AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಕ್ಕಳ ಎದುರೇ ತಂದೆ-ತಾಯಿಯ ಕೊಲ್ಲಲಾಯಿತು’; ಇಸ್ರೇಲ್​​ನಲ್ಲಿ ಕುಟುಂಬದವರನ್ನು ಕಳೆದುಕೊಂಡು ಕಿರುತೆರೆ ನಟಿ

‘ನಾನು ಮಧುರಾ ನಾಯ್ಕ್. ನಾನು ಯಹೂದಿ ಧರ್ಮಕ್ಕೆ ಸೇರಿದವಳು. ಭಾರತದಲ್ಲಿ ನಮ್ಮ ಸಂಖ್ಯೆ 3000 ಇರಬಹುದು ಅಷ್ಟೇ. ಅಕ್ಟೋಬರ್ 7ರಂದು ನಮ್ಮ ಕುಟುಂಬದವರನ್ನು ಕಳೆದುಕೊಂಡೆವು. ನನ್ನ ಕುಟುಂಬದ ಒಡಯಾ ಹಾಗೂ ಅವರ ಪತಿಯನ್ನು ಹತ್ಯೆ ಮಾಡಲಾಗಿದೆ’ ಎಂದು ಅವರು ಬೇಸರ ಹೊರಹಾಕಿದ್ದಾರೆ.

‘ಮಕ್ಕಳ ಎದುರೇ ತಂದೆ-ತಾಯಿಯ ಕೊಲ್ಲಲಾಯಿತು’; ಇಸ್ರೇಲ್​​ನಲ್ಲಿ ಕುಟುಂಬದವರನ್ನು ಕಳೆದುಕೊಂಡು ಕಿರುತೆರೆ ನಟಿ
ಮಧುರಾ ನಾಯ್ಕ್ ಹಾಗೂ ಕುಟುಂಬದವರು
ರಾಜೇಶ್ ದುಗ್ಗುಮನೆ
|

Updated on: Oct 12, 2023 | 10:42 AM

Share

ಹಲವು ಹಿಂದಿ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯತೆ ಪಡೆದ ಮಧುರಾ ನಾಯ್ಕ್ ಅವರು ಈಗ ನೋವಿನಲ್ಲಿದ್ದಾರೆ. ಸದ್ಯ ನಡೆಯುತ್ತಿರುವ ಇಸ್ರೇಲ್ (Israel)​ ಯುದ್ಧದಲ್ಲಿ ಅವರು ಕುಟುಂಬದವರನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಮಕ್ಕಳ ಎದುರೇ ತಂದೆ-ತಾಯಿಯನ್ನು ಹತ್ಯೆ ಮಾಡಲಾಯಿತು ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮಧುರಾ. ಅಭಿಮಾನಿಗಳು ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ.

‘ನಾನು ಮಧುರಾ ನಾಯ್ಕ್. ನಾನು ಯಹೂದಿ ಧರ್ಮಕ್ಕೆ ಸೇರಿದವಳು. ಭಾರತದಲ್ಲಿ ನಮ್ಮ ಸಂಖ್ಯೆ 3000 ಇರಬಹುದು ಅಷ್ಟೇ. ಅಕ್ಟೋಬರ್ 7ರಂದು ನಮ್ಮ ಕುಟುಂಬದವರನ್ನು ಕಳೆದುಕೊಂಡೆವು. ನನ್ನ ಕುಟುಂಬದ ಒಡಯಾ ಹಾಗೂ ಅವರ ಪತಿಯನ್ನು ಹತ್ಯೆ ಮಾಡಲಾಗಿದೆ. ಅವರ ಮಕ್ಕಳ ಎದುರೇ ಕೊಲೆ ಮಾಡಲಾಗಿದೆ. ಈ ನೋವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ. ಇಡೀ ಇಸ್ರೇಲ್ ದುಃಖದಲ್ಲಿದೆ. ಹಮಾಸರು ಇಸ್ರೇಲ್​ನ ಮಕ್ಕಳು, ಮಹಿಳೆಯರನ್ನು, ಅಲ್ಲಿನ ರಸ್ತೆ ಬೀದಿಗಳನ್ನು ಸುಡುತ್ತಿದ್ದಾರೆ. ದುರ್ಬಲರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ನಾನು ನನ್ನ ಕುಟುಂಬದ ಫೋಟೋ ಪೋಸ್ಟ್ ಮಾಡಿದೆ. ನಾನು ಯಹೂದಿ ಎನ್ನುವ ಕಾರಣಕ್ಕೆ ಅವಮಾನ ಮಾಡಲಾಯಿತು.  ನನ್ನ ಭಾವನೆಗಳನ್ನು ನಾನು ವ್ಯಕ್ತಪಡಿಸಬೇಕಿದೆ. ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ನನಗೆ ಅರಬ್ ಹಾಗೂ ಯಹೂದಿಗಳಲ್ಲಿ ಗೆಳೆಯರಿದ್ದಾರೆ. ಇಲ್ಲಿ ಸಾಯುತ್ತಿರುವವರು ಮುಗ್ಧರು’ ಎಂದಿದ್ದಾರೆ ಮಧುರಾ.

ಇದನ್ನೂ ಓದಿ: ಇಸ್ರೇಲ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಮುಂದಾದ ಭಾರತ ಸರ್ಕಾರ:‘ಆಪರೇಷನ್ ಅಜಯ್’ ಘೋಷಣೆ

ಮಧುರಾ ಅವರು ಮಾಡೆಲ್. 2007ರಿಂದ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಕಹೇ ನಾ ಕಹೇ’ ಹೆಸರಿನ ಹಿಂದಿ ಧಾರಾವಾಹಿ ಮೂಲಕ ಅವರು ವೃತ್ತಿ ಬದುಕು ಆರಂಭಿಸಿದರು. ಹಿಂದಿ ಸಿನಿಮಾಗಳಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್