AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತದಲ್ಲಿ ಇಂಡಿಯನ್ ಐಡಲ್ ವಿನ್ನರ್ ಪವನ್​ದೀಪ್​ ರಾಜನ್​ಗೆ ಗಂಭೀರ ಗಾಯ

ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಸಿಂಗರ್ ಪವನ್​ದೀಪ್​ ರಾಜನ್ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ. ಈ ಅಪಘಾತದಲ್ಲಿ ಪವನ್​ದೀಪ್ ಹಾಗೂ ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಪವನ್​ದೀಪ್​ ರಾಜನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಇದ್ದಾರೆ.

ರಸ್ತೆ ಅಪಘಾತದಲ್ಲಿ ಇಂಡಿಯನ್ ಐಡಲ್ ವಿನ್ನರ್ ಪವನ್​ದೀಪ್​ ರಾಜನ್​ಗೆ ಗಂಭೀರ ಗಾಯ
Pawandeep Rajan
ಮದನ್​ ಕುಮಾರ್​
|

Updated on: May 05, 2025 | 7:44 PM

Share

‘ಇಂಡಿಯನ್ ಐಡಲ್ 12’ ರಿಯಾಲಿಟಿ ಶೋ ವಿನ್ನರ್ (Indian Idol Winner), ಗಾಯಕ ಪವನ್​ದೀಪ್​ ರಾಜನ್ ಅವರು ರಸ್ತೆ ಅಪಘಾತದಲ್ಲಿ (Pawandeep Rajan Accident) ತೀವ್ರವಾಗಿ ಗಾಯಗೊಂಡಿದ್ದಾರೆ. ಅವರು ಚಲಿಸುತ್ತಿದ್ದ ಕಾರು ರಾತ್ರಿ 2 ಗಂಟೆ ಸುಮಾರಿಗೆ ನಿಂತಿದ್ದ ಟ್ರಕ್​ಗೆ ಹೋಗಿ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಪವನ್​ದೀಪ್​ ರಾಜನ್ (Pawandeep Rajan) ಅವರ ಕಾಲು, ತಲೆ ಮತ್ತು ಪಕ್ಕೆಲುಬಿಗೆ ಗಂಭೀರ ಗಾಯಗಳಾಗಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಈಗ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಅಭಿಮಾನಿಗಳಲ್ಲಿ ಆತಂಕ ಆಗಿದೆ.

ಪವನ್​ದೀಪ್​ ರಾಜನ್ ಅವರು ಆಸ್ಪತ್ರೆಯಲ್ಲಿ ಮಲಗಿರುವ ಫೋಟೋ ಕೂಡ ವೈರಲ್ ಆಗಿದೆ. ಅದನ್ನು ನೋಡಿದ ಅಭಿಮಾನಿಗಳಿಗೆ ಚಿಂತೆ ಹೆಚ್ಚಾಗಿದೆ. ಪವನ್​ದೀಪ್​ ಅವರು ಮೂಲತಃ ಉತ್ತರಕಾಂಡದವರು. ಅಲ್ಲಿಂದ ಅವರು ನೋಯ್ಡಾಗೆ ಪ್ರಯಾಣ ಮಾಡುತ್ತಿದ್ದರು. ಕಾರ್ಯಕ್ರಮವೊಂದರ ಸಲುವಾಗಿ ತೆರಳುವಾಗ ಮಧ್ಯರಾತ್ರಿ ಅಪಘಾತ ಸಂಭವಿಸಿದೆ.

ಪವನ್​ದೀಪ್​ ರಾಜನ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಸ್ನೇಹಿತ ಅಜಯ್ ಮೆಹ್ರಾ ಮತ್ತು ಚಾಲಕ ರಾಹುಲ್ ಸಿಂಗ್ ಇದ್ದರು. ಎಂಜಿ ಹೆಕ್ಟರ್ ಕಾರಿನಲ್ಲಿ ಅವರು ಪ್ರಯಾಣ ಮಾಡುತ್ತಿದ್ದರು. ಕಾರು ಓಡಿಸುವಾಗ ಚಾಲಕ ರಾಹುಲ್ ಸಿಂಗ್ ನಿದ್ರೆಗೆ ಜಾರಿದ್ದರಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಮೂವರ ಹೆಲ್ತ್ ಅಪ್​ಡೇಟ್​ಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ
Image
ನೆಲಮಂಗಲದಲ್ಲಿ KSRTC ಬಸ್- ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ
Image
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
Image
ಮಂಡ್ಯ: ಎಕ್ಸ್​ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ, ಒಂದೇ ಕುಟುಂಬದ 4 ಸಾವು
Image
ಬೆಂಗಳೂರು ಏರ್ಪೋಟ್ ಬಳಿ ಭೀಕರ ಅಪಘಾತ: ಸಹೋದರರಿಬ್ಬರು ಸೇರಿ ಮೂವರ ಸಾವು

ಇದನ್ನೂ ಓದಿ: ಅಪಘಾತದ ಬಳಿಕ ಬದಲಾಯಿತು ನಾನಿ ಬದುಕು; ಅಂದು ಆಗಿದ್ದೇನು?

ಅಪಘಾತ ನಡೆದ ಕೂಡಲೇ ಜನರು ಜಮಾಯಿಸಿದರು. ಸ್ಥಳೀಯ ಪೊಲೀಸರು ಕೂಡ ತಕ್ಷಣಕ್ಕೆ ಆಗಮಿಸಿದರು. ಮೊದಲಿಗೆ ಪ್ರಥಮ ಚಿಕಿತ್ಸೆ ಕೊಡಿಸುವ ಸಲುವಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡ ಹೋಗಲಾಯಿತು. ಆದರೆ ಗಂಭೀರ ಗಾಯಗಳು ಆಗಿರುವುದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಐಸಿಯುನಲ್ಲಿ ಪವನ್​ದೀಪ್​ ರಾಜನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೆ ಒಳಗಾದ ಟ್ರಕ್ ಮತ್ತು ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ಮಾಡಲಾಗುತ್ತಿದೆ. ಪವನ್​ದೀಪ್​ ಅವರಿಗೆ ಹೆಚ್ಚು ಗಾಯ ಆಗಿದ್ದರಿಂದ ಕೆಲವು ಶಸ್ತ್ರ ಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ