AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಅಭಿಮಾನಿಗಳೇ ಆದರೂ ಸರಿ, ಸುಮ್ಮನೆ ಬಿಡಲ್ಲ; ನಟಿಯ ಎಚ್ಚರಿಕೆ

ಖ್ಯಾತ ನಟಿ ಹಿನಾ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚುತ್ತಿರುವ ಟ್ರೋಲಿಂಗ್ ಮತ್ತು ಆನ್‌ಲೈನ್ ದ್ವೇಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳ ನಡುವಿನ ಅನಗತ್ಯ ಜಗಳ ಮತ್ತು ನಿಂದನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅತಿರೇಕವಾಗಿ ವರ್ತಿಸುವ ಅಭಿಮಾನಿಗಳನ್ನು ಬ್ಲಾಕ್ ಮಾಡುವ ಎಚ್ಚರಿಕೆ ನೀಡಿದ್ದು, ಶಾಂತಿ, ಸಭ್ಯತೆ ಮತ್ತು ಪ್ರೀತಿಯನ್ನು ಮಾತ್ರ ಹರಡುವಂತೆ ಮನವಿ ಮಾಡಿದ್ದಾರೆ. ದ್ವೇಷಕ್ಕಿಂತ ಪ್ರೀತಿ ಮತ್ತು ಕರುಣೆ ಮುಖ್ಯ ಎಂದು ಸಂದೇಶ ನೀಡಿದ್ದಾರೆ.

ನನ್ನ ಅಭಿಮಾನಿಗಳೇ ಆದರೂ ಸರಿ, ಸುಮ್ಮನೆ ಬಿಡಲ್ಲ; ನಟಿಯ ಎಚ್ಚರಿಕೆ
ಹಿನಾ ಖಾನ್
ರಾಜೇಶ್ ದುಗ್ಗುಮನೆ
|

Updated on:Jun 09, 2026 | 10:44 AM

Share

ಬಾಲಿವುಡ್ ಹಾಗೂ ಟಿವಿ ರಂಗದ ಖ್ಯಾತ ನಟಿ ಹಿನಾ ಖಾನ್ ಸೋಶಿಯಲ್ ಮೀಡಿಯಾ ಟ್ರೋಲಿಂಗ್ ಮತ್ತು ದ್ವೇಷದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸಭ್ಯತೆ ಕಾಯ್ದುಕೊಳ್ಳುವಂತೆ ತಮ್ಮ ಅಭಿಮಾನಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ. ನನ್ನನ್ನು ಬೆಂಬಲಿಸುವ ನೆಪದಲ್ಲಿ ಇತರರನ್ನು ನಿಂದಿಸುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇತ್ತೀಚೆಗೆ ನಟಿ ಹಿನಾ ಖಾನ್ ಮತ್ತು ಶಿಲ್ಪಾ ಶಿಂದೆ ಸೋಶಿಯಲ್ ಮೀಡಿಯಾದಲ್ಲಿ ಪರೋಕ್ಷವಾಗಿ ಪೋಸ್ಟ್‌ಗಳನ್ನು ಹಾಕಿದ್ದರು. ಇಬ್ಬರೂ ಯಾರ ಹೆಸರನ್ನೂ ನೇರವಾಗಿ ಪ್ರಸ್ತಾಪಿಸದಿದ್ದರೂ, ಇವರಿಬ್ಬರ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಎಂದು ನೆಟ್ಟಿಗರು ಚರ್ಚೆ ಆರಂಭಿಸಿದ್ದರು. ಇದರ ಬೆನ್ನಲ್ಲೇ ಅಭಿಮಾನಿಗಳ ನಡುವೆ ಜಗಳ ಶುರುವಾಗಿ, ಪರಸ್ಪರ ಟ್ರೋಲ್ ಮಾಡಲು ಆರಂಭಿಸಿದ್ದರು.

ಈ ಆನ್‌ಲೈನ್ ಟ್ರೋಲ್ ಬಗ್ಗೆ ಪ್ರತಿಕ್ರಿಯಿಸಿರುವ ಹಿನಾ ಖಾನ್, ‘ನಾವೆಲ್ಲರೂ ತಪ್ಪುಗಳನ್ನು ಮಾಡುತ್ತೇವೆ ಮತ್ತು ಸಮಯದೊಂದಿಗೆ ಬದಲಾಗುತ್ತೇವೆ. ನಾನು ಕೆಲವು ಟ್ವೀಟ್‌ಗಳನ್ನು ಗಮನಿಸಿದ್ದೇನೆ. ನಾನು ಯಾವಾಗಲೂ ದ್ವೇಷಕ್ಕಿಂತ ಪ್ರೀತಿ, ದಯೆ ಮತ್ತು ಮಾನವೀಯತೆಯನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ನೀವು ನನ್ನ ನಿಜವಾದ ಅಭಿಮಾನಿಗಳಾಗಿದ್ದರೆ ದ್ವೇಷ ಹರಡುವುದನ್ನು ನಿಲ್ಲಿಸಿ’ ಎಂದು ಮನವಿ ಮಾಡಿದ್ದಾರೆ.

‘ಇತರರನ್ನು ನಿಂದಿಸುವ ಮೂರ್ಖ ಟ್ರೋಲರ್‌ಗಳಂತೆ ನಡೆದುಕೊಳ್ಳಬೇಡಿ. ನಮ್ಮ ವಾದವನ್ನು ಮಂಡಿಸಲು ನಾವು ಕೀಳು ಮಟ್ಟಕ್ಕೆ ಇಳಿಯುವ ಅಗತ್ಯವಿಲ್ಲ. ಯಾವುದೇ ದ್ವೇಷವಿಲ್ಲದೆ, ಅತ್ಯಂತ ಘನತೆಯಿಂದಲೇ ನಮ್ಮ ಅಭಿಪ್ರಾಯವನ್ನು ಪರಿಣಾಮಕಾರಿಯಾಗಿ ತಿಳಿಸಬಹುದು. ಪ್ರೀತಿ ಮತ್ತು ಕರುಣೆ ನಮ್ಮ ಶಕ್ತಿಯಾಗಬೇಕು’ ಎಂದು ಹಿನಾ ಹೇಳಿದ್ದಾರೆ.

ಇದೇ ವೇಳೆ ಅತಿಯಾಗಿ ವರ್ತಿಸುವ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿರುವ ನಟಿ,‘ನನ್ನ ಬೆಂಬಲಕ್ಕೆ ನಿಂತು ನೀವು ಇತರರ ಮೇಲೆ ದ್ವೇಷ ಉಗುಳಿದರೆ, ನೀವು ನನ್ನ ಅಭಿಮಾನಿಯಾಗಿದ್ದರೂ ಸಹ ನಾನು ನಿಮ್ಮನ್ನು ಬ್ಲಾಕ್ ಮಾಡುತ್ತೇನೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನನಗೆ ನನ್ನ ಸುತ್ತಮುತ್ತ ಕೇವಲ ಸಕಾರಾತ್ಮಕತೆ ಮತ್ತು ಶಾಂತಿ ಮಾತ್ರ ಬೇಕು’ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:  ‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ

‘ಬಿಗ್ ಬಾಸ್ ಹಿಂದಿ ಸೀಸನ್ 11’ರ ಸಮಯದಿಂದಲೇ ಶಿಲ್ಪಾ ಶಿಂದೆ ಮತ್ತು ಹಿನಾ ಖಾನ್ ನಡುವೆ ದೊಡ್ಡ ಮಟ್ಟದ ಪೈಪೋಟಿ ಇತ್ತು. ಆ ಸೀಸನ್‌ನಲ್ಲಿ ಶಿಲ್ಪಾ ಶಿಂದೆ ವಿನ್ನರ್ ಆದರೆ, ಹಿನಾ ಖಾನ್ ರನ್ನರ್ ಅಪ್ ಆಗಿದ್ದರು. ಅಂದಿನಿಂದ ಇಂದಿನವರೆಗೂ ಇಬ್ಬರ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವಾರ್ ನಡೆಯುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:39 am, Tue, 9 June 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!