AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 8ರಿಂದ ಜೀ ಕನ್ನಡದಲ್ಲಿ ‘ಹಳ್ಳಿ ಪವರ್ ರಿಲೋಡೆಡ್’; ಇಲ್ಲಿದೆ ಸ್ಪರ್ಧಿಗಳ ವಿವರ

ಜೀ ಕನ್ನಡ ವಾಹಿನಿಯಲ್ಲಿ ಆಗಸ್ಟ್ 8ರಿಂದ 'ಹಳ್ಳಿ ಪವರ್ ರಿಲೋಡೆಡ್' ವಿನೂತನ ರಿಯಾಲಿಟಿ ಶೋ ಪ್ರಸಾರವಾಗಲಿದೆ. ನಗರದ ಐಷಾರಾಮಿ ಬದುಕು ತೊರೆದು ಹಳ್ಳಿಯ ಕಠಿಣ ಜೀವನಕ್ಕೆ ಒಗ್ಗಿಕೊಳ್ಳುವ ನಗರದ ಸುಂದರಿಯರ ಸವಾಲಿನ ಪಯಣವನ್ನು ಅಕುಲ್ ಬಾಲಾಜಿ ನಿರೂಪಿಸಲಿದ್ದಾರೆ. ವೀಕ್ಷಿಸಲು ತಪ್ಪದೇ ಜೀ ಕನ್ನಡ ಟ್ಯೂನ್ ಮಾಡಿ.

ಆಗಸ್ಟ್ 8ರಿಂದ ಜೀ ಕನ್ನಡದಲ್ಲಿ 'ಹಳ್ಳಿ ಪವರ್ ರಿಲೋಡೆಡ್’; ಇಲ್ಲಿದೆ ಸ್ಪರ್ಧಿಗಳ ವಿವರ
ಹಳ್ಳಿ ಪವರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 07, 2026 | 7:55 AM

Share

ತನ್ನ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕನ್ನಡಿಗರ ಮನಗೆದ್ದಿರುವ ಜೀ ಕನ್ನಡ ವಾಹಿನಿ, ಈಗ ‘ಹಳ್ಳಿ ಪವರ್ ರಿಲೋಡೆಡ್’ ಎಂಬ ಅತ್ಯಂತ ಕುತೂಹಲಕಾರಿ ಹಾಗೂ ವಿನೂತನ ರಿಯಾಲಿಟಿ ಶೋವನ್ನು ಪ್ರೇಕ್ಷಕರ ಮುಂದೆ ತರಲು ಸಜ್ಜಾಗಿದೆ. ಕರ್ನಾಟಕದ ಗ್ರಾಮೀಣ ಸೊಗಡು, ಕಲ್ಚರ್ ಮತ್ತು ಹಳ್ಳಿಯ ಸವಾಲುಗಳನ್ನು ಅನಾವರಣಗೊಳಿಸುವ ಈ ಶೋ, ಆಗಸ್ಟ್ 8ರಿಂದ ಪ್ರಸಾರ ಕಾಣಲಿದೆ. ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಈ ಕಾರ್ಯಕ್ರಮ ಜೀ ಕನ್ನಡದಲ್ಲಿ ಮೂಡಿಬರಲಿದೆ.

ಐಷಾರಾಮಿ ಬದುಕಿಗೆ ಗುಡ್‌ಬೈ

ನಗರದಲ್ಲಿ ಐಷಾರಾಮಿಯಾಗಿ ಬೆಳೆದಿರುವ ಸ್ಪರ್ಧಿಗಳು ಈ ಶೋನಲ್ಲಿ ಹಳ್ಳಿಯ ಕಠಿಣ ಹಾಗೂ ಸರಳ ಜೀವನಕ್ಕೆ ಹೊಂದಿಕೊಳ್ಳಬೇಕಿದೆ. ಟೆಲಿವಿಷನ್, ಮೊಬೈಲ್, ಇಂಟರ್ನೆಟ್‌ನಂತಹ ಯಾವುದೇ ಆಧುನಿಕ ಸೌಕರ್ಯಗಳಿಲ್ಲದೆ, ಕುಟುಂಬದಿಂದ ದೂರವಿದ್ದು ದಿನ ದೂಡುವುದು ಇಲ್ಲಿನ ದೊಡ್ಡ ಸವಾಲು. ಕೃಷಿ ಕಾಯಕ, ಜಾನುವಾರುಗಳ ಆರೈಕೆ, ಸ್ವತಃ ಅಡುಗೆ ಮಾಡಿಕೊಳ್ಳುವುದು ಹಾಗೂ ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳುವ ಮೂಲಕ ಸ್ಪರ್ಧಿಗಳು ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಿದೆ.

View this post on Instagram

A post shared by Zee Kannada (@zeekannada)

ಖ್ಯಾತ ನಿರೂಪಕ ಅಕುಲ್ ಬಾಲಾಜಿ ಸಾರಥ್ಯ

ಕರ್ನಾಟಕದ ಜನಪ್ರಿಯ ನಿರೂಪಕ ಅಕುಲ್ ಬಾಲಾಜಿ ಈ ಶೋಗೆ ನಿರೂಪಣೆಯ ಮೆರುಗು ನೀಡಲಿದ್ದಾರೆ. ಸಿಟಿ ಲೈಫ್‌ಗೆ ಒಗ್ಗಿಕೊಂಡಿರುವ ಸ್ನೇಹ ಹೆಚ್, ಬಿಬಿ ಹಾಜಿರಾ, ಏಂಜೆಲೀನ್, ರಿಗ್ಮ್ಯಾ ರಾಜಶ್ರೀ, ದರ್ಶಿನಿ ಗೌಡ, ಪೂಜಾ ಚಂದ್ರಶೇಖರ್, ಅನಿಷಾ ಲಕ್ಷ್ಮಣ್, ಸುಷ್ಮಾ ತೊಗರೆ, ತೇಜಸ್ವಿನಿ, ಅಂಕಿತ ದೇವ್, ಪೂರ್ವಿಕ ಆರ್ ಕೆ, ಚಿತ್ರಶ್ರೀ, ಪೂರ್ವ ವೈ, ರಚನಾ, ನಿಖಿತಾ ಸ್ವಾಮಿ ಹಾಗೂ ನಿವೇದಿತಾ ರೈ ಈ ಶೋನಲ್ಲಿ ಸ್ಪರ್ಧಿಗಳಾಗಿ ಕಣಕ್ಕಿಳಿಯುತ್ತಿದ್ದಾರೆ.

ಇದನ್ನೂ ಓದಿ: ಹಳ್ಳಿ ಪವರ್ ಅಂಗಳಕ್ಕೆ ಘಾಟಿ ಗಾನವಿ ಸಹೋದರಿ ದರ್ಶಿನಿ ಎಂಟ್ರಿ: ಮೊದಲ ದಿನವೇ ಜಗಳ

ಹಳ್ಳಿಯ ಈ ಹೊಸ ಪಯಣದಲ್ಲಿ ಎದುರಾಗುವ ಸವಾಲುಗಳು, ಸ್ಪರ್ಧಿಗಳ ನಡುವಿನ ಸ್ನೇಹ, ಜಗಳ, ಗೆಲುವು-ಸೋಲು ಮತ್ತು ಅವರಲ್ಲಿ ಆಗುವ ಅದ್ಭುತ ಬದಲಾವಣೆಗಳು ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ನೀಡಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ