ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು?

ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ರಿಲೀಸ್‌ಗೆ ಸಾಕಷ್ಟು ಅಡಚಣೆಗಳು ಎದುರಾಗಿವೆ. ಮದ್ರಾಸ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಇದೀಗ ಚಿತ್ರ ತಂಡ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಪರಿಷ್ಕರಣಾ ಸಮಿತಿ ಮೊರೆ ಹೋಗಲು ನಿರ್ಧರಿಸಿದೆ. ಫೆಬ್ರವರಿ 25ರೊಳಗೆ ಪ್ರಮಾಣಪತ್ರ ಸಿಕ್ಕರೆ ರಿಲೀಸ್ ಸಾಧ್ಯತೆ.

ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು?
ಜನ ನಾಯಗನ್

Updated on: Feb 10, 2026 | 2:28 PM

‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ಆಗಲು ಸಾಕಷ್ಟು ಅಡಚಣೆ ಉಂಟಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್​​​ನಲ್ಲಿ ಕೆವಿಎನ್ ಸಂಸ್ಥೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈಗ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಈ ಮೂಲಕ ತಂಡದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಿನಿಮಾ ಶೀಘ್ರವೇ ತೆರೆಗೆ ಬರುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.

ಜನವರಿ 9ರಂದು ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ಆಗಬೇಕಿತ್ತು. ಹೀಗಾಗಿ ಸೆನ್ಸಾರ್ ಪ್ರಮಾಣ ಪತ್ರಕ್ಕಾಗಿ ಡಿಸೆಂಬರ್​​ನಲ್ಲೇ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ತಂಡಕ್ಕೆ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿರಲಿಲ್ಲ. ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ನಿರ್ಮಾಣ ಸಂಸ್ಥೆ ಕೆವಿಎನ್ ಮದ್ರಾಸ್ ಹೈಕೋರ್ಟ್​​ನಲ್ಲಿ ತುರ್ತು ಅರ್ಜಿ ಸಲ್ಲಿಕೆ ಮಾಡಿತ್ತು.

ಜನವರಿ 9ರಂದು ‘ಸೆನ್ಸಾರ್ ಪ್ರಮಾಣ ಪತ್ರ ನೀಡಿ’ ಎಂದು ಕೋರ್ಟ್​ ಸೆನ್ಸಾರ್ ಮಂಡಳಿಗೆ ಆದೇಶ ನೀಡಿತ್ತು. ಅದೇ ದಿನ ಸಂಜೆ ಮುಖ್ಯ ನ್ಯಾಯಮೂರ್ತಿ ಎಂಎಂ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಅರುಲ್ ಮುರುಗನ್ ಅವರು ಈ ಆದೇಶಕ್ಕೆ ತಡೆ ನೀಡಿದರು.

ಈಗ ಪ್ರಕರಣ ಕೋರ್ಟ್​​ನಲ್ಲೇ ಇದ್ದು ತಿಂಗಳಾಗಿದೆ. ಆದರೆ, ಈವರೆಗೆ ಆದೇಶ ಹೊರ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಕೆವಿಎನ್ ಹಿಂಪಡೆದಿದೆ. ಅಲ್ಲದೆ, ಈ ವಿಷಯವಾಗಿ ತಂಡ ಪರಿಷ್ಕರಣಾ ಸಮಿತಿ ಮೆಟ್ಟಿಲು ಹತ್ತಲಿದೆ. ಅಲ್ಲಿ ಸಿನಿಮಾ ವೀಕ್ಷಣೆ ಆದ ಬಳಿಕ ಸಿನಿಮಾ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ.

ಇದನ್ನೂ ಓದಿ: ಕೊನೆಗೂ ಮಂಡಿಯೂರಿದ ‘ಜನ ನಾಯಗನ್’; ರಿಲೀಸ್ ಮತ್ತಷ್ಟು ವಿಳಂಬ?

ವಿಮರ್ಷೆ ಸಮಿತಿಗೆ ಸಿನಿಮಾ ಸಲ್ಲಿಕೆ ಆದ ಬಳಿಕ 15 ದಿನಗಳಲ್ಲಿ ಸಿನಿಮಾ ರಿವ್ಯೂ ಆಗಿ ಸೆನ್ಸಾರ್ ಪ್ರಮಾಣಪತ್ರ ನೀಡಬೇಕು. ಹೀಗಾಗಿ, ಫೆಬ್ರವರಿ 25ರವೇಳೆಗೆ ಸಿನಿಮಾ ಪ್ರಮಾಣ ಪತ್ರ ಕೈ ಸೇರಿದರೆ ಆ ಬಳಿಕ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಮಧ್ಯೆ ತಂಡಕ್ಕೆ ಮತ್ತೊಂದು ಭಯ ಕೂಡ ಇದೆ. ತಮಿಳುನಾಡಲ್ಲಿ ಶೀಘ್ರವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಅದರ ದಿನಾಂಕ ಘೋಷಣೆ ಆದರೆ, ‘ಜನ ನಾಯಗನ್’ ರಿಲೀಸ್ ಮತ್ತಷ್ಟು ವಿಳಂಬ ಆಗಲಿದೆ. ವಿಜಯ್ ಅವರು ರಾಜಕೀಯಕ್ಕೆ ಕಾಲಿಟ್ಟಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us