Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ಸ್ ಕನ್ನಡದ ಹೊಸ ರಿಯಾಲಿಟಿ ಶೋನಿಂದಲೂ ಔಟ್ ಆದ್ರಾ ಜಗದೀಶ್?

ಜಗದೀಶ್ ಅವರು 'ಬಿಗ್ ಬಾಸ್ ಕನ್ನಡ'ದಿಂದ ಹೊರಗುಳಿದ ನಂತರ 'ಬಾಯ್ಸ್ vs ಗರ್ಲ್ಸ್' ಎಂಬ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದಾರೆ. ಆದರೆ, ಇತ್ತೀಚೆಗೆ ನಡೆದ ಗಲಾಟೆಯಲ್ಲಿ ಅವರ ಗನ್‌ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಅವರ ರಿಯಾಲಿಟಿ ಶೋದ ಭವಿಷ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕಲರ್ಸ್ ಕನ್ನಡದ ಹೊಸ ರಿಯಾಲಿಟಿ ಶೋನಿಂದಲೂ ಔಟ್ ಆದ್ರಾ ಜಗದೀಶ್?
ಜಗದೀಶ್
Follow us
ರಾಜೇಶ್ ದುಗ್ಗುಮನೆ
|

Updated on: Jan 25, 2025 | 6:06 PM

ಜಗದೀಶ್ ಅವರು ಸದ್ಯ ಚರ್ಚೆಯಲ್ಲಿ ಇದ್ದಾರೆ. ಶುಕ್ರವಾರ (ಜನವರಿ 25) ನಡೆದ ಗಲಾಟೆಯಲ್ಲಿ ಅವರ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಜಗದೀಶ್ ಹಾಗೂ ಅವರ ಗನ್​ಮ್ಯಾನ್​ನ ಪೊಲೀಸರು ಬಂಧಿಸಿದ್ದಾರೆ. ಇದು ಅವರ ಮುಂದಿನ ರಿಯಾಲಿಟಿ ಶೋ ‘ಬಾಯ್ಸ್ vs ಗರ್ಲ್ಸ್’ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ಎಂಟ್ರಿ ಕೊಟ್ಟರು. ಮೊದಲ ದಿನದಿಂದಲೂ ಅವರು ಸಾಕಷ್ಟು ಗಮನ ಸೆಳೆದರು. ಅವರು ದೊಡ್ಮನೆಯಲ್ಲಿ ಮಾಡಿಕೊಂಡ ವಿವಾದಗಳು ಒಂದೆರಡಲ್ಲ. ಅವರ ಪ್ರತಿ ನಡೆಯೂ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕುವಂತೆ ಮಾಡಿತ್ತು. ಅವರು ಅವಾಚ್ಯ ಶಬ್ದ ಬಳಕೆ ಮಾಡಿ ಸಾಕಷ್ಟು ಟೀಕೆಗೆ ಒಳಗಾಗಬೇಕಾಯಿತು. ಅವರು ದೊಡ್ಮನೆಯಿಂದ ಹೊರ ಹೋಗಲು ಇದುವೇ ಕಾರಣ ಆಯಿತು.

ಸದ್ಯ ಕಲರ್ಸ್ ಕನ್ನಡದವರು ‘ಬಾಯ್ಸ್ vs ಗರ್ಲ್ಸ್’ ಹೆಸರಿನ ಹೊಸ ರಿಯಾಲಿಟಿ ಶೋ ಮಾಡುತ್ತಿದ್ದಾರೆ. ಇದರಲ್ಲಿ ಜಗದೀಶ್ ಅವರು ಕೂಡ ಇದ್ದಾರೆ. ಇದನ್ನು ಪ್ರೋಮೋದಲ್ಲಿ ತೋರಿಸಲಾಗಿದೆ. ಒಂದೊಮ್ಮೆ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿ ಅವರು ಪೊಲೀಸ್ ಕಸ್ಟಡಿಗೆ ಹೋದರೆ ಸಮಸ್ಯೆ ಎದುರಿಸಬೇಕಾಗುತ್ತದೆ. ಫೆಬ್ರವರಿ 1ರಿಂದ ಹೊಸ ರಿಯಾಲಿಟಿ ಶೋ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗಲಿದೆ. ಬಿಗ್ ಬಾಸ್​ನ ಮಾಜಿ ಸ್ಪರ್ಧಿಗಳು ಇದರಲ್ಲಿ ಇದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಕನ್ನಡ ಸೀಸನ್​ 11ರ ಮಾಜಿ ಸ್ಪರ್ಧಿ ಲಾಯರ್​ ಜಗದೀಶ್​ ಬಂಧನ

ಎಲ್ಲಕ್ಕಿಂತ ಮುಖ್ಯವಾಗಿ ಜಗದೀಶ್ ಅವರು ವಿವಾದದ ಮೇಲೆ ವಿವಾದ ಮಾಡಿಕೊಳ್ಳುತ್ತಿದ್ದಾರೆ. ಈ ವಿವಾದಗಳಿಂದ ಅವರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅವರ ಮೇಲೆ ಹಲ್ಲೆ ಪ್ರಯತ್ನ ಕೂಡ ನಡೆದಿದೆ. ಇಷ್ಟೊಂದು ವಿವಾದ ಮಾಡಿಕೊಂಡ ವ್ಯಕ್ತಿಯನ್ನು ರಿಯಾಲಿಟಿ ಶೋನಲ್ಲಿ ಮುಂದುವರಿಸುವುದರಿಂದ ತೊಂದರೆ ಎದುರಾಗಬಹುದು. ಹೀಗಾಗಿ, ಅವರನ್ನು ಶೋನಿಂದ ಹೊರಕ್ಕೆ ಇಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!