AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೌನ್ ಬನೇಗಾ ಕರೋಡ್​ಪತಿ’ ಕಾರ್ಯಕ್ರಮಕ್ಕೆ ಜಯಾ ಬಚ್ಚನ್ ಎಂಟ್ರಿ; ಕಣ್ಣೀರು ಹಾಕಿದ ಅಮಿತಾಭ್  

ಈ ಬಾರಿಯ ‘ಕೆಬಿಸಿ’ ಶೋನಲ್ಲಿ ಅಮಿತಾಭ್ ಬಚ್ಚನ್ ಕುಟುಂಬ ಕಾಣಿಸಿಕೊಂಡಿದೆ. ಅಭಿಷೇಕ್ ಬಚ್ಚನ್, ಜಯಾ ಬಚ್ಚನ್ ವೇದಿಕೆ ಏರಿದ್ದಾರೆ. ಜಯಾ ಬಚ್ಚನ್ ಹೇಳಿದ ಮಾತಿಗೆ ಅಮಿತಾಭ್ ಕಣ್ಣೀರು ಹಾಕಿದ್ದಾರೆ.

‘ಕೌನ್ ಬನೇಗಾ ಕರೋಡ್​ಪತಿ’ ಕಾರ್ಯಕ್ರಮಕ್ಕೆ ಜಯಾ ಬಚ್ಚನ್ ಎಂಟ್ರಿ; ಕಣ್ಣೀರು ಹಾಕಿದ ಅಮಿತಾಭ್  
ಜಯಾ-ಅಮಿತಾಭ್
TV9 Web
| Edited By: |

Updated on: Oct 08, 2022 | 5:09 PM

Share

ನಟ ಅಮಿತಾಭ್ ಬಚ್ಚನ್ (Amitabh Bachchan) ವಯಸ್ಸು 80ರ ಸಮೀಪದಲ್ಲಿದೆ. ಈ ವಯಸ್ಸಿನಲ್ಲೂ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ಆರೋಗ್ಯದ ಕಡೆ ಗಮನ ಹರಿಸುತ್ತಾ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು, ಕಿರುತೆರೆಯಲ್ಲಿ ಪ್ರಸಾರವಾಗುವ ‘ಕೌನ್ ಬನೇಗಾ ಕರೋಡ್​ಪತಿ’ (KBC) ಶೋನ ನಡೆಸಿಕೊಡುವ ಜವಾಬ್ದಾರಿಯೂ ಅಮಿತಾಭ್ ಬಚ್ಚನ್ ಮೇಲಿದೆ. ಸದ್ಯ, 14ನೇ ಸೀಸನ್ ನಡೆಯುತ್ತಿದೆ. ಈ ಬಾರಿಯ ವೇದಿಕೆ ಮೇಲೆ ಅಮಿತಾಭ್ ಪತ್ನಿ ಜಯಾ ಬಚ್ಚನ್ ಕಾಣಿಸಿಕೊಂಡಿದ್ದಾರೆ. ಅವರು ಹೇಳಿದ ಮಾತಿಗೆ ಅಮಿತಾಭ್ ಭಾವುಕರಾಗಿದ್ದಾರೆ.

ಈ ಬಾರಿಯ ‘ಕೆಬಿಸಿ’ ಶೋನಲ್ಲಿ ಅಮಿತಾಭ್ ಬಚ್ಚನ್ ಕುಟುಂಬ ಕಾಣಿಸಿಕೊಂಡಿದೆ. ಅಭಿಷೇಕ್ ಬಚ್ಚನ್, ಜಯಾ ಬಚ್ಚನ್ ವೇದಿಕೆ ಏರಿದ್ದಾರೆ. ಜಯಾ ಬಚ್ಚನ್ ಹೇಳಿದ ಮಾತಿಗೆ ಅಮಿತಾಭ್ ಕಣ್ಣೀರು ಹಾಕಿದ್ದಾರೆ. ಅವರು ಹೇಳಿದ ವಿಚಾರ ಏನು ಎಂಬುದನ್ನು ರಿವೀಲ್ ಮಾಡಿಲ್ಲ. ಅದು ಏನು ಎಂಬುದು ಅಕ್ಟೋಬರ್ 11ರ ಎಪಿಸೋಡ್​ನಲ್ಲಿ ತಿಳಿಯಲಿದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಅಮಿತಾಭ್ ಲವ್ ಸ್ಟೋರಿ

ವಿಶೇಷ ಎಂದರೆ ಅಮಿತಾಭ್​ ಹಾಗೂ ಜಯಾ ಅವರದ್ದು ಪ್ರೇಮ ವಿವಾಹ. ಇಬ್ಬರೂ ಪರಸ್ಪರ ಪ್ರೀತಿಸಿ, ಕುಟುಂಬದವರ ಒಪ್ಪಿಗೆ ಪಡೆದು 1973ರ ಜೂನ್​ 3ರಂದು ಮದುವೆ ಆದರು. ಅಮಿತಾಭ್​ ಹಾಗೂ ಜಯಾ ಮೊದಲ ಬಾರಿಗೆ ಭೇಟಿ ಮಾಡಿದ್ದು ಬನ್ಸಿ ಬಿರ್ಜು (1972) ಚಿತ್ರದ ಸೆಟ್​ನಲ್ಲಿ. ಈ ಸಿನಿಮಾದಲ್ಲಿ ಇಬ್ಬರೂ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ತೆರೆಕಂಡ ಮರುವರ್ಷವೆ ‘ಜಂಜೀರ್’​ ಚಿತ್ರದಲ್ಲೂ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದರು.

ಜಂಜೀರ್​ ಸಿನಿಮಾದಲ್ಲಿ ಅಮಿತಾಭ್​ ಹಾಗೂ ಜಯಾ ಹತ್ತಿರವಾದರು. ಈ ಚಿತ್ರ ಹಿಟ್​ ಆದರೆ ಜಯಾ ಅವರನ್ನು ಲಂಡನ್​ಗೆ ಕರೆದುಕೊಂಡು ಹೋಗಿ ಸೆಲೆಬ್ರೇಟ್​ ಮಾಡಬೇಕು ಎನ್ನುವ ಕನಸನ್ನು ಅಮಿತಾಭ್​ ಕಂಡಿದ್ದರು. ಈ ವಿಚಾರ ಅಮಿತಾಭ್​ ತಂದೆ ಹರಿವಂಶ್​ ರೈ ಬಚನ್​ಗೆ ತಿಳಿಯಿತು. ಆಗ ಅವರು ಹೇಳಿದ್ದು ಒಂದೇ ಮಾತು. ‘ನೀವು ವಿದೇಶಕ್ಕೆ ಹೋಗುವುದಾದರೆ ಮೊದಲು ಮದುವೆ ಆಗಿ. ಆ ನಂತರ ವಿದೇಶಕ್ಕೆ ಹೋಗೋಕೆ ನನ್ನ ಅಭ್ಯಂತರವಿಲ್ಲ’ ಎಂದಿದ್ದರು. ಅಂತೆಯೇ 1973ರಲ್ಲಿ ಅಮಿತಾಭ್​-ಜಯಾ ಮದುವೆ ಆದರು. ನಂತರ ಜಯಾ ಹಾಗೂ ಅಮಿತಾಭ್​ ಅಭಿಮಾನ್​, ಚುಪ್​ಚುಪ್​ಕೆ, ಶೋಲೆ, ಕಭಿ ಖುಷಿ ಕಭಿ ಗಂ ಸಿನಿಮಾಗಳಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ