AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುಡ್ಡಿದ್ದವ್ರನ್ನ ಮೀಟ್ ಮಾಡ್ತಾರೆ’; ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ

ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಅಭಿಮಾನಿಗಳು ಅತಿಯಾದ ಪ್ರೀತಿ ತೋರಿದ್ದಾರೆ. ಕೆಲವರು ಟ್ಯಾಟೂ ಸಹ ಹಾಕಿಸಿಕೊಂಡಿದ್ದಾರೆ. ಆದರೆ, ಭೇಟಿಯ ಭರವಸೆ ಈಡೇರಿಸದ ಕಾರಣ, ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಗಿಲ್ಲಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಿಲ್ಲಿ ದುಡ್ಡಿದ್ದವರನ್ನಷ್ಟೇ ಭೇಟಿ ಮಾಡುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಅತಿಯಾದ ಅಭಿಮಾನವೇ ಗಿಲ್ಲಿಗೆ ಮುಳುವಾಗುವ ಸಂಕೇತ ಕಂಡುಬರುತ್ತಿದ್ದು.

‘ದುಡ್ಡಿದ್ದವ್ರನ್ನ ಮೀಟ್ ಮಾಡ್ತಾರೆ’; ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ
ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Feb 02, 2026 | 7:34 AM

Share

ಯಾವುದೇ ಆದರೂ ಅದು ಅತಿಯಾದರೆ ವಿಷವೇ. ಅದರಲ್ಲೂ ಅಭಿಮಾನ ಅತಿಯಾದರೆ ಅದು ಕಾರ್ಕೋಟಕ ವಿಷವಾಗುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಸಿಕ್ಕಿದೆ. ಗಿಲ್ಲಿಗೆ (Gilli Nata) ಉಘೇ ಉಘೇ ಎಂದು, ಅದಕ್ಕೆ ಪ್ರತಿಯಾಗಿ ಏನೂ ಸಿಕ್ಕಿಲ್ಲ ಎಂದಾಗ ಅವರ ವಿರುದ್ಧವೇ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಅಭಿಮಾನ ಅತಿಯಾದರೆ ಏನಾಗುತ್ತದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿಕೊಳ್ಳಾಗುತ್ತಿದೆ.

ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್. ಈ ಶೋನಲ್ಲಿ ಅವರಿಗೆ ದೊಡ್ಡ ಅಭಿಮಾನ ಬಳಗ ಸೃಷ್ಟಿ ಆಯಿತು. ಗಿಲ್ಲಿ ಮೇಲೆ ಜನರು ಎಷ್ಟು ಪ್ರೀತಿ ತೋರಿದರು ಎಂದರೆ ಕೆಲವರು ಟ್ಯಾಟೂ ಕೂಡ ಹಾಕಿಸಿಕೊಂಡಿದ್ದಾರೆ. ಈ ರೀತಿ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಗಿಲ್ಲಿಯಿಂದ ಬೆಟ್ಟದಷ್ಟು ನಿರೀಕ್ಷೆ ಮಾಡುತ್ತಿದ್ದಾರೆ.

ಬಿಗ್ ಬಾಸ್ ಮನೆಗೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಬಂದಿದ್ದರು. ಈ ವೇಳೆ ಮಾತನಾಡಿದ್ದ ಗಿಲ್ಲಿ, ‘ಬಿಗ್ ಬಾಸ್’ ಮನೆಯಿಂದ ಹೊರ ಹೋದ ಬಳಿಕ ಆ ವ್ಯಕ್ತಿಯನ್ನು ಭೇಟಿ ಮಾಡುತ್ತೇನೆ ಎಂದಿದ್ದರು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಗಿಲ್ಲಿ ವಿವಿಧ ಕಾರ್ಯಕ್ರಮಗಳಿಗೆ, ಶೂಟಿಂಗ್​​ಗೆ ತೆರಳುತ್ತಿದ್ದಾರೆ. ಈ ಕಾರಣದಿಂದ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ. ಇದೆಲ್ಲವನ್ನೂ ಟ್ಯಾಟೂ ಅಭಿಮಾನಿ ಖಂಡಿಸಿದ್ದಾರೆ.

View this post on Instagram

A post shared by Good_boy_ (@bindaas_bossu)

‘ಗಿಲ್ಲಿ ಭೇಟಿ ಮಾಡ್ತೀನಿ ಎಂದು ಹೇಳಿ ಭೇಟಿ ಮಾಡ್ತಿಲ್ಲ. ಇವರಿಗೋಸ್ಕರ ದೇವಸ್ಥಾನಕ್ಕೆ ಹೋಗಿ ಪ್ರಸಾದ ತೆಗೆದುಕೊಂಡು ಬಂದೆವು. ಅವರ ಅಣ್ಣನಿಗೆ ಕರೆ ಮಾಡಿ, ಗಿಲ್ಲಿಗೆ ಪ್ರಸಾದ ಕೊಡಬೇಕಿತ್ತು ಎಂದು ಹೇಳಿದೆ. ಆದರೆ, ಭೇಟಿಗೆ ಅವಕಾಶ ಸಿಗಲಿಲ್ಲ. ಗಿಲ್ಲಿ ದುಡ್ಡಿರೋ ವ್ಯಕ್ತಿಯನ್ನು ಮಾತ್ರ ಭೇಟಿ ಮಾಡುತ್ತಿದ್ದಾರೆ. ನಮ್ಮಂತಹ ಫ್ಯಾನ್ಸ್​​ನ ಅವರು ಭೇಟಿ ಮಾಡುತ್ತಿಲ್ಲ’ ಎಂದು ಆ ವ್ಯಕ್ತಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

ಸದ್ಯ ಗಿಲ್ಲಿಗೆ ಸಿಕ್ಕಿರೋ ಅತಿಯಾದ ಅಭಿಮಾನವೇ ಅವರಿಗೆ ಮುಳುವಾಗುವ ಸೂಚನೆ ಸಿಗುತ್ತಿದೆ. ಮುಂದಿನ ದಿನಗಳಲ್ಲಿ ಗಿಲ್ಲಿ ಅವರನ್ನು ಭೇಟಿ ಮಾಡಬಹುದು ಅಥವಾ ಮಾಡದೇ ಇರಬಹುದು. ಆದರೆ, ಈ ರೀತಿ ಎಲ್ಲಾ ಅಭಿಮಾನಿಗಳು ನಾವು ಹಾಗೆ ಬೆಂಬಲ ನೀಡಿದ್ದೆವು, ಆದರೂ ಭೇಟಿಗೆ ಬಂದಿಲ್ಲ ಎಂದೆಲ್ಲ ಹೇಳಿದರೆ ಅದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ