರೋ ಎನ್ನುವ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಇದನ್ನೂ ಓದಿ: ವೀಕ್ಷಕರಿಗೆ ಕಣ್ಣೀರು ತರಿಸಿತು ಆ ಒಂದು ನಾಟಕ; ‘ಗಿಚ್ಚಿ ಗಿಲಿಗಿಲಿ 2’ ವೇದಿಕೆ ಮೇಲೆ ಅಂಥದ್ದೇನಾಯ್ತು?

‘ಗಿಚ್ಚಿ ಗಿಲಿ ಗಿಲಿ ಸೀಸನ್ 2’ರಲ್ಲಿ ಚಂದ್ರಪ್ರಭ ಭಾಗಿ ಆಗಿದ್ದರು. ಅವರು ಈ ಸೀಸನ್​ ವಿನ್ನರ ಕೂಡ ಹೌದು. ಸದ್ಯ ಅವರು ವಿವಾದದ ಮೂಲಕ ಸುದ್ದಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ