ಈ ಆವೃತ್ತಿಯ ಕನ್ನಡ ಬಿಗ್ ಬಾಸ್ ಕಳೆದ ಸೀಸನ್ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ‘ಬಿಗ್ ಬಾಸ್’ ಸುದ್ದಿಯಲ್ಲಿ ಇರುವುದರ ಜೊತೆಗೆ ಸಾಕಷ್ಟು ಟೀಕೆಗಳನ್ನು ಕೂಡ ಪಡೆದುಕೊಳ್ಳುತ್ತಿದೆ ಎಂಬುದು ಸೋಶಿಯಲ್ ಮೀಡಿಯಾ ಮೂಲಕ ಗೊತ್ತಾಗುತ್ತಿದೆ. ಜಗದೀಶ್ ಅವರು ಮಿತಿಮೀರಿ ನಡೆದುಕೊಂಡಿದ್ದೇ ಇದಕ್ಕೆ ಕಾರಣ. ಜಗದೀಶ್ ಅವರನ್ನು ಹೊರಕ್ಕೆ ಹಾಕಲಾಗಿದೆ.
ಜಗದೀಶ್ ಅವರನ್ನು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಿರುವುದು ಗೊತ್ತೇ ಇದೆ. ಅವರನ್ನು ಬಿಗ್ ಬಾಸ್ ಅವರೇ ಎಲಿಮಿನೇಟ್ ಮಾಡಿದ್ದಾರೆ. ಇದು ನಿಜಕ್ಕೂ ಶಾಕಿಂಗ್ ಆಗಿದೆ. ಮಹಿಳಾ ಸ್ಪರ್ಧಿಗಳ ವಿರುದ್ಧ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಇದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಅವರು ಎಲಿಮಿನೇಟ್ ಆಗಿದ್ದು, ಮತ್ತೆ ಬರಬೇಕು ಎನ್ನುವ ಕೂಗು ಇದೆ. ಅವರು ಬರುತ್ತಾರೆ ಅನ್ನೋದು ಅನೇಕರ ನಂಬಿಕೆ. ಆದರೆ, ಇದಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.
ಅಕ್ಟೋಬರ್ 19ರ ಎಪಿಸೋಡ್ನಲ್ಲಿ ಸುದೀಪ್ ಅವರು ಮನೆಯವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದರು. ಈ ಪ್ರಶ್ನೆಗಳು ಮನೆಯವರು ಮಾಡಿದ ತಪ್ಪನ್ನು ಎತ್ತಿ ತೋರಿಸುತ್ತಾ ಇತ್ತು. ಸುದೀಪ್ ಅವರು ಜಗದೀಶ್ನ ವಹಿಸಿಕೊಂಡು ಮಾತನಾಡುತ್ತಿದ್ದಾರೆ ಎಂಬ ರೀತಿಯಲ್ಲಿ ಮನೆ ಮಂದಿಗೆ ಕಾಣುತ್ತಾ ಇತ್ತು. ಹೀಗಾಗಿ, ಸುದೀಪ್ ಪ್ರಶ್ನೆ ಕೇಳಿದಾಗ ಅವರು ಜಗದೀಶ್ ಮಾಡಿದ್ದು ತಪ್ಪು ಎಂದು ಹೇಳುವ ರೀತಿಯಲ್ಲಿ ಮಾತನಾಡಲು ಆರಂಭಿಸುತ್ತಿದ್ದರು.
ಈ ವೇಳೆ ಸ್ಪಷ್ಟನೆ ಕೊಡುವಾಗ ಸುದೀಪ್ ಅವರು ಒಂದು ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ‘ನಾನು ಜಗದೀಶ್ ಅವರನ್ನು ಕ್ಲೀನ್ ಮಾಡಲು ಅಥವಾ ಅವರು ಮಾಡಿದ್ದು ತಪ್ಪಲ್ಲ ಎಂದಲ್ಲ ಹೇಳಲು ಇಲ್ಲಿ ನಿಂತಿಲ್ಲ. ಅವರ ಮಾತಿನ ಮೇಲೆ ನಿಗಾ ಇರಲಿಲ್ಲ. ಈ ಕಾರಣದಿಂದ ಅವರು ಎಲಿಮಿನೇಟ್ ಆದರು. ಇದನ್ನು ಬಿಗ್ ಬಾಸ್ ಸಹಿಸಲ್ಲ. ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’ ಎಂದು ಹೇಳಿದ್ದಾರೆ. ಇದರಿಂದ ಜಗದೀಶ್ ಅವರು ಮರಳಿ ಬರೋದಿಲ್ಲ ಎಂಬುದು ಸ್ಪಷ್ಟವಾಗಿದೆ.
ಇದನ್ನೂ ಓದಿ: ಮತ್ತೆ ಬಿಗ್ ಬಾಸ್ಗೆ ಬರ್ತಾರಾ ಜಗದೀಶ್? ನೆರವೇರುತ್ತಾ ಕೋರಿಕೆ?
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಂಜಿತ್ ಹಾಗೂ ಜಗದೀಶ್ ಅವರು ಎಲಿಮಿನೇಟ್ ಆಗಿದ್ದಾರೆ. ವಾರದ ಮಧ್ಯೆ ಇವರನ್ನು ಹೊರಕ್ಕೆ ಹಾಕಲಾಗಿದೆ. ಇಂದು (ಅಕ್ಟೋಬರ್ 20) ಜಗದೀಶ್ ಅವರು ಸುದ್ದಿಗೋಷ್ಠಿ ಕೂಡ ಆಯೋಜನೆ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.