‘ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’; ಸುದೀಪ್ ಸ್ಪಷ್ಟನೆ

ಜಗದೀಶ್ ಅವರು ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು, ಮತ್ತೆ ಬರಬೇಕು ಎನ್ನುವ ಕೂಗು ಇದೆ. ಅವರು ಬರುತ್ತಾರೆ ಅನ್ನೋದು ಅನೇಕರ ನಂಬಿಕೆ. ಆದರೆ, ಇದಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

‘ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’; ಸುದೀಪ್ ಸ್ಪಷ್ಟನೆ
ಜಗದೀಶ್​, ಕಿಚ್ಚ ಸುದೀಪ್​
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Oct 20, 2024 | 6:36 AM

ಈ ಆವೃತ್ತಿಯ ಕನ್ನಡ ಬಿಗ್ ಬಾಸ್ ಕಳೆದ ಸೀಸನ್​ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ‘ಬಿಗ್ ಬಾಸ್’ ಸುದ್ದಿಯಲ್ಲಿ ಇರುವುದರ ಜೊತೆಗೆ ಸಾಕಷ್ಟು ಟೀಕೆಗಳನ್ನು ಕೂಡ ಪಡೆದುಕೊಳ್ಳುತ್ತಿದೆ ಎಂಬುದು ಸೋಶಿಯಲ್ ಮೀಡಿಯಾ ಮೂಲಕ ಗೊತ್ತಾಗುತ್ತಿದೆ. ಜಗದೀಶ್ ಅವರು ಮಿತಿಮೀರಿ ನಡೆದುಕೊಂಡಿದ್ದೇ ಇದಕ್ಕೆ ಕಾರಣ. ಜಗದೀಶ್ ಅವರನ್ನು ಹೊರಕ್ಕೆ ಹಾಕಲಾಗಿದೆ.

ಜಗದೀಶ್ ಅವರನ್ನು ಬಿಗ್ ಬಾಸ್​ ಮನೆಯಿಂದ ಎಲಿಮಿನೇಟ್ ಮಾಡಿರುವುದು ಗೊತ್ತೇ ಇದೆ. ಅವರನ್ನು ಬಿಗ್ ಬಾಸ್ ಅವರೇ ಎಲಿಮಿನೇಟ್ ಮಾಡಿದ್ದಾರೆ. ಇದು ನಿಜಕ್ಕೂ ಶಾಕಿಂಗ್ ಆಗಿದೆ. ಮಹಿಳಾ ಸ್ಪರ್ಧಿಗಳ ವಿರುದ್ಧ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಇದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಅವರು ಎಲಿಮಿನೇಟ್ ಆಗಿದ್ದು, ಮತ್ತೆ ಬರಬೇಕು ಎನ್ನುವ ಕೂಗು ಇದೆ. ಅವರು ಬರುತ್ತಾರೆ ಅನ್ನೋದು ಅನೇಕರ ನಂಬಿಕೆ. ಆದರೆ, ಇದಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

ಅಕ್ಟೋಬರ್ 19ರ ಎಪಿಸೋಡ್​ನಲ್ಲಿ  ಸುದೀಪ್ ಅವರು ಮನೆಯವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದರು. ಈ ಪ್ರಶ್ನೆಗಳು ಮನೆಯವರು ಮಾಡಿದ ತಪ್ಪನ್ನು ಎತ್ತಿ ತೋರಿಸುತ್ತಾ ಇತ್ತು. ಸುದೀಪ್ ಅವರು ಜಗದೀಶ್​ನ ವಹಿಸಿಕೊಂಡು ಮಾತನಾಡುತ್ತಿದ್ದಾರೆ ಎಂಬ ರೀತಿಯಲ್ಲಿ ಮನೆ ಮಂದಿಗೆ ಕಾಣುತ್ತಾ ಇತ್ತು. ಹೀಗಾಗಿ, ಸುದೀಪ್ ಪ್ರಶ್ನೆ ಕೇಳಿದಾಗ ಅವರು ಜಗದೀಶ್ ಮಾಡಿದ್ದು ತಪ್ಪು ಎಂದು ಹೇಳುವ ರೀತಿಯಲ್ಲಿ ಮಾತನಾಡಲು ಆರಂಭಿಸುತ್ತಿದ್ದರು.

ಈ ವೇಳೆ ಸ್ಪಷ್ಟನೆ ಕೊಡುವಾಗ ಸುದೀಪ್ ಅವರು ಒಂದು ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ‘ನಾನು ಜಗದೀಶ್​ ಅವರನ್ನು ಕ್ಲೀನ್ ಮಾಡಲು ಅಥವಾ ಅವರು ಮಾಡಿದ್ದು ತಪ್ಪಲ್ಲ ಎಂದಲ್ಲ ಹೇಳಲು ಇಲ್ಲಿ ನಿಂತಿಲ್ಲ. ಅವರ ಮಾತಿನ ಮೇಲೆ ನಿಗಾ ಇರಲಿಲ್ಲ. ಈ ಕಾರಣದಿಂದ ಅವರು ಎಲಿಮಿನೇಟ್ ಆದರು. ಇದನ್ನು ಬಿಗ್ ಬಾಸ್ ಸಹಿಸಲ್ಲ. ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’ ಎಂದು ಹೇಳಿದ್ದಾರೆ. ಇದರಿಂದ ಜಗದೀಶ್ ಅವರು ಮರಳಿ ಬರೋದಿಲ್ಲ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಮತ್ತೆ ಬಿಗ್ ಬಾಸ್​ಗೆ ಬರ್ತಾರಾ ಜಗದೀಶ್? ನೆರವೇರುತ್ತಾ ಕೋರಿಕೆ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಂಜಿತ್ ಹಾಗೂ ಜಗದೀಶ್ ಅವರು ಎಲಿಮಿನೇಟ್ ಆಗಿದ್ದಾರೆ. ವಾರದ ಮಧ್ಯೆ ಇವರನ್ನು ಹೊರಕ್ಕೆ ಹಾಕಲಾಗಿದೆ. ಇಂದು (ಅಕ್ಟೋಬರ್ 20) ಜಗದೀಶ್ ಅವರು ಸುದ್ದಿಗೋಷ್ಠಿ ಕೂಡ ಆಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ