AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮುಕು ಡುಮುಕು ನಿಜಕ್ಕೂ ಪೆಟ್ರೋಲ್ ಕುಡಿದರಾ? ಸಿನಿಮಾ ಪ್ರಚಾರಕ್ಕೆ ಚೀಪ್ ಗಿಮಿಕ್

ಅಮುಕು ಡುಮುಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದ ಈ ವ್ಯಕ್ತಿ ಹೆಸರು ಮಂಜು. ಸೋಶಿಯಲ್ ಮೀಡಿಯಾದಲ್ಲಿ ವಿವಿಧ ವಿಡಿಯೋಗಳನ್ನು ಹಾಕಿಕೊಂಡು ವೈರಲ್ ಆಗುತ್ತಾ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಸೂರಿ ಅಣ್ಣ ಸಿನಿಮಾ ಗೆಲ್ಲಬೇಕು ಎಂದು ಪೆಟ್ರೋಲ್ ಕುಡಿದರು. ಆ ಬಳಿಕ ಅವರು ಒದ್ದಾಡಿದರು.

ಅಮುಕು ಡುಮುಕು ನಿಜಕ್ಕೂ ಪೆಟ್ರೋಲ್ ಕುಡಿದರಾ? ಸಿನಿಮಾ ಪ್ರಚಾರಕ್ಕೆ ಚೀಪ್ ಗಿಮಿಕ್
ಮಂಜು
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 27, 2026 | 10:11 AM

Share

ಅಮುಕು ಡುಮುಕು ಎಂಬ ವ್ಯಕ್ತಿಯ ಬಗ್ಗೆ ನಿಮಗೆ ಗೊತ್ತಿರಬದು. ಸೋಶಿಯಲ್ ಮೀಡಿಯಾದಲ್ಲಿ ಈ ವ್ಯಕ್ತಿಯು ಸಾಕಷ್ಟು ಜನಪ್ರಿಯತೆ ಪಡೆದರು. ಜೀ ಕನ್ನಡದ ರಿಯಾಲಿಟಿ ಶೋಗೆ ಅತಿಥಿಯಾಗೂ ತೆರಳಿದ್ದರು. ಈಗ ಆ ವ್ಯಕ್ತಿ ಮಾಡಿಕೊಂಡ ಒಂದು ಎಡವಟ್ಟು ಚರ್ಚೆಗೆ ಕಾರಣ ಆಗಿದೆ. ಸಿನಿಮಾ ಪ್ರಚಾರಕ್ಕಾಗಿ ಅವರು ಪೆಟ್ರೋಲ್ ಕುಡಿದರು ಮತ್ತು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಎಂಬ ವಿಡಿಯೋ ವೈರಲ್ ಆಯಿತು. ಈ ವಿಡಿಯೋದ ಅಸಲಿಯತ್ತು ಹೊರ ಬಂದಿದೆ.

ಅಮುಕು ಡುಮುಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದ ಈ ವ್ಯಕ್ತಿ ಹೆಸರು ಮಂಜು. ಸೋಶಿಯಲ್ ಮೀಡಿಯಾದಲ್ಲಿ ವಿವಿಧ ವಿಡಿಯೋಗಳನ್ನು ಹಾಕಿಕೊಂಡು ವೈರಲ್ ಆಗುತ್ತಾ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಸೂರಿ ಅಣ್ಣ ಸಿನಿಮಾ ಗೆಲ್ಲಬೇಕು ಎಂದು ಪೆಟ್ರೋಲ್ ಕುಡಿದರು. ಆ ಬಳಿಕ ಅವರು ಒದ್ದಾಡಿದರು. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಈ ವಿಡಿಯೋ ಸಾಕಷ್ಟು ಹರಿದಾಡಿತು. ಮಂಜುಗೆ ಪೂರ್ತಿಯಾಗಿ ಹುಚ್ಚು ಹಿಡಿದಿದೆ ಎಂದು ಹೇಳಲಾಯಿತು. ಸೋಶಿಯಲ್ ಮೀಡಿಯಾ ಜನಪ್ರಿಯತೆ ಹಾಗೂ ಸಿನಿಮಾ ಜನಪ್ರಿಯತೆಗೆ ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದೆಲ್ಲ ಮಾತನಾಡಿಕೊಳ್ಳಲಾಯಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ಮಂಜು ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಅಸಲಿಗೆ ಅದು ಪೆಟ್ರೋಲ್ ಆಗಿಯೇ ಇರಲಿಲ್ಲವಂತೆ.

‘ಅಣ್ಣ ನಿಂಗೆ ಯಾರು ಏನೇ ಅನ್ನಲ್ಲಿ, ನಿಮ್ಮ ಸಿನಿಮಾ ಗೆಲ್ಲಬೇಕು. ಸಲಗ ಸೂರಿ ಅಣ್ಣನ ಸಿನಿಮಾ ಗೆಲ್ಲಬೇಕು’ ಎನ್ನುತ್ತಾ ಪೆಟ್ರೋಲ್ ಕುಡಿದರು. ಸೂರಿ ಅಣ್ಣ ಅವರನ್ನು ಎತ್ತುಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದೃಶ್ಯ ಇತ್ತು.

ಇದನ್ನೂ ಓದಿ: ಮದುವೆಯಲ್ಲಿ ರಶ್ಮಿಕಾ ಮಂದಣ್ಣ ಆಸೆ ಈಡೇರಿಸಿದ ವಿಜಯ್ ದೇವರಕೊಂಡ ಇದಕ್ಕೂ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಬಿಂದು ಜೀರಾಗೆ ಜೇನು ತುಪ್ಪ ಬೆರೆಸಿದ್ದರು ಮಂಜು. ಆಗ ಪೆಟ್ರೋಲ್ ಕಲರ್​​ಗೆ ಅದು ತಿರುಗಿತ್ತು. ಈ ರೀತಿಯಲ್ಲಿ ಮಾಡಿ ಅವರು ಪೆಟ್ರೋಲ್ ಎಂದು ಕುಡಿದಿದ್ದರು. ಇದು ಸಿನಿಮಾ ಪ್ರಚಾರ ಅಲ್ಲ ಎಂದಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'