AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟನಿಗೆ ಅಭಿಮಾನಿಯಿಂದ ಗಂಭೀರ ಆರೋಪ ಎದುರಾಗಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ‘ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ, ಭೇಟಿ ಮಾಡುವ ಭರವಸೆ ಉಳಿಸಿಕೊಳ್ಳಲಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣ, ಗಿಲ್ಲಿಯ ಅಗಾಧ ಜನಪ್ರಿಯತೆ ಈಗ ಅವರಿಗೆ ಮುಳುವಾಯಿತೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on: Feb 02, 2026 | 7:04 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ (Gilli Nata) ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಾಗಿ ಬೆಳೆದಿದೆ. ಅವರ ಫೋಟೋನ ಕೈ ಮೇಲೆ ಹಚ್ಚೆ ಹಾಕಿಸಿಕೊಂಡವರೂ ಇದ್ದಾರೆ. ಈಗ ಅದೇ ವ್ಯಕ್ತಿ ಗಿಲ್ಲಿ ನಟನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಹಲವು ಮಾಧ್ಯಮಗಳಿಗೆ ಅವರು ಸಂದರ್ಶನ ನೀಡುತ್ತಿದ್ದು, ವಾಗ್ದಾಳಿ ಮುಂದುವರಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರೋವಾಗ ಗಿಲ್ಲಿ ಸಾಕಷ್ಟು ಹಾಸ್ಯ ಮಾಡಿದರು. ಅಗತ್ಯ ಇದ್ದಾಗ ತಿರುಗೇಟು ನೀಡಿದರು. ಇದರಿಂದ ಅವರಿಗೆ ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಪ್ರತಿ ಬಾರಿ ಬಿಗ್ ಬಾಸ್ ಶುರುವಾದಾಗಲೂ ಓರ್ವ ಸ್ಪರ್ಧಿಗೆ ಸಾಕಷ್ಟು ಫ್ಯಾನ್ಸ್ ಸಿಗೋದು ಸಾಮಾನ್ಯ. ಆದರೆ, ಗಿಲ್ಲಿಗೆ ಸಿಕ್ಕಷ್ಟು ದೊಡ್ಡ ಅಭಿಮಾನಿ ಬಳಗ ಇನ್ಯಾರಿಗೂ ಸಿಕ್ಕಿರಲಿಲ್ಲ. ಆದರೆ, ಅಭಿಮಾನಿಗಳನ್ನು ಗಿಲ್ಲಿ ಗೌರವಿಸುತ್ತಿಲ್ಲ ಎಂಬುದು ಅಭಿಮಾನಿಗಳ ಆರೋಪ.

View this post on Instagram

A post shared by BOSS TV (@bosstvkannada)

ಬಾಸ್​ ಟಿವಿ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರೋ ಟ್ಯಾಟೂ ಅಭಿಮಾನಿ, ‘ಅವರಲ್ಲಿ ಟ್ಯಾಲೆಂಟ್ ಇತ್ತು. ಅದನ್ನು ನಾವು ಹೊರಗೆ ತಂದಿದ್ದೀವಿ. ಅವರು ಅಭಿಮಾನಿಗಳನ್ನು ಭೇಟಿ ಮಾಡಬೇಕಿತ್ತು, ಮಾಡುತ್ತಿಲ್ಲ. ಬಿಗ್ ಬಾಸ್ ಮನೆಯಲ್ಲಿದ್ದಾಗ ನನ್ನನ್ನು ಹೊರ ಹೋದ ತಕ್ಷಣ ಭೇಟಿ ಮಾಡ್ತೀನಿ ಎಂದಿದ್ರು, ಆದರೆ ಭೇಟಿ ಮಾಡಿಲ್ಲ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ; ಶಾಕ್ ಆದ ಆ್ಯಂಕರ್

ಗಿಲ್ಲಿ ನಟ ಅವರು ಇನ್​​ಸ್ಟಾಗ್ರಾಮ್​​ನಲ್ಲಿ 20 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗೆ ಇಷ್ಟ ದೊಡ್ಡ ಮಟ್ಟದಲ್ಲಿ ಅಭಿಮಾನಿ ವರ್ಗ ಸಿಕ್ಕಿದ್ದು ಇದೇ ಮೊದಲು. ಆದರೆ, ಈಗ ಅವರಿಗೆ ಅಭಿಮಾನವೇ ಮುಳವಾಯಿತೇ ಎನ್ನುವ ಪ್ರಶ್ನೆ ಮೂಡಿದೆ. ಕೆಲ ನಿಜವಾದ ಫ್ಯಾನ್ಸ್, ‘ನಿನ್ನನ್ನು ಗಿಲ್ಲಿ ಭೇಟಿ ಮಾಡಲೇಬಾರದು’ ಎಂದಿದ್ದಾರೆ.  ಗಿಲ್ಲಿ ಅವರು ಸದ್ಯ ನಿರ್ದೇಶನ ಮಾಡುವ ಆಲೋಚನೆ ಹೊಂದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ